ಕರುನಾಡು ಘರ್ಜುನೆ ಸುದ್ದಿ ಗದಗ ಅಗಸ್ಟ್ 3: ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ಅಗಸ್ಟ 5 ರಿಂದ 7 ರವರೆಗೆ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.
ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಗಸ್ಟ 5 ರಂದು ಮಧ್ಯಾಹ್ನ 3.20 ಗಂಟೆಗೆ ಬೆಂಗಳೂರಿನಿAದ ವಿಮಾನ ಮೂಲಕ ಹೊರಟು ಸಂಜೆ 4.45 ಗಂಟೆಗೆ ಹುಬ್ಬಳ್ಳಿಗೆ ಆಗಮಿಸುವರು. ಸಂಜೆ 4.45 ರಿಂದ ಹುಬ್ಬಳ್ಳಿ ಏರಪೋರ್ಟದಿಂದ ಹೊರಟು 5.45 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಮಾಡುವರು.
ಅಗಸ್ಟ 6 ರಂದು ಬೆಳಿಗ್ಗೆ 9 ಗಂಟೆಯಿAದ ಬೆ 10.00 ಗಂಟೆಯವರೆಗೆ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಉದ್ಘಾಟಿಸುವರು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಸಾರ್ವಜನಿಕರ ದೂರು ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸುವರು. ಮಧ್ಯಾಹ್ನ 2.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಸಾರ್ವಜನಿಕರಿಂದ ದೂರು/ ಅರ್ಜಿಗಳನ್ನು ವಿಚಾರಣೆ ನಡೆಸುವರು ನಂತರ ಗದಗನಲ್ಲಿ ವಾಸ್ತವ್ಯ ಮಾಡುವರು.
ಅಗಸ್ಟ 7 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಬಾಕಿ ಉಳಿದ ದೂರು ಅರ್ಜಿಗಳನ್ನು ವಿಚಾರಣೆ ನಡೆಸುವರು. ನಂತರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ. ಸಂಜೆ 7.10 ಗಂಟೆಗೆ ಗದಗನಿಂದ ರೈಲು ಮೂಲಕ ಹೊರಟು ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಲೋಕಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.