Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಜಂತರ್ ಮಂತರ್‌ನಲ್ಲಿ ಪ್ರತಿಧ್ವನಿಸಿದ ನ್ಯಾಯದ ಧ್ವನಿ: ನೀಟ್ ಅಕ್ರಮಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಕರುನಾಡು ಘರ್ಜನೆ ಸುದ್ದಿ ಗದಗ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಉನ್ನತ ಶಿಕ್ಷಣ ಮತ್ತು ಪಾರದರ್ಶಕ ಪರೀಕ್ಷೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ, ಪ್ರಸ್ತುತ ದೇಶದ ವೈದ್ಯಕೀಯ ಶಿಕ್ಷಣದ ಬಾಗಿಲಾಗಿರುವ ನೀಟ್ (NEET) ಪರೀಕ್ಷೆಯಲ್ಲಿ ಕೇಳಿಬಂದಿರುವ ಅಕ್ರಮಗಳ ಸರಣಿ, ಲಕ್ಷಾಂತರ ಯುವ ಶಕ್ತಿ…

ಕರುನಾಡು ಘರ್ಜನೆ ಸುದ್ದಿ ಗದಗ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಉನ್ನತ ಶಿಕ್ಷಣ ಮತ್ತು ಪಾರದರ್ಶಕ ಪರೀಕ್ಷೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ, ಪ್ರಸ್ತುತ ದೇಶದ ವೈದ್ಯಕೀಯ ಶಿಕ್ಷಣದ ಬಾಗಿಲಾಗಿರುವ ನೀಟ್ (NEET) ಪರೀಕ್ಷೆಯಲ್ಲಿ ಕೇಳಿಬಂದಿರುವ ಅಕ್ರಮಗಳ ಸರಣಿ, ಲಕ್ಷಾಂತರ ಯುವ ಶಕ್ತಿ ಮತ್ತು ಅವರ ಪೋಷಕರ ನಿದ್ದೆಗೆಡಿಸಿದೆ. ಈ ಗಂಭೀರ ಪರಿಸ್ಥಿತಿಯನ್ನು ವಿರೋಧಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಅಹಿಂಸಾತ್ಮಕ ಉಪವಾಸ ಸತ್ಯಾಗ್ರಹಕ್ಕೆ ಶೀಘ್ರವೇ ‘ಸಾತ್ವಿಕ ಅಂತ್ಯ’ ಸಿಗಬೇಕಿದೆ.

ಇತ್ತೀಚೆಗೆ ಉತ್ತರ ಕರ್ನಾಟಕ ಪದವೀಧರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ. ಎಸ್. ನಾಗರಕಟ್ಟೆ ಅವರು ಕೇಂದ್ರ ಸರ್ಕಾರವನ್ನು ಉದ್ದೇಶಿಸಿ, “ನೀಟ್ ಪರೀಕ್ಷೆಯ ಅಕ್ರಮ ಬಯಲಾಗಿ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಬೇಕು; ಅದಕ್ಕಾಗಿ ಈ ಪರೀಕ್ಷಾ ಲೋಪಗಳಿಗೆ ಕಾರಣರಾದ ಹಾಗೂ ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಯನ್ನೂ ತಕ್ಷಣವೇ ಅಮಾನತುಗೊಳಿಸುವುದು ಸೂಕ್ತ” ಮತ್ತು ಇದಕ್ಕೆ ಸಂಬಂಧಪಟ್ಟಂತ ಮಂತ್ರಿಯ ರಾಜೀನಾಮೆಯನ್ನು ಪಡೆಯಬೇಕು ಎಂದು ಆಗ್ರಹಿಸಿರುವುದು ದೇಶದ ಸಮಸ್ತ ವಿದ್ಯಾರ್ಥಿ ಸಮೂಹದ ಧ್ವನಿಯಾಗಿದೆ.

ವಿದ್ಯಾರ್ಥಿಗಳ ಶ್ರಮಕ್ಕೆ ಬೆಲೆ ಸಿಗಲಿ ರಾತ್ರಿ-ಹಗಲೆನ್ನದೆ, ವರ್ಷವಿಡೀ ಕಷ್ಟಪಟ್ಟು ಓದಿ ವೈದ್ಯರಾಗುವ ಕನಸು ಕಾಣುವ ಕೋಟ್ಯಂತರ ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಇಂದು ತೂಗುಯ್ಯಲೆಯಲ್ಲಿದೆ. ಪರೀಕ್ಷೆಯಲ್ಲಿ ನಡೆಯುವ ಸಣ್ಣ ಲೋಪ ಅಥವಾ ಭ್ರಷ್ಟಾಚಾರವೂ ಒಬ್ಬ ಅರ್ಹ ವಿದ್ಯಾರ್ಥಿಯ ಜೀವನಪರ್ಯಂತದ ಶ್ರಮವನ್ನು ನೀರುಪಾಲು ಮಾಡುತ್ತದೆ. “ಪರೀಕ್ಷೆಯ ಪಾರದರ್ಶಕತೆ ಎಂಬುದು ಕೇವಲ ನಿಯಮವಲ್ಲ; ಅದು ಲಕ್ಷಾಂತರ ಯುವಕರ ಕನಸುಗಳಿಗೆ ನೀಡುವ ಗೌರವ.”
ಪಾಲಕರ ಆತಂಕ ಮತ್ತು ದೇಶದ ಭವಿಷ್ಯ ತಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ತಮ್ಮ ಇಡೀ ಜೀವನದ ಸಂಪಾದನೆಯನ್ನು ಧಾರೆ ಎರೆಯುವ ಪೋಷಕರಿಗೆ ಇಂತಹ ಅಕ್ರಮಗಳು ತೀವ್ರ ನಿರಾಶೆ ತಂದೊಡ್ಡುತ್ತವೆ. ಭ್ರಷ್ಟ ವ್ಯವಸ್ಥೆಯಿಂದ ಅರ್ಹರಲ್ಲದವರು ವೈದ್ಯಕೀಯ ಕ್ಷೇತ್ರದಲ್ಲಿ ಮುಂಚೂಣಿಗೆ ಬಂದರೆ, ಅದು ಇಡೀ ದೇಶದ ಆರೋಗ್ಯ ಕ್ಷೇತ್ರ ಮತ್ತು ವೈದ್ಯಕೀಯ ಸೇವೆಯ ಗುಣಮಟ್ಟದ ಮೇಲೆಯೇ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ, ಇದು ಕೇವಲ ಒಂದೆರಡು ಲಕ್ಷ ವಿದ್ಯಾರ್ಥಿಗಳ ಸಮಸ್ಯೆಯಲ್ಲ, ಬದಲಿಗೆ ದೇಶದ ಆರೋಗ್ಯ ಭವಿಷ್ಯದ ಪ್ರಶ್ನೆಯಾಗಿದೆ.
ಉತ್ತರ ಕರ್ನಾಟಕ ಪದವೀಧರ ಒಕ್ಕೂಟದ ರಾಜ್ಯಾಧ್ಯಕ್ಷರ ಸಾತ್ವಿಕ ಹೋರಾಟದ ಧ್ವನಿಗೆ ದನಿಯಗೂಡಿಸುತ್ತಾ, ಕೇಂದ್ರ ಸರ್ಕಾರ ತಕ್ಷಣವೇ ಕ್ರಮಗಳನ್ನು ಕೈಗೊಳ್ಳಬೇಕಿದೆ: ತಪಿತಸ್ಥರ ಅಮಾನತು ನೀಟ್ ಅಕ್ರಮದಲ್ಲಿ ಭಾಗಿಯಾದ ಹಾಗೂ ನಿರ್ಲಕ್ಷ್ಯ ವಹಿಸಿದ ಸಂಬಂಧಪಟ್ಟ ಪ್ರತಿಯೊಬ್ಬ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು. ಮತ್ತು ಸಂಬಂಧಿತ ಮಂತ್ರಿಯ ಕೂಡ ರಾಜೀನಾಮೆ ಪಡೆಯಬೇಕು ಪಾರದರ್ಶಕ ತನಿಖೆಯಾಗಬೇಕು ಹಗರಣದ ಬೇರುಗಳನ್ನು ತಲುಪಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಾಗಬೇಕು. ವಿದ್ಯಾರ್ಥಿಗಳಿಗೆ ನ್ಯಾಯಸಿಗಬೇಕು. ಕಷ್ಟಪಟ್ಟು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ತಕ್ಷಣವೇ ಸೂಕ್ತ ಪರಿಹಾರ ಹಾಗೂ ನ್ಯಾಯಯುತ ಕ್ರಮಗಳನ್ನು ಪ್ರಕಟಿಸಬೇಕು.

ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹ ಮತ್ತು ಅಹಿಂಸಾತ್ಮಕ ಹೋರಾಟಗಳಿಗೆ ದೊಡ್ಡ ಶಕ್ತಿಯಿದೆ. ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಈ ಹೋರಾಟಕ್ಕೆ ತಕ್ಷಣವೇ ಸಾತ್ವಿಕ ಸ್ಪಂದನೆ ಸಿಕ್ಕು, ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡುವಂತಾಗಲಿ. ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಶಿಕ್ಷಣ ವ್ಯವಸ್ಥೆಯನ್ನು ನಿರ್ಮಿಸುವುದು ಪ್ರಸ್ತುತ ಕಾಲದ ತುರ್ತು ಅಗತ್ಯವಾಗಿದೆ. ಕೇಂದ್ರ ಸರ್ಕಾರ ಇದನ್ನು ಅರಿತುಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

Editor

Leave a comment