Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ I ಅನಧಿಕೃತ ವೈದ್ಯಕೀಯ ವೃತಿ ನಡೆಸುತ್ತರುವವರ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

ಕರುನಾಡು ಘರ್ಜುನೆ ಸುದ್ದಿ ಗದಗ ಜೂನ್ 23: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಹೆಜ್ಜೆ ಇಟ್ಟಿದ್ದು, ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೋಳ್ಳಲು ‘ಜಿಲ್ಲಾ ಮಟ್ಟದ ವಿಶೇಷ ಪಡೆ’ಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.…

ಕರುನಾಡು ಘರ್ಜುನೆ ಸುದ್ದಿ ಗದಗ ಜೂನ್ 23: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಹೆಜ್ಜೆ ಇಟ್ಟಿದ್ದು, ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೋಳ್ಳಲು ‘ಜಿಲ್ಲಾ ಮಟ್ಟದ ವಿಶೇಷ ಪಡೆ’ಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜೂನ್ 11 ಗುರುವಾರ ರಂದು ‘ಜಿಲ್ಲಾ ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಪಾಸಣೆ ವೇಳೆ ಪತ್ತೆಯಾದ ಮೂವರು ನಕಲಿ ವೈದ್ಯರಿಗೆ ತಲಾ 50 ಸಾವಿರ ರೂಪಾಯಿಗಳ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗಿದ್ದು, ಅವರಿಂದ ಸಂಗ್ರಹವಾಗುವ ದಂಡದ ಮೊತ್ತವನ್ನು ಸರ್ಕಾರಕ್ಕೆ ಭರಣ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಅಡಿ ನೋಂದಣಿ ಮಾಡಿಕೊಳ್ಳದೆ ನಡೆಯುತ್ತಿರುವ ಯಾವುದೇ ಖಾಸಗಿ ಆಸ್ಪತ್ರೆ, ಲ್ಯಾಬ್, ಸ್ಕಾ÷್ಯನಿಂಗ್ ಸೆಂಟರ್, ಬ್ಲಡ್ ಬ್ಯಾಂಕ್ ಹಾಗೂ ಇತರೆ ಆರೋಗ್ಯ ಸಂಸ್ಥೆಗಳು ಈ ಪ್ರಕಟಣೆ ಹೊರಡಿಸಿದ 15 ದಿನಗಳೊಳಗೆ ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೋಂದಣಿಗೆ ಅರ್ಜಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಕಾಯ್ದೆ ಪ್ರಕಾರ ಕಠಿಣ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಹೇಳಿದರು.

ನೋಂದಾಯಿತ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ತಮ್ಮ ಸಂಸ್ಥೆಯ ನೋಂದಣಿ ಅವಧಿ ಮುಗಿಯುವ ಮೂರು ತಿಂಗಳು ಮೊದಲೇ, ಅಗತ್ಯ ದಾಖಲೆಗಳೊಂದಿಗೆ ನವೀಕರಣಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.

ಯಾವುದೇ ಸರ್ಕಾರಿ ಆಸ್ಪತ್ರೆಗಳ ಆವರಣದಿಂದ 200 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳು ಕಾರ್ಯನಿರ್ವಹಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಇದೆ ಸಂದರ್ಭದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಎಸ್.ಎಸ್.ನೀಲಗುಂದ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಗೂ ಕೆ.ಪಿ.ಎಮ್.ಇ, ನೋಡಲ್ ಅಧಿಕಾರಿ,ಡಾ| ಹೆಚ್.ಎಲ್.ಗಿರಡ್ಡಿ, ಐ.ಎಂ.ಎ ಅಧ್ಯಕ್ಷ ಡಾ| ಶ್ರೀಧರ ಕುರಡಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಜುಬೇದ ತಿಗಳೆರ,ಗದಗ ತಾಲೂಕಾ ಆರೋಗ್ಯಾಧಿಕಾರಿಳಾದ ಡಾ|| ಪ್ರೀತ್ ಖೋನಾ, ಡಾ|| ಬಿ. ಎಸ್ ಭಜಂತ್ರಿ, ಡಾ|| ಸುಭಾಸಚಂದ್ರ ದಾಯಗೊಂಡ, ಡಾ| ಸಂತೋಷಗೌಡ ಪಾಟೀಲ,ಡಾ| ಆರ್. ಸಿ ಕೊರವನವರ ಸೇರಿದಂತೆ ಉಪಸ್ಥಿತರಿದ್ದರು.

Editor

Leave a comment