Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ I ಗದಗ ಶಹರ ವಲಯದ ಶಾಲಾ ವಾಹನಗಳ ಚಾಲಕರ ಸಭೆ: ಸುರಕ್ಷಿತ ಸಂಚಾರಕ್ಕೆ ಕಟ್ಟುನಿಟ್ಟಿನ ಸೂಚನೆ

ಕರುನಾಡು ಘರ್ಜುನೆ ಸುದ್ದಿ ಗದಗ, ಜೂನ್ 25: ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಗದಗ ಶಹರ ವಲಯದ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಾಲಾ ವಾಹನಗಳ ಚಾಲಕರು ಮತ್ತು ನಿರ್ವಾಹಕರ ಸಭೆಯನ್ನು ಬುಧವಾರ ಗದಗ ನಗರದ…

ಕರುನಾಡು ಘರ್ಜುನೆ ಸುದ್ದಿ ಗದಗ, ಜೂನ್ 25: ಶಾಲಾ ಮಕ್ಕಳ ಸುರಕ್ಷಿತ ಸಂಚಾರಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಗದಗ ಶಹರ ವಲಯದ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಶಾಲಾ ವಾಹನಗಳ ಚಾಲಕರು ಮತ್ತು ನಿರ್ವಾಹಕರ ಸಭೆಯನ್ನು ಬುಧವಾರ ಗದಗ ನಗರದ ಶಹರ ಸಂಪನ್ಮೂಲ ಕೇಂದ್ರದಲ್ಲಿ ನಡೆಸಲಾಯಿತು.

ಪ್ರಾದೇಶಿಕ‌ ಸಾರಿಗೆ ಇಲಾಖೆಯ ಅಧಿಕಾರಿ ಅರುಣಕುಮಾರ ಕಟ್ಟಿಮನಿ ಮಾತನಾಡಿ, ಶಾಲಾ ವಾಹನಗಳ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ಹಾಗೂ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಶಾಲಾ ವಾಹನ ಚಾಲಕರು ಮತ್ತು ನಿರ್ವಾಹಕರು ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಚಾಲನೆ ಮಾಡಬೇಕು. ವಾಹನಗಳನ್ನು ಓವರ್‌ಟೇಕ್ ಮಾಡುವಾಗ ಅಥವಾ ಇತರ ವಾಹನಗಳನ್ನು ಹಿಂದಿಕ್ಕುವ ವೇಳೆ ಯಾವುದೇ ರೀತಿಯ ಅಜಾಗರೂಕತೆ ತೋರಬಾರದು ಎಂದು ಎಚ್ಚರಿಕೆ ನೀಡಿದರು.

ರಸ್ತೆಗಳಲ್ಲಿ ನಿಯಮಬದ್ಧವಾಗಿ ವಾಹನ ಚಲಾಯಿಸುವುದು, ಮಕ್ಕಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವುದು ಮತ್ತು ಶಾಲಾ ವಾಹನಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.

ಶಾಲಾ ವಾಹನಗಳಲ್ಲಿ ಮಕ್ಕಳನ್ನು ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಕೂರಿಸಬಾರದು. ಶಾಲಾ ವಾಹನದ ವೇಗವನ್ನು ಗಂಟೆಗೆ 40 ಕಿ.ಮೀ. ಮಿತಿಯೊಳಗೆ ಇಟ್ಟುಕೊಳ್ಳಬೇಕು. ವಾಹನದ ಸೀಟುಗಳು, ಬಾಗಿಲುಗಳು ಹಾಗೂ ಲಾಕ್ ವ್ಯವಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತಿರಬೇಕು. ವಾಹನಗಳ ಫಿಟ್ನೆಸ್ ಪ್ರಮಾಣಪತ್ರ, ವಿಮೆ ಹಾಗೂ ಇತರೆ ದಾಖಲೆಗಳನ್ನು ನಿಯಮಿತವಾಗಿ ನವೀಕರಿಸಿಕೊಂಡಿರಬೇಕು ಎಂದು ಸೂಚಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಎಂ ಮುಂದಿನಮನಿ ಸಭೆಯಲ್ಲಿ ಮಾತನಾಡಿ, ಶಾಲಾ ವಾಹನಗಳಲ್ಲಿ ಜಿಪಿಎಸ್ ವ್ಯವಸ್ಥೆ ಅಳವಡಿಕೆ ಕಡ್ಡಾಯವಾಗಿದ್ದು, ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಅಗ್ನಿಶಾಮಕ ಉಪಕರಣಗಳು ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಕಡ್ಡಾಯವಾಗಿ ವಾಹನಗಳಲ್ಲಿ ಇರಬೇಕು. ವಾಹನ ಚಾಲಕರಿಗೆ ಸಂಚಾರ ನಿಯಮಗಳ ಬಗ್ಗೆ ನಿರಂತರ ಅರಿವು ಮತ್ತು ತರಬೇತಿ ನೀಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಇದಲ್ಲದೆ, ಶಾಲಾ ವಾಹನ ಚಾಲಕರು ಮಕ್ಕಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಶಾಲಾ ವಾಹನದ ಒಳಗೆ ಶಿಸ್ತು ಮತ್ತು ಸುರಕ್ಷತೆಯನ್ನು ಕಾಪಾಡಬೇಕು ಎಂದು ಸೂಚಿಸಿದರು. ವಾಹನ ಚಾಲನೆಯ ಸಮಯದಲ್ಲಿ ಮೊಬೈಲ್ ಫೋನ್ ಬಳಕೆ ಮಾಡಬಾರದು ಹಾಗೂ ಯಾವುದೇ ರೀತಿಯ ನಿರ್ಲಕ್ಷ್ಯ ಅಥವಾ ಅಜಾಗರೂಕ ಚಾಲನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ವಾಹನಗಳ ತಾಂತ್ರಿಕ ಸ್ಥಿತಿ, ಬ್ರೇಕ್ ವ್ಯವಸ್ಥೆ, ಟೈರ್‌ಗಳ ಗುಣಮಟ್ಟ ಮತ್ತು ಇತರೆ ಸುರಕ್ಷತಾ ಅಂಶಗಳ ಬಗ್ಗೆ ಸಹ ಪರಿಶೀಲನೆ ನಡೆಸಲಾಯಿತು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹೊರಡಿಸಿರುವ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಅಧಿಕಾರಿಗಳಾದ ಎಸ್ ಸಿ ಪ್ರಭಯ್ಯನಮಠ, ಎಸ್ ಆರ್ ನದಾಫ್, ಎಂ ಎ ಯರಗುಡಿ, ಮುರಳಿ ಸೋಲಾಪುರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳು, ಗದಗ ನಗರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು, ಶಾಲಾ ವಾಹನಗಳ ಚಾಲಕರು ಹಾಗೂ ನಿರ್ವಾಹಕರು ಭಾಗವಹಿಸಿದ್ದರು.

ಪ್ರಮುಖಾಂಶಗಳು
📌 ಶಾಲಾ ವಾಹನಗಳ ವೇಗ ಗಂಟೆಗೆ 40 ಕಿ.ಮೀ. ಮಿತಿಯೊಳಗೆ ಇರಬೇಕು.
📌 ವಾಹನಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯ.
📌 ಫಸ್ಟ್ ಎಯ್ಡ್ ಕಿಟ್ ಹಾಗೂ ಅಗ್ನಿಶಾಮಕ ಉಪಕರಣ ಕಡ್ಡಾಯವಾಗಿ ಇರಬೇಕು.
📌 ಆಸನ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕೂರಿಸಬಾರದು.
📌 ಸಂಚಾರ ನಿಯಮಗಳ ಉಲ್ಲಂಘನೆಗೆ ಕಾನೂನು ಕ್ರಮ.
📌 ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಚಾಲಕರಿಗೆ ಸೂಚನೆ.

Editor

Leave a comment