Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಶೇ.50 ಬೆಳೆ ಹಾನಿ; ರೈತರ ನೆರವಿಗೆ ಸರ್ಕಾರ ಬದ್ಧ: ಸಚಿವ ಬಸವರಾಜ ರಾಯರಡ್ಡಿ.

ಕುಡಿಯುವ ನೀರಿನ ಮಾಹಿತಿ ಅಸಮರ್ಪಕ : ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ ಕರುನಾಡು ಘರ್ಜುನೆ ಸುದ್ದಿ ಶಿರಹಟ್ಟಿ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಹಾನಿಗೊಳಗಾಗಿದ್ದು, ರೈತರಿಗೆ ಪರಿಹಾರ ಒದಗಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಬೆಳೆ ವಿಮೆ ಕಂತು…

ಕುಡಿಯುವ ನೀರಿನ ಮಾಹಿತಿ ಅಸಮರ್ಪಕ : ಅಧಿಕಾರಿಗಳಿಗೆ ನೋಟಿಸ್ ನೀಡಲು ಸೂಚನೆ

ಕರುನಾಡು ಘರ್ಜುನೆ ಸುದ್ದಿ ಶಿರಹಟ್ಟಿ: ಗದಗ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಹಾನಿಗೊಳಗಾಗಿದ್ದು, ರೈತರಿಗೆ ಪರಿಹಾರ ಒದಗಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಬೆಳೆ ವಿಮೆ ಕಂತು ಪಾವತಿಸಿರುವ ರೈತರು ಸೇರಿದಂತೆ ಬಿತ್ತನೆ ಮಾಡಲು ಸಾಧ್ಯವಾಗದ ರೈತರಿಗೂ ಪರಿಹಾರ ನೀಡುವ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಶನಿವಾರ ಶಿರಹಟ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈಗಾಗಲೇ ಲಕ್ಷ್ಮೇಶ್ವರ, ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ರೈತರು ಬೆಳೆ ವಿಮೆ ಕಂತು ಪಾವತಿಸಿದ್ದಾರೆ. ಆದರೆ, ಶೇ.50ರಷ್ಟು ಬೆಳೆ ಹಾನಿಯಾಗಿರುವುದು ಕಂಡುಬಂದಿದೆ. ಅಲ್ಲದೇ, ಮಳೆ ಕೊರತೆಯಿಂದಾಗಿ ಸುಮಾರು ಶೇ.10ರಷ್ಟು ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ. ಹೀಗಾಗಿ ಬಿತ್ತನೆಯಾಗದ ಪ್ರದೇಶದ ರೈತರಿಗೆ ಯಾವ ರೀತಿಯಲ್ಲಿ ಪರಿಹಾರ ನೀಡಬಹುದು ಎಂಬುದರ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದರು.

33 ಸಾವಿರ ರೈತರಿಂದ ವಿಮೆ ಕಂತು ಪಾವತಿ : ಬೆಳೆ ವಿಮೆ ಯೋಜನೆಯಡಿ ಲಕ್ಷ್ಮೇಶ್ವರ ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ರೈತರು ವಿಮೆ ಕಂತು ಪಾವತಿಸಿದ್ದಾರೆ. ಆದರೆ ಮಳೆ ಕೊರತೆಯಿಂದಾಗಿ ಈಗಾಗಲೇ ಶೇ.50ರಷ್ಟು ಬೆಳೆ ಹಾನಿಯಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಿತ್ತನೆಯಾಗದ ಪ್ರದೇಶವೂ ಇರುವುದರಿಂದ ರೈತರ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಬೆಳೆ ಹಾನಿ ಹಾಗೂ ಬಿತ್ತನೆಯಾಗದ ಪ್ರದೇಶವನ್ನು ಪರಿಗಣಿಸಿ ರೈತರಿಗೆ ನೆರವು ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವ ರಾಯರಡ್ಡಿ ತಿಳಿಸಿದರು.

ನೀರು ಸರಬರಾಜು ಮಾಹಿತಿ ಸರಿಯಿಲ್ಲ :

ಶಿರಹಟ್ಟಿ,‌ ಲಕ್ಷ್ಮೇಶ್ವರ ತಾಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಮಾತನಾಡಿದ ಸಚಿವರು, ಎರಡು ತಾಲ್ಲೂಕುಗಳಲ್ಲಿ ಒಟ್ಟು 89 ಗ್ರಾಮಗಳಿದ್ದು, ಈ ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಕುರಿತು ಅಧಿಕಾರಿಗಳು ನೀಡಿರುವ ಮಾಹಿತಿ ಸಮರ್ಪಕವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೀರು ಸರಬರಾಜು ಅಧಿಕಾರಿಗಳು ನೀಡಿರುವ ಮಾಹಿತಿಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ನಿಖರ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಹೇಳಿದರು.

ಬರ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಪೂರೈಕೆ ಅತ್ಯಂತ ಪ್ರಮುಖವಾಗಿದ್ದು, ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮಗಳಿಗೆ ನಿಯಮಿತವಾಗಿ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಖುದ್ದು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಖಾತ್ರಿ ಯೋಜನೆಯಲ್ಲಿ ರಾಜ್ಯದ ಪಾಲು ನೀಡಲಾಗುವುದು:

ಖಾತ್ರಿ ಯೋಜನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲುದಾರಿಕೆ ಇದೆ. ಯೋಜನೆಗೆ ಕೇಂದ್ರದ ಶೇ.60 ಹಾಗೂ ರಾಜ್ಯದ ಶೇ.40ರಷ್ಟು ಪಾಲು ಇರುವುದಾಗಿ ತಿಳಿಸಿದರು.

ರಾಜ್ಯದ ಪಾಲಿಗೆ ಸಂಬಂಧಿಸಿದ ಅನುದಾನವನ್ನು ಸರ್ಕಾರ ನೀಡಲಿದೆ. ಯೋಜನೆ ಅನುಷ್ಠಾನದಲ್ಲಿ ರಾಜ್ಯದ ಜವಾಬ್ದಾರಿಯನ್ನು ಸರ್ಕಾರ ಸಮರ್ಪಕವಾಗಿ ನಿರ್ವಹಿಸಲಿದೆ ಎಂದು ಬಸವರಾಜ ರಾಯರಡ್ಡಿ ಸ್ಪಷ್ಟಪಡಿಸಿದರು.

ಬರ ಘೋಷಣೆಗೆ ಇನ್ನೂ 15 ದಿನ : ರಾಜ್ಯದಲ್ಲಿ ಮಳೆ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಬರ ಘೋಷಣೆ ಕುರಿತು ಮಾತನಾಡಿದ ಅವರು, ತಕ್ಷಣವೇ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಬರ ಘೋಷಣೆಗೆ ಇನ್ನೂ ಸುಮಾರು 15 ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿದರು.

ಸದ್ಯ ರಾಜ್ಯದ 171 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ. ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ, ಬಿತ್ತನೆ ಪ್ರಮಾಣ, ಬೆಳೆ ಹಾನಿ ಸೇರಿದಂತೆ ವಿವಿಧ ಅಂಶಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿದ ಬಳಿಕ ಬರ ಘೋಷಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಳೆ ಕೊರತೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದೆ. ಅಗತ್ಯವಿರುವ ಕಡೆಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಸವರಾಜ ರಾಯರಡ್ಡಿ ಭರವಸೆ ನೀಡಿದರು.

Editor

Leave a comment