Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

Koppal ಬಹಾರ ಪೇಟೆ ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ: ಗುಣಮಟ್ಟದ ಶಿಕ್ಷಣ ಮತ್ತು ಶಾಲಾ ಅಭಿವೃದ್ಧಿಗೆ ಕರೆ.

Karunadu Gharjane News ಕೊಪ್ಪಳ: ಆ.17.ಬಹಾರ ಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಹಾರ ಪೇಟೆಯ ಉರ್ದು ಪ್ರಾಥಮಿಕ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ…

Karunadu Gharjane News ಕೊಪ್ಪಳ: ಆ.17.ಬಹಾರ ಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಹಾರ ಪೇಟೆಯ ಉರ್ದು ಪ್ರಾಥಮಿಕ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷ ಮುಹಮ್ಮದ್ ರಫೀಕ್ ಉರ್ ರಹೇಮಾನ್ ಹಕೀಮ್ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, “ದೇಶದ ಸ್ವಾತಂತ್ರ್ಯಕ್ಕಾಗಿ ವೀರಮರಣ ಹೊಂದಿದ ಮಹನೀಯರ ತ್ಯಾಗ ಬಲಿದಾನಗಳು ಪ್ರತಿಯೊಬ್ಬರಿಗೂ ಪ್ರೇರಣೆಯಾಗಬೇಕು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಬೇಕು” ಎಂದು ಕರೆ ನೀಡಿದರು.ಜೊತೆಗೆ, ತಮ್ಮ ಅಧಿಕಾರಾವಧಿಯಲ್ಲಿ ಶಾಲೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಮನವಿ ಮಾಡಿದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷರಾದ ಆದಿಲ್ ಪಟೇಲ್ ಮಾತನಾಡಿ, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಚಂದ್ರಶೇಖರ್ ಆಜಾದ್, ಮೌಲಾನಾ ಅಬುಲ್ ಕಲಾಂ ಆಜಾದ್ ಸೇರಿದಂತೆ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಸ್ಮರಿಸಿದರು. ಶಿಕ್ಷಕರು ಮಕ್ಕಳಿಗೆ ಕೇವಲ ಪಠ್ಯವಲ್ಲದೆ, ಮೌಲ್ಯಯುತ ಹಾಗೂ ಗುಣಮಟ್ಟದ ಶಿಕ್ಷಣ ನೀಡಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು.

ಯುವ ವಕೀಲರಾದ ಜಾಕಿರ್ ಗೇಟಿನ ಮಾತನಾಡಿ, “ಭಾರತದ ಸಂವಿಧಾನದ ಅನುಚ್ಛೇದ 19, 21 ಮತ್ತು 21A ರ ಅಡಿಯಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕು, ಶುದ್ಧ ಕುಡಿಯುವ ನೀರು, ಉತ್ತಮ ಪರಿಸರ ಹಾಗೂ ಆರೋಗ್ಯ ಪಡೆಯುವ ಹಕ್ಕಿದೆ. ಅದರಲ್ಲೂ 6 ರಿಂದ 14/16 ವರ್ಷದೊಳಗಿನ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಮೂಲಭೂತ ಕರ್ತವ್ಯವಾಗಿದೆ” ಎಂದು ಸಂವಿಧಾನಾತ್ಮಕ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿದರು.

ಶಾಲಾ-ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ. ಗಫಾರ್ ಅವರು ಮಾತನಾಡಿ, ಎಲ್ಲರಿಗೂ 80 ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ಕೋರಿ.
.”ನಾವು ಸಮಾಜದಲ್ಲಿ ಏನಾದರೂ ಗುರುತಿಸಿಕೊಂಡಿದ್ದೇವೆ ಅಂದರೆ ಇದೇ ಬಹಾರ ಪೇಟೆ ಶಾಲೆಯಲ್ಲಿ ಕಲಿತ ಶಿಕ್ಷಣದ ಬುನಾದಿಯೇ ಕಾರಣ. ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಮಕ್ಕಳಿಗೆ ಪ್ರಬಂಧ, ಚಿತ್ರಕಲೆ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಅವರಲ್ಲಿರುವ ಸೃಜನಶೀಲತೆ ಮತ್ತು ವೇದಿಕೆ ಧೈರ್ಯ ಹೊರಬರುತ್ತದೆ. 1ನೇ ತರಗತಿಯಿಂದಲೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅಕ್ಷರ ಜ್ಞಾನ ಹಾಗೂ ಮಗ್ಗಿಗಳನ್ನು ಕಡ್ಡಾಯವಾಗಿ ಕಲಿಸಬೇಕು. 7ನೇ ತರಗತಿ ಪಾಸಾಗುವಷ್ಟರಲ್ಲಿ ಪ್ರತಿಯೊಬ್ಬ ಮಗುವಿಗೂ ಸುಲಲಿತವಾಗಿ ಓದಲು-ಬರೆಯಲು ಕಲಿಸಬೇಕಾದ ಮಹತ್ತರ ಜವಾಬ್ದಾರಿ ಶಿಕ್ಷಕರು ವಹಿಸಿಕೊಳ್ಳಬೇಕು.ಕೆಲವರು ಮುಗ್ಧ ಮಕ್ಕಳ ಮುಂದೆ ಸುಳ್ಳು ಆಶ್ವಾಸನೆ ನೀಡಿ ಮರೆತು ಬಿಡುತ್ತಾರೆ. ನಾವೆಲ್ಲರೂ ಒಗ್ಗೂಡಿ ಈ ಶಾಲೆಯ ನೈಜ ಅಭಿವೃದ್ಧಿಗೆ ಶ್ರಮಿಸೋಣ” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ನಾಸಿರ್ ಮಾಳೆಕೊಪ್ಪ,ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಣುಕಾ ಯು. ಸುರ್ವೆ,ಯುವ ಮುಖಂಡ ಮೌಲಾ ಹುಸೇನ್ ಹಣಗಿ, ಇರ್ಫಾನ್ ಕರಡಿ, ಸೈಯ್ಯದ್ ಹಯಾತ್ ಪೀರ್ ಹುಸೇನಿ (ಶೇರು), ನಿವೃತ್ತ ಮುಖ್ಯೋಪಾಧ್ಯಾಯ ಉಮೇಶ್ ಸುರ್ವೆ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Editor

Leave a comment