Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ I ₹1.37 ಲಕ್ಷ ತಾಮ್ರದ ಪೈಪ್ ಕಳ್ಳತನ ಭೇದಿಸಿದ ಗದಗ ಪೊಲೀಸರು.

ಕರುನಾಡು ಘರ್ಜುನೆ ಸುದ್ದಿ ಗದಗ: ಸಾರ್ವಜನಿಕ ಆಸ್ಪತ್ರೆಯ ಆಸ್ತಿಯನ್ನೇ ಗುರಿಯಾಗಿಸಿಕೊಂಡು ತಾಮ್ರದ ಪೈಪ್‌ಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಗದಗದ ಬೆಟಗೇರಿ ಬಡಾವಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಕಳುವಾದ ಪೈಪ್‌ಗಳ ಪೈಕಿ ₹55 ಸಾವಿರ ಮೌಲ್ಯದ ತಾಮ್ರದ ಪೈಪ್‌ಗಳನ್ನು…

ಕರುನಾಡು ಘರ್ಜುನೆ ಸುದ್ದಿ ಗದಗ: ಸಾರ್ವಜನಿಕ ಆಸ್ಪತ್ರೆಯ ಆಸ್ತಿಯನ್ನೇ ಗುರಿಯಾಗಿಸಿಕೊಂಡು ತಾಮ್ರದ ಪೈಪ್‌ಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಗದಗದ ಬೆಟಗೇರಿ ಬಡಾವಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಕಳುವಾದ ಪೈಪ್‌ಗಳ ಪೈಕಿ ₹55 ಸಾವಿರ ಮೌಲ್ಯದ ತಾಮ್ರದ ಪೈಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಜೂನ್ 24, 2026ರಂದು ಗದಗ ನಗರದ ಕೆಸಿ ರಾಣಿ ರಸ್ತೆಯಲ್ಲಿರುವ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಗೋಡೆಗಳಿಗೆ ಅಳವಡಿಸಲಾಗಿದ್ದ ಸುಮಾರು 250 ಮೀಟರ್ ಉದ್ದದ ತಾಮ್ರದ ಪೈಪ್‌ಗಳನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಕಳುವಾದ ವಸ್ತುಗಳ ಒಟ್ಟು ಮೌಲ್ಯ ₹1,37,000 ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಅಜಯ್ ಪ್ರಕಾಶ ಬಸರಿಗಿಡದ ಅವರು ನೀಡಿದ ದೂರಿನ ಮೇರೆಗೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 56/2026ರಡಿ ಬಿಎನ್‌ಎಸ್-2023ರ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ, ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹಾಂತೇಶ ಸಜ್ಜನ ಅವರ ಮಾರ್ಗದರ್ಶನದಲ್ಲಿ ಹಾಗೂ ಬೆಟಗೇರಿ ವೃತ್ತದ ಸಿಪಿಐ ಧೀರಜ್ ಬಿ. ಸಿಂಧೆ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಯಿತು.

ಜುಲೈ 12, 2026ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಗದಗ ನಗರದ ವೀರನಾರಾಯಣ ಬಡಾವಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಯಿತು.

ಬಂಧಿತ ಆರೋಪಿಗಳು:

ಯಲ್ಲಪ್ಪ ರಾಜು ಗುಡಿಮನಿ (26) – ಸಿದ್ದಾರ್ಥನಗರ, ಸಂಭಾಪುರ ರಸ್ತೆ, ಗದಗ.

ಮಂಜುನಾಥ ಶಂಕ್ರಪ್ಪ ಚವಡಿ (23) – ಎಪಿಎಂಸಿ ಹಮಾಲರ ಪ್ಲಾಟ್, ಗದಗ.

ವಿಚಾರಣೆ ವೇಳೆ ಆರೋಪಿಗಳಿಂದ ಕಳುವಾಗಿದ್ದ ತಾಮ್ರದ ಪೈಪ್‌ಗಳ ಪೈಕಿ 100 ಮೀಟರ್ ಉದ್ದದ, ₹55,000 ಮೌಲ್ಯದ ತಾಮ್ರದ ಪೈಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿದ ಕಳುವಾದ ವಸ್ತುಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.

ಪ್ರಕರಣವನ್ನು ಭೇದಿಸುವಲ್ಲಿ ಪಿಎಸ್‌ಐ ಮಾರುತಿ ಎಸ್. ಜೋಗದಂಡಕರ, ಎಎಸ್‌ಐಗಳು ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿ ಮಹತ್ವದ ಪಾತ್ರವಹಿಸಿದ್ದು, ಅವರ ಕಾರ್ಯಕ್ಷಮತೆಯನ್ನು ಮೆಚ್ಚಿದ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಅವರು ತನಿಖಾ ತಂಡಕ್ಕೆ ಸೂಕ್ತ ಬಹುಮಾನ ಘೋಷಿಸಿದ್ದಾರೆ.

Editor

Leave a comment