Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ರೋಣ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಚುರುಕು ಅರ್ಹರಿಗೆ ಸೌಲಭ್ಯ ತಲುಪಿಸಲು ಮಿಥುನ್ ಜಿ. ಪಾಟೀಲ್ ಸೂಚನೆ

ಕರುನಾಡು ಘರ್ಜನೆ ನ್ಯೂಸ್ ರೋಣ : ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಲಾಭ ಪಡೆಯುತ್ತಿರುವ ಅನರ್ಹರು ಹಾಗೂ ಮೃತಪಟ್ಟ ಫಲಾನುಭವಿಗಳ ಕುರಿತು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ವಹಿಸಬೇಕು ಎಂದು…

ಕರುನಾಡು ಘರ್ಜನೆ ನ್ಯೂಸ್ ರೋಣ : ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಲಾಭ ಪಡೆಯುತ್ತಿರುವ ಅನರ್ಹರು ಹಾಗೂ ಮೃತಪಟ್ಟ ಫಲಾನುಭವಿಗಳ ಕುರಿತು ಪರಿಶೀಲನೆ ನಡೆಸಿ, ನಿಯಮಾನುಸಾರ ಕ್ರಮ ವಹಿಸಬೇಕು ಎಂದು ರೋಣ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ರೋಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಸಮಿತಿ ಸಭೆಯಲ್ಲಿ ತಾಲೂಕ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ
ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

*ಗೃಹಲಕ್ಷ್ಮೀ ಯೋಜನೆ*
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದಾಗ, ರೋಣ ತಾಲೂಕಿನಲ್ಲಿ ಒಟ್ಟು 38,422 ಪಡಿತರ ಚೀಟಿಗಳಿದ್ದು, 38,278 ಅರ್ಜಿಗಳು ನೋಂದಣಿಯಾಗಿವೆ. ಈ ಪೈಕಿ 34,528 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಶೇ.90.20ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮನೆಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆಯಲ್ಲಿ 945 ಫಲಾನುಭವಿಗಳು ಮೃತಪಟ್ಟಿರುವುದು ಹಾಗೂ 248 ಮಂದಿ ಜಿಎಸ್‌ಟಿಗೆ ನೋಂದಣಿಯಾಗಿರುವುದು ಪತ್ತೆಯಾಗಿದೆ. ಮನೆಯ ಯಜಮಾನಿ ಮೃತಪಟ್ಟಿದ್ದರೆ ರೇಷನ್ ಕಾರ್ಡ್‌ನಲ್ಲಿ ಅಗತ್ಯ ತಿದ್ದುಪಡಿ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಗೃಹಲಕ್ಷ್ಮೀ ಯೋಜನೆಯ ಕಂತು ಜಮೆಯಾಗುವ ಮುನ್ನವೇ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಬೇಕು ಹಾಗೂ ಅರ್ಹರು ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಅಧ್ಯಕ್ಷರು ತಿಳಿಸಿದರು.

*ಅನ್ನಭಾಗ್ಯ ಯೋಜನೆ*
ನ್ಯಾಯಬೆಲೆ ಅಂಗಡಿಗಳಲ್ಲಿ 12 ನಿಯಮಗಳ ಬ್ಯಾನರ್ ಅಳವಡಿಸುವಂತೆ ಹಿಂದಿನ ಸಭೆಯಲ್ಲಿ ಸೂಚಿಸಿದ್ದರೂ ಅನುಷ್ಠಾನವಾಗದಿರುವುದಕ್ಕೆ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು. 75 ವರ್ಷ ಮೇಲ್ಪಟ್ಟವರಿಗೆ ಹೆಬ್ಬೆಟ್ಟು ಗುರುತಿನ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಒಟಿಪಿ ಮೂಲಕ ಪಡಿತರ ಪಡೆಯಲು ಅವಕಾಶವಿದ್ದು, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಪ್ರತಿ ತಿಂಗಳು 25ರ ನಂತರ ಪಡಿತರ ವಿತರಣೆ ಆರಂಭವಾಗುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಮಿತಿ ಸದಸ್ಯ ಬಿ.ಎಸ್. ರಡ್ಡೇರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಗೋದಾಮಿನಿಂದ ಪಡಿತರ ಎತ್ತುವಳಿ ತಡವಾಗುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಎತ್ತುವಳಿ ಮಾಡಿದ ಮರುದಿನವೇ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗುತ್ತಿದ್ದು, ಅಂತ್ಯೋದಯ ಕಾರ್ಡ್‌ದಾರರಿಗೆ 42 ಕೆಜಿ ಜೋಳ ಹಾಗೂ 28 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ ಹಾಗೂ 3 ಕೆಜಿ ಜೋಳ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು.

*ಗೃಹಜ್ಯೋತಿ ಯೋಜನೆ*
ಹೆಸ್ಕಾಂ ವ್ಯಾಪ್ತಿಯಲ್ಲಿ ಗೃಹಜ್ಯೋತಿ ಫಲಾನುಭವಿಗಳ ಮರು ಸಮೀಕ್ಷೆ ಶೇ.86ರಷ್ಟು ಪೂರ್ಣಗೊಂಡಿದೆ. ಉಳಿದ ಫಲಾನುಭವಿಗಳ ಸಮೀಕ್ಷೆಯನ್ನು ಮನೆಮನೆಗೆ ತೆರಳಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸದಸ್ಯರು ಸೂಚಿಸಿದರು. ಯೋಜನೆಯಿಂದ ಹೆಸರು ಹೊರಗುಳಿಯದಂತೆ ಮತದಾರರ ಗುರುತಿನ ಚೀಟಿ, ಆಧಾರ್ ಹಾಗೂ ರೇಷನ್ ಕಾರ್ಡ್ ದಾಖಲೆಗಳ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದರು.

ವಿದ್ಯುತ್ ಸಲಹಾ ಸಮಿತಿ ಸಭೆಗಳ ಮಾಹಿತಿ ಸದಸ್ಯರಿಗೆ ದೊರೆಯುತ್ತಿಲ್ಲ ಎಂದು ಶಿವಪ್ಪ ಗಾಣಿಗೇರ ಆಕ್ಷೇಪ ವ್ಯಕ್ತಪಡಿಸಿದರು. ಸಾರ್ವಜನಿಕರ ವಿದ್ಯುತ್ ಸಮಸ್ಯೆಗಳನ್ನು ಇಲಾಖೆಯ ಗಮನಕ್ಕೆ ತರಲು ಸಭೆಗಳನ್ನು ನಿಯಮಿತವಾಗಿ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

*ಶಕ್ತಿ ಯೋಜನೆ*
ಕೆಎಸ್‌ಆರ್‌ಟಿಸಿ ಸೇವೆ ಕುರಿತು ಚರ್ಚೆ ನಡೆಸಿದಾಗ, ರೋಣ–ಅಬ್ಬಿಗೇರಿ ಮಾರ್ಗದಲ್ಲಿ ಬೆಳಗ್ಗೆ 6 ಗಂಟೆಗೆ ಹಾಗೂ ಸಂಜೆ 5.30ಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು. ರೋಣ–ಸವಡಿ ಮಾರ್ಗವಾಗಿ ಗದಗಕ್ಕೆ ತೆರಳುವ ಬಸ್‌ಗಳಲ್ಲಿ ಹೆಚ್ಚಿನ ಜನದಟ್ಟಣೆ ಇರುವುದರಿಂದ ಹೆಚ್ಚುವರಿ ಬಸ್ ಕಲ್ಪಿಸಬೇಕು ಎಂದು ಬಸವರಾಜ ತಳವಾರ ಮನವಿ ಮಾಡಿದರು.

ರೋಣ–ಹೊಸಳ್ಳಿ–ಇಟಗಿ ಮಾರ್ಗದ ಬಸ್‌ನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಶಾಲಾ ಸಮಯದಲ್ಲಿ ನಿಗದಿತ ಸ್ಥಳಗಳಲ್ಲಿ ಬಸ್ ನಿಲ್ಲಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿ.ಎಸ್. ರಡ್ಡೇರ ಹೇಳಿದರು. ಇಟಗಿ ಮಾರ್ಗದ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಅಗತ್ಯ ಸೂಚನೆ ನೀಡುವಂತೆ ಮಿಥುನ್ ಜಿ. ಪಾಟೀಲ ತಿಳಿಸಿದರು.

ಮಹಿಳಾ ಪ್ರಯಾಣಿಕರಿದ್ದರೂ ಕೆಲವೆಡೆ ಬಸ್‌ಗಳನ್ನು ನಿಲ್ಲಿಸದಿರುವ ಕುರಿತು ನಾಜಬೇಗಂ ಯಲಿಗಾರ ಅಸಮಾಧಾನ ವ್ಯಕ್ತಪಡಿಸಿದರು. ಈ ಕುರಿತು ಎಲ್ಲ ಚಾಲಕರು ಹಾಗೂ ನಿರ್ವಾಹಕರ ಸಭೆ ನಡೆಸಿ ಸೂಕ್ತ ತಿಳುವಳಿಕೆ ನೀಡುವಂತೆ ಅಧ್ಯಕ್ಷರು ಸೂಚಿಸಿದರು. ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಂತೆಯೂ ಘಟಕ ನಿರ್ವಾಹಕರಿಗೆ ನಿರ್ದೇಶನ ನೀಡಲಾಯಿತು..

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ಯಾರಂಟಿ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Editor

Leave a comment