Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಕರುನಾಡು ಘರ್ಜನೆ ಸುದ್ದಿ ಗದಗ 24: ಸುಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾದ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ ಬಂದಿರುವ ವಿಚಾರವು ವಿವಿಧ ಸುದ್ದಿ ಮಾಧ್ಯಮಗಳ ಮೂಲಕ ತಿಳಿದುಬಂದಿದ್ದು, ಇದು ಸಾರ್ವಜನಿಕರಲ್ಲಿ ಮತ್ತು ಲಕ್ಷಾಂತರ ಭಕ್ತ…

ಕರುನಾಡು ಘರ್ಜನೆ ಸುದ್ದಿ ಗದಗ 24: ಸುಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾದ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಜೀವ ಬೆದರಿಕೆ ಬಂದಿರುವ ವಿಚಾರವು ವಿವಿಧ ಸುದ್ದಿ ಮಾಧ್ಯಮಗಳ ಮೂಲಕ ತಿಳಿದುಬಂದಿದ್ದು, ಇದು ಸಾರ್ವಜನಿಕರಲ್ಲಿ ಮತ್ತು ಲಕ್ಷಾಂತರ ಭಕ್ತ ಸಮೂಹದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶವನ್ನು ಉಂಟುಮಾಡಿದೆ ಶ್ರೀಮಠದ ಭಕ್ತರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಾ ಎಚ್. ಹಡಪದ ಅವರು ಈ ಕುರಿತು ತಮ್ಮ ತೀವ್ರ ಕಳಕಳಿ ಮತ್ತು ಆಗ್ರಹವನ್ನು ಮಂಡಿಸಿದ್ದಾರೆ:
ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಬಂದಿರುವ ಈ ಜೀವ ಬೆದರಿಕೆ ಕರೆಯನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಈ ಬೆದರಿಕೆಯ ಮೂಲವನ್ನು ಪತ್ತೆಹಚ್ಚಿ, ಇದರ ಹಿಂದೆ ಇರುವ ದುಷ್ಟ ಶಕ್ತಿಗಳನ್ನು ತಕ್ಷಣವೇ ಬಂಧಿಸಬೇಕು. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಪೂಜ್ಯ ಶ್ರೀಗಳ ಸುರಕ್ಷತೆ ಕೇವಲ ಶ್ರೀಮಠದ ಜವಾಬ್ದಾರಿಯಲ್ಲ, ಅದು ಸರ್ಕಾರದ ಕರ್ತವ್ಯವಾಗಿದೆ. ಸರ್ಕಾರವು ಶ್ರೀಗಳಿಗೆ ಸೂಕ್ತ ಹಾಗೂ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.
ಗದಗಿನ ವೀರೇಶ್ವರ ಪುಣ್ಯಾಶ್ರಮವು ಸರ್ವಧರ್ಮ ಸಮನ್ವಯದ ಸಂಕೇತವಾಗಿದೆ. ಇಂತಹ ಪವಿತ್ರ ಕ್ಷೇತ್ರದ ಪೀಠಾಧಿಪತಿಗಳಿಗೆ ಬೆದರಿಕೆ ಹಾಕುವುದು ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಕೆಡಿಸುವ ವ್ಯವಸ್ಥಿತ ಸಂಚಾಗಿದೆ. ಇದಕ್ಕೆ ಯಾರೂ ಜಗ್ಗುವುದಿಲ್ಲ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಒಟ್ಟಾಗಿ ಪೂಜ್ಯ ಶ್ರೀಗಳ ಬೆಂಬಲಕ್ಕೆ ನಿಂತಿದ್ದೇವೆ. ಧರ್ಮದ ರಕ್ಷಣೆ ಮತ್ತು ಸಮಾಜದ ಶಕ್ತಿಯಾಗಿರುವ ಶ್ರೀಮಠಕ್ಕೆ ಎದುರಾಗಿರುವ ಇಂತಹ ಸವಾಲುಗಳನ್ನು ಕಾನೂನುಬದ್ಧವಾಗಿ ಎದುರಿಸಲು ಭಕ್ತ ಸಮೂಹ ಸದಾ ಸಿದ್ಧವಿದೆ.
ನಮ್ಮ ಪೂಜ್ಯರ ಸುರಕ್ಷತೆ – ನಮ್ಮೆಲ್ಲರ ಜವಾಬ್ದಾರಿ!” ಎಂಬ ಧ್ಯೇಯದೊಂದಿಗೆ ನಾವೆಲ್ಲರೂ ಕಲ್ಲಯ್ಯಜ್ಜನವರೊಂದಿಗೆ ಇದ್ದೇವೆ. ಪೊಲೀಸರು ವಿಳಂಬ ಮಾಡದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಜೈಲಿಗಟ್ಟಬೇಕು ಎಂದು ಈ ಮೂಲಕ ಕಟ್ಟುನಿಟ್ಟಾಗಿ ಆಗ್ರಹಿಸುತ್ತಿದ್ದೇವೆ.

ಪೂಜ್ಯರ ಜೀವಕ್ಕೆ ಬೆದರಿಕೆ: ಭಕ್ತರ ಆಕ್ರೋಶ, ತಕ್ಷಣದ ಬಂಧನಕ್ಕೆ ಆಗ್ರಹ*
ಸಂಗೀತ ಮತ್ತು ಆಧ್ಯಾತ್ಮದ ಮೂಲಕ ಸರ್ವಧರ್ಮ ಸಮನ್ವಯದ ಬೆಳಕು ಚೆಲ್ಲುತ್ತಿರುವ ಗದುಗಿನ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ ಶ್ರೀ ಕಲ್ಲಯ್ಯಜ್ಜನವರಿಗೆ ಬಂದಿರುವ ಜೀವ ಬೆದರಿಕೆ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ಆಘಾತವಾಗಿದೆ. ಪೀಠಾಧಿಪತಿಗಳಿಗೆ ಬೆದರಿಕೆ ಹಾಕಿ ಸಮಾಜದ ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳ ಕೃತ್ಯ ಅತ್ಯಂತ ಖಂಡನೀಯ. ಸರ್ಕಾರ ಮತ್ತು ಪೊಲೀಸ್ ಇಲಾಖೆ ತಕ್ಷಣವೇ ಇದರ ಮೂಲವನ್ನು ಪತ್ತೆಹಚ್ಚಿ ತಪ್ಪಿತಸ್ಥರನ್ನು ಬಂಧಿಸಬೇಕು. ಪೂಜ್ಯ ಶ್ರೀಗಳ ಸುರಕ್ಷತೆ ಸರ್ಕಾರದ ಕರ್ತವ್ಯವಾಗಿದ್ದು, ತಕ್ಷಣವೇ ಅವರಿಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಬೇಕು. ನಾವೆಲ್ಲ ಭಕ್ತರು ಶ್ರೀಮಠದೊಂದಿಗೆ ಸದಾ ಕಾಲ ಜೊತೆಯಾಗಿ ನಿಲ್ಲಲಿದ್ದೇವೆ.
– ಕೃಷ್ಣಾ ಎಚ್. ಹಡಪದ
(ಸಾಮಾಜಿಕ ಕಾರ್ಯಕರ್ತರು ಹಾಗೂ ಶ್ರೀಮಠದ ಭಕ್ತರು, ಗದಗ)

ಕೃಷ್ಣಾ ಎಚ್. ಹಡಪದ
9845650612

Editor

Leave a comment