Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಗಾನ ನಿಲ್ಲಿಸಿದ ಗಾನ ಕೋಗಿಲೆ ಎಸ್. ಜಾನಕಿ ;ವಿಧಿವಶ…!

ಕರುನಾಡು ಘರ್ಜನೆ ಸುದ್ದಿ ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ…

ಕರುನಾಡು ಘರ್ಜನೆ ಸುದ್ದಿ ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ.

ಎಸ್ ಜಾನಕಿ ಅವರು ಮೈಸೂರಿನಲ್ಲಿ ವಾಸವಿದ್ದರು, ಅವರ ಆರೋಗ್ಯವನ್ನು ನವೀನ್ ಎಂಬ ಕೇರ್ ಟೇಕರ್ ನೋಡಿಕೊಳ್ಳುತ್ತಿದ್ದರು. ಇಂದು ಸಂಜೆ ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತ ಆಗಿದ್ದು, ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಅವರು ಚಿಕಿತ್ಸೆಗೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಜಾನಕಿ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯವನ್ನು ಹರಿಸಿದರು.ದೀಪವು ನಿನ್ನದೆ, ಗಾಳಿಯೂ ನಿನ್ನದೆ, ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೇ’, ‘ಯುಗ ಯುಗಾದಿ ಕಳೆದರೂ’, ‘ಹೇಳೇ ಗೆಳತಿ ಬಾನಲ್ಲು ನೀನೆ ಭುವಿಯಲ್ಲು ನೀನೆ’, ‘ಬಿಸಿಲಾದರೇನು ಮಳೆಯಾದರೇನು’ ಸೋಲೆ ಇಲ್ಲ, ಅಂತಹ ಅಸಂಖ್ಯಾತ ಸುಮಧುರ ಕನ್ನಡ ಗೀತೆಗಳಿಗೆ ಅವರು ದನಿಯಾಗಿದ್ದಾರೆ.

ಎಸ್. ಜಾನಕಿ ಅವರಿಗೆ ಹಲವು ರಾಷ್ಟ್ರಪ್ರಶಸ್ತಿಗಳು, ವಿವಿಧ ರಾಜ್ಯಗಳ ಪ್ರಶಸ್ತಿಯನ್ನು ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ಇತ್ತು ಸನ್ಮಾನಿಸಿದೆ. ಇನ್ನು ಇತ್ತೀಚಿನ ವರ್ಷದಲ್ಲಿ ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ, ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯರ ಬಗ್ಗೆ ಅಸಡ್ಡೆ ಇರುವುದನ್ನು ವಿರೋಧಿಸಿ, ಎಸ್. ಜಾನಕಿಯವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದರು.

 

ಗಾನ ನಿಲ್ಲಿಸಿದ ಗಾನ ಕೋಗಿಲೆ ಎಸ್. ಜಾನಕಿ ;ವಿಧಿವಶ…!

 

Editor

Leave a comment