ಕರುನಾಡು ಘರ್ಜುನೆ ಸುದ್ದಿ ಗದಗ ಜುಲೈ 28 : ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ. 967 ಮತಗಟ್ಟೆಗಳಿವೆ. ಭಾರತೀಯ ಚುನಾವಣಾ ಆಯೋಗದ ಆದೇಶದನ್ವಯ ಬಿ.ಎಲ್.ಓಗಳು ಅಗಸ್ಟ್ 8 ರವರೆಗೆ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ ವಿತರಿಸುವ ಕಾರ್ಯವನ್ನು ವಿಸ್ತರಿಸಲಾಗಿದೆ.
ಜುಲೈ 27 ರವರೆಗೆ 9,02,947 ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸಲಾಗಿದೆ. 7,67,278 ಎನ್ಯುಮರೇಷನ್ ಫಾರ್ಮಗಳು ಡಿಜಟಲೀಕರಣಗೊಂಡಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಜುಲೈ 27: ಗದಗ ವಿಧಾನ ಸಭಾ ಮತಕ್ಷೇತ್ರದ ಎಸ್.ಐ.ಆರ್. ವರದಿ
ಗದಗ ಜುಲೈ 28: ಜಿಲ್ಲೆಯ ಗದಗ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಬಿ.ಎಲ್.ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಗಳನ್ನು ಮತದಾರರಿಗೆ ವಿತರಿಸುತ್ತಿದ್ದಾರೆ.
ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,33,829 ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ. 226 ಮತಗಟ್ಟೆಗಳಿವೆ. ಬಿ.ಎಲ್.ಓಗಳು ಅಗಸ್ಟ 08 ರವರೆಗೆ ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ ವಿತರಿಸಲಿದ್ದಾರೆ.
ಜುಲೈ 27 ರವರೆಗೆ 2,33,829 ಎನ್ಯುಮರೇಷನ್ ಫಾರ್ಮಗಳನ್ನು ವಿತರಿಸಲಾಗಿದೆ. 1,90,436 ಎನ್ಯುಮರೇಷನ್ ಫಾರ್ಮ ಡಿಜಟಲೀಕರಣಗೊಂಡಿವೆ ಎಂದು ಗದಗ ವಿಧಾನ ಸಭಾ ಮತಕ್ಷೇತ್ರದ ಮತದಾರರ ನೊಂದಣಾಧಿಕಾರಿಗಳಾದ ಗದಗ ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ.