Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆಗೆ ಗೃಹ ಇಲಾಖೆಗೆ ಪತ್ರ: ಡಾ. ನಾಗಲಕ್ಷ್ಮಿ ಚೌಧರಿ.

ಮಹಿಳಾ ಗ್ರಾಮಸಭೆಗಳನ್ನು ನಿಯಮಿತವಾಗಿ ನಡೆಸಿ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಕರುನಾಡು ಘರ್ಜುನೆ ಸುದ್ದಿ ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆಗೆ ಗೃಹ ಇಲಾಖೆಗೆ ಪತ್ರ ಬರೆದು, ಖುದ್ದು…

ಮಹಿಳಾ ಗ್ರಾಮಸಭೆಗಳನ್ನು ನಿಯಮಿತವಾಗಿ ನಡೆಸಿ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು

ಕರುನಾಡು ಘರ್ಜುನೆ ಸುದ್ದಿ ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆಗೆ ಗೃಹ ಇಲಾಖೆಗೆ ಪತ್ರ ಬರೆದು, ಖುದ್ದು ಭೇಟಿ ನೀಡಿ ಮನವಿ ಮಾಡುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಮೃತ ವಿದ್ಯಾರ್ಥಿನಿಯ ಕುಟುಂಬವು ಕೊಲೆ ಆರೋಪ ಮಾಡಿದ್ದು, ವಸತಿ ನಿಲಯದ ಸಿಸಿ ಟಿವಿ ದೃಶ್ಯಾವಳಿಯ ಒಂದು ತಿಂಗಳ ಬ್ಯಾಕ್‌ಅಪ್‌ ಇಲ್ಲ ಎಂದು ತಿಳಿದುಬಂದಿದೆ. ದೂರು ದಾಖಲಿಸುವ ವೇಳೆ ಪೊಲೀಸರು ಒತ್ತಡ ಹೇರಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಪೊಲೀಸ್ ಠಾಣೆಯ ಸಿಸಿ ಟಿವಿ ದೃಶ್ಯಾವಳಿಯನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು.

ರೋಣ ತಾಲೂಕು ಆಸ್ಪತ್ರೆ ಹಾಗೂ ಗದಗಿನ ಎ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚಿರುವುದು ಆತಂಕಕಾರಿ. ಹೆಣ್ಣು ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ರೋಣ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ಮಹಿಳಾ ಗ್ರಾಮಸಭೆಗಳನ್ನು ನಿಯಮಿತವಾಗಿ ನಡೆಸಬೇಕು ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರ ಅಹವಾಲು ಆಲಿಸಲು ತಿಂಗಳಿಗೆ ಒಂದು ದಿನ ಮೀಸಲಿಡುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿ ವಸತಿ ನಿಲಯಗಳು, ಆಸ್ಪತ್ರೆಗಳು, ಅಲೆಮಾರಿ ಸಮುದಾಯದ ನಿವಾಸಗಳು, ಪೊಲೀಸ್ ಠಾಣೆ, ಮಕ್ಕಳ ದತ್ತು ಕೇಂದ್ರ, ಕೃಷಿ ಕಾರ್ಮಿಕರು ಹಾಗೂ ಕುರಿಗಾಹಿಗಳನ್ನು ಭೇಟಿ ಮಾಡಲಾಗಿದೆ. ಅಲೆಮಾರಿ ಸಮುದಾಯಕ್ಕೆ ಕುಡಿಯುವ ನೀರು, ರಸ್ತೆ, ಶೌಚಾಲಯ ಹಾಗೂ ಗ್ರಂಥಾಲಯದಂತಹ ಮೂಲಸೌಕರ್ಯ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.ಅಹವಾಲು ಸ್ವೀಕಾರ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ದೇವದಾಸಿಯರು, ಅಲೆಮಾರಿ ಸಮುದಾಯದವರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉದ್ಯೋಗ, ಮನೆ, ಪಿಂಚಣಿ, ಮೂಲಸೌಕರ್ಯ ಹಾಗೂ ಕೌಟುಂಬಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ಮನೆ ಸೌಲಭ್ಯಕ್ಕಾಗಿ ಬಂದ 66 ಅರ್ಜಿಗಳನ್ನು ವಿವಿಧ ವಸತಿ ಯೋಜನೆಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಾ.ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಈ ವೇಳೆ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಇದ್ದರು.

Editor

Leave a comment