ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹೆಚ್.ಡಿ.ಎಫ್.ಸಿ. ಲೈಫ್ ಮುಂಬೈ, ಹಾಗೂ ಕಲಿಕೆ-ಟಾಟಾ ಟ್ರಸ್ಟ್ಸ್, ಬೆಂಗಳೂರು ಇವರ ಸಹಯೋಗದೊಂದಿಗೆ ಶುಕ್ರವಾರ 2026-27ನೇ ಸಾಲಿನಿಂದ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಗದಗ ಜಿಲ್ಲೆಯ ಎಲ್ಲಾ 5 ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ 1248 ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 4 ವರ್ಷಗಳ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ರಾಧಾ ಜಿ ಮಣ್ಣೂರ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಿವಕುಮಾರ ಡಿ ಕಾರ್ಯಕ್ರಮದ ರೂಪರೇಷೆಯ ಬಗ್ಗೆ ಮಾತನಾಡಿದರು. ಶ್ರೀಮತಿ ರಿನಾ ಭಾತಿರ್, ಎಸ್,ವಿಪಿ-ಮಾರ್ಕೇಟಿಂಗ್-ಸಿಎಸ್‌ಆರ್ ಕಾರ್ಯಕ್ರಮದ ಅಭಿವೃದ್ಧಿಗೆ ಬೇಕಾಗುವ ಅನುದಾನ ಹಾಗೂ ಅನುಷ್ಠಾನ ಮಾಡುವÀ ಬಗ್ಗೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್ ಶ್ರೀಧರ, ರೀಜಿನಲ್ ಹೆಡ್ ಸೂರಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಕಲಿಕೆ-ಟಾಟಾ ಟ್ರಸ್ಟ್ಸ್, ಇ ಸಿ ಸಿ ಇ ಕಾರ್ಯಕ್ರಮ ಅಧಿಕಾರಿ ಕೊಟ್ರೇಶ್ ಎ ವೈ, ಜಿಲ್ಲಾ ವ್ಯವಸ್ಥಾಪಕರಾದ ಅಶೋಕ, ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಎಲ್ಲಾ ಮೇಲ್ವಿಚಾರಕಿಯರು, ಸಿಬ್ಬಂದಿಯವರು ಹಾಜರಿದ್ದರು.
ಕಾರ್ಯಕ್ರಮವನ್ನು ಶ್ರೀಮತಿ ನೇತ್ರಾ ನಿರೂಪಿಸಿ ವಂದಿಸಿದರು.