Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ದೇಶ

ನವದೇಹಲಿ I NEET ಪ್ರಶ್ನೆಪತ್ರಿಕೆ ಸೋರಿಕೆ ಕಿಡಿ: ಭಾರೀ ವಿದ್ಯಾರ್ಥಿ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ – ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ!

ಜಂತರ್ ಮಂತರ್‌ನಿಂದ ದೇಶವ್ಯಾಪಿ ಆಕ್ರೋಶಕ್ಕೆ ಫಲ; ವಿದ್ಯಾರ್ಥಿ ಹೋರಾಟಕ್ಕೆ ಐತಿಹಾಸಿಕ ಗೆಲುವು ಕರುನಾಡು ಘರ್ಜುನೆ ಸುದ್ದಿ ನವದೆಹಲಿ: ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಭುಗಿಲೆದ್ದಿದ್ದ ವಿದ್ಯಾರ್ಥಿಗಳ ಆಕ್ರೋಶ ಮತ್ತು ನಿರಂತರ ಪ್ರತಿಭಟನೆಗೆ ಅಂತಿಮವಾಗಿ ಕೇಂದ್ರ ಸರ್ಕಾರ ಮಣಿದಿದೆ.…

ಜಂತರ್ ಮಂತರ್‌ನಿಂದ ದೇಶವ್ಯಾಪಿ ಆಕ್ರೋಶಕ್ಕೆ ಫಲ; ವಿದ್ಯಾರ್ಥಿ ಹೋರಾಟಕ್ಕೆ ಐತಿಹಾಸಿಕ ಗೆಲುವು

ಕರುನಾಡು ಘರ್ಜುನೆ ಸುದ್ದಿ ನವದೆಹಲಿ: ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ಭುಗಿಲೆದ್ದಿದ್ದ ವಿದ್ಯಾರ್ಥಿಗಳ ಆಕ್ರೋಶ ಮತ್ತು ನಿರಂತರ ಪ್ರತಿಭಟನೆಗೆ ಅಂತಿಮವಾಗಿ ಕೇಂದ್ರ ಸರ್ಕಾರ ಮಣಿದಿದೆ. ಭಾರೀ ರಾಜಕೀಯ ಒತ್ತಡ ಹಾಗೂ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಬೃಹತ್ ವಿದ್ಯಾರ್ಥಿ ಹೋರಾಟದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಧರ್ಮೇಂದ್ರ ಪ್ರಧಾನ್, “ವಿದ್ಯಾರ್ಥಿಗಳ ಭವಿಷ್ಯ, ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆ ಹಾಗೂ ದೇಶದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ತಿಳಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಹೋರಾಟವನ್ನು ದೇಶವಿರೋಧಿ ಶಕ್ತಿಗಳು ದುರ್ಬಳಕೆ ಮಾಡಿಕೊಳ್ಳದಂತೆ ತಡೆಯುವ ಉದ್ದೇಶದಿಂದ ಸ್ವಯಂಪ್ರೇರಿತವಾಗಿ ಸ್ಥಾನ ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದಿದ್ದ ಉಗ್ರ ಪ್ರತಿಭಟನೆಯ ಪ್ರಮುಖ ಬೇಡಿಕೆಯೇ ಶಿಕ್ಷಣ ಸಚಿವರ ರಾಜೀನಾಮೆಯಾಗಿತ್ತು. ಶುಕ್ರವಾರ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಮಾತುಕತೆಯಲ್ಲಿ ಸರ್ಕಾರ ರಾಜೀನಾಮೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ಆದರೆ ಕೇವಲ 24 ಗಂಟೆಗಳಲ್ಲೇ ರಾಜಕೀಯ ಚಿತ್ರಣ ಸಂಪೂರ್ಣ ಬದಲಾಗಿದ್ದು, ಸರ್ಕಾರದ ಈ ನಿರ್ಧಾರ ದೇಶದಾದ್ಯಂತ ಸಂಚಲನ ಮೂಡಿಸಿದೆ.

ಉಪವಾಸ ಸತ್ಯಾಗ್ರಹ, ‘ಸಂಸತ್ ಚಲೋ’ ಹೋರಾಟ, ಪೊಲೀಸರೊಂದಿಗೆ ಸಂಘರ್ಷ ಸೇರಿದಂತೆ ಹಲವು ಹಂತಗಳಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟ ಕೊನೆಗೂ ಫಲ ನೀಡಿದೆ. ಪರೀಕ್ಷಾ ಅಕ್ರಮಗಳ ವಿರುದ್ಧ ಧ್ವನಿ ಎತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಈ ಬೆಳವಣಿಗೆ ಮಹತ್ವದ ಗೆಲುವಾಗಿ ಪರಿಣಮಿಸಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಗಾಗಿ ನಡೆದ ಹೋರಾಟದ ಐತಿಹಾಸಿಕ ಮೈಲಿಗಲ್ಲು ಎಂದು ವಿಶ್ಲೇಷಿಸಲಾಗುತ್ತಿದೆ.

Editor

Leave a comment