Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗದಲ್ಲಿ ಅಸಂಘಟಿತ ಕಾರ್ಮಿಕರ ಕಾರ್ಡ್ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ.

ಕರುನಾಡು ಘರ್ಜುನೆ ಸುದ್ದಿ ಗದಗ: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ನಗರದ ಎಸ್.ಎಂ. ಕೃಷ್ಣ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ…

ಕರುನಾಡು ಘರ್ಜುನೆ ಸುದ್ದಿ ಗದಗ: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದಿಂದ ನಗರದ ಎಸ್.ಎಂ. ಕೃಷ್ಣ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ ಅಸಂಘಟಿತ ಕಾರ್ಮಿಕರ ನೋಂದಣಿ ಕಾರ್ಯವನ್ನು ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ‘ಜಿಲ್ಲೆಯಲ್ಲಿ ಇನ್ನೂಅಸಂಘಟಿತ ವಲಯದ ಹಲವಾರು ಕಾರ್ಮಿಕರಿದ್ದು, ಅವರನ್ನು ಗುರುತಿಸಿ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಅಗತ್ಯವಿದೆ. ಗದಗ ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಮಾರಾಠೆ ಹಾಗೂ ಗೌರವಾಧ್ಯಕ್ಷ ಕುಮಾರ್ ಕಟ್ಟಿಮನಿ ಅವರ ನೇತೃತ್ವದ ಪದಾಧಿಕಾರಿಗಳ ತಂಡವು ಇಲಾಖೆಯೊಂದಿಗೆ ಈ ಕುರರಿತು ಸಮಾಲೋಚನೆ ನಡೆಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಹಳ್ಳಿಗಳಲ್ಲಿರುವ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ, ಹಂತ ಹಂತವಾಗಿ ನೋಂದಣಿ ಅಭಿಯಾನ ವಿಸ್ತರಿಸಲಾಗುವುದು’ಎಂದು ತಿಳಿಸಿದರು.

ಹಿರಿಯ ಪತ್ರಕರ್ತ ಅನಂತ ಕಾರ್ಕಳ ಮಾತನಾಡಿ, ‘ಕಾರ್ಮಿಕ ಇಲಾಖೆಯು ಪತ್ರಕರ್ತರ ಸಂಘಟನೆಯೊಂದಿಗೆ ಕೈಜೋಡಿಸಿ ಈ ಪ್ರಕ್ರಿಯೆಯನ್ನು ಇನ್ನಷ್ಟು ತ್ವರಿತಗೊಳಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಶೀಘ್ರವಾಗಿ ಕಾರ್ಡ್‌ಗಳನ್ನು ವಿತರಿಸುವ ಮೂಲಕ ಸರ್ಕಾರದ ಯೋಜನೆಗಳ ಮೂಲ ಉದ್ದೇಶ ಮತ್ತು ಅದರ ಪ್ರಯೋಜನಗಳು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು’ ಎಂದು ಆಶಯ ವ್ಯಕ್ತಪಡಿಸಿದರು.

ಕೌನ್ಸಿಫ್ ಸದಸ್ಯರಾದ ಬಸವರಾಜ್ ಕಡೆಮನಿ ಅವರು, ‘ಅಸಂಘಟಿತ ಕಾರ್ಮಿಕರ ನೋಂದಣಿ ಕಾರ್ಯಕ್ರಮವನ್ನು ನಮ್ಮ ವಾರ್ಡಿನಲ್ಲಿ ಮಾಡಿದ್ದು ಬಹಳಷ್ಟು ಸಂತೋಷದ ವಿಷಯ. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ಅಧ್ಯಕ್ಷ ಅನಿಲ್ ಸಿದ್ದಮ್ಮನಹಳ್ಳಿ ಹಾಗೂ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಮರಾಠೆ ಅವರು ಅಸಂಘಟಿತ ಕಾರ್ಮಿಕರ ಕಾರ್ಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ. ಕಾರ್ಮಿಕರು ಈ ಕಾರ್ಡ್‌ನ ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರದ ಸೌಲಭ್ಯಗಳನ್ನು ಉಪಯುಕ್ತವಾಗಿ ಬಳಸಿಕೊಳ್ಳಬೇಕು’ ಎಂದರಿ.

ಎಸ್.ಎಂ. ಕೃಷ್ಣ ನಗರ ವಾರ್ಡಿನ ನಗರಸಭಾ ಸದಸ್ಯೆ ಲಕ್ಷ್ಮಿ ಅನಿಲ್ ಸಿದ್ದಮ್ಮನಹಳ್ಳಿ, ಪ್ರಮುಖರಾದ ಬಸವರಾಜ ಕಡೆಮಣಿ, ಆನಂದ್ ಸಾಲಿಗ್ರಾಮ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಮಾರಾಠೆ, ಗೌರವಾಧ್ಯಕ್ಷ ಕುಮಾರ್ ಕಟ್ಟಿಮನಿ, ಉಪಾಧ್ಯಕ್ಷರಾದ ಶಿಲ್ಪಾ ಬಂಡಿಹಾಳ, ಚಂದ್ರಶೇಖರಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ಅಂಗಡಿ, ಬಸವರಾಜ್ ಈರಣ್ಣವರ, ಜಗದೀಶ್ ಬಳಿಗೇರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಎಸ್.ಎಂ. ಕೃಷ್ಣ ನಗರದ ನೂರಾರು ಅಸಂಘಟಿತ ಕಾರ್ಮಿಕರು ಉಪಸ್ಥಿತರಿದ್ದರು.

Editor

Leave a comment