Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

KOPPAL.ಉರ್ದು ಶಿಕ್ಷಕರ ನೇಮಕಾತಿಗೆ ಆಗ್ರಹ: ಸಚಿವ ಮಧು ಬಂಗಾರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಮನವಿ.

Karunadu Gharjane News ಕೊಪ್ಪಳ:ಆ.18. ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ 15,000 ಶಿಕ್ಷಕರ ನೇಮಕಾತಿ ಆದೇಶದಲ್ಲಿ ಉರ್ದು ಮಾಧ್ಯಮ ಶಾಲಾ ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸಲಾಗಿದ್ದು, ತಕ್ಷಣವೇ ಪೂರಕ ಆದೇಶ (Corrigendum) ಹೊರಡಿಸಿ ಉರ್ದು ಶಿಕ್ಷಕರ ನೇಮಕಾತಿಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ಶಾಲಾ…

Karunadu Gharjane News ಕೊಪ್ಪಳ:ಆ.18. ರಾಜ್ಯ ಸರ್ಕಾರವು ಇತ್ತೀಚೆಗೆ ಹೊರಡಿಸಿರುವ 15,000 ಶಿಕ್ಷಕರ ನೇಮಕಾತಿ ಆದೇಶದಲ್ಲಿ ಉರ್ದು ಮಾಧ್ಯಮ ಶಾಲಾ ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸಲಾಗಿದ್ದು, ತಕ್ಷಣವೇ ಪೂರಕ ಆದೇಶ (Corrigendum) ಹೊರಡಿಸಿ ಉರ್ದು ಶಿಕ್ಷಕರ ನೇಮಕಾತಿಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ’ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

 

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು, ಸರ್ಕಾರ 15,000 ಶಿಕ್ಷಕರ ನೇಮಕಾತಿಗೆ ಮುಂದಾಗಿರುವುದು ಪ್ರಗತಿಪರ ಹೆಜ್ಜೆಯಾಗಿದ್ದರೂ,ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸಂಪೂರ್ಣವಾಗಿ ಹೊರಗಿಟ್ಟಿರುವುದು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಎಸಗಿದ ಶೈಕ್ಷಣಿಕ ಅನ್ಯಾಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

 

ಮನವಿಯಲ್ಲಿ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆ: ಭಾರತೀಯ ಸಂವಿಧಾನದ ವಿಧಿ 21A (ಶಿಕ್ಷಣದ ಹಕ್ಕು) ಹಾಗೂ ವಿಧಿ 350A ಪ್ರಕಾರ ಅಲ್ಪಸಂಖ್ಯಾತ ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಉರ್ದು ಶಿಕ್ಷಕರ ನೇಮಕಾತಿ ತಡೆಯುವುದು ಈ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆಯಾಗುತ್ತದೆ.

 

ಶೈಕ್ಷಣಿಕ ಹಿನ್ನೆಡೆ ಹಾಗೂ ಶಾಲೆಗಳ ಬಂದ್ ಭೀತಿ: ರಾಜ್ಯದ ನೂರಾರು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಬಡ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಶಿಕ್ಷಕರಿಲ್ಲದೆ ಹಲವು ಶಾಲೆಗಳು ಮುಚ್ಚುವ ಹಂತ ತಲುಪಿವೆ.

ಸಾಮಾಜಿಕ ನ್ಯಾಯಕ್ಕೆ ಧಕ್ಕೆ: ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಸಮುದಾಯಕ್ಕೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನ ಅವಕಾಶ ಒದಗಿಸುವುದು ಸಾಮಾಜಿಕ ನ್ಯಾಯದ ಹಕ್ಕಾಗಿದೆ.

ಆದ್ದರಿಂದ ಶಿಕ್ಷಣ ಸಚಿವರು ಈ ವಿಷಯವನ್ನು ಆಡಳಿತಾತ್ಮಕವಾಗಿ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಲ್ಲೇ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸೇರ್ಪಡೆಗೊಳಿಸಿ ತಕ್ಷಣ ವಿಶೇಷ ಅಧಿಸೂಚನೆ ಹೊರಡಿಸಬೇಕು ಹಾಗೂ ಉರ್ದು ಮಾಧ್ಯಮ ಶಾಲೆಗಳ ಉಳಿವು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

 

ಈ ಸಂದರ್ಭದಲ್ಲಿ ಶಾಲಾ ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ಎ.ಗಫಾರ್,ಗೌರವ ಅಧ್ಯಕ್ಷ ಬಸವರಾಜ್ ಶೀಲವಂತರ್, ಎಐಡಿವೈಓ ರಾಜ್ಯ ಸಮಿತಿ ಸದಸ್ಯ ಶರಣು ಗಡ್ಡಿ, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ಕೊಳಚೆ ನಿರ್ಮೂಲನಾ ವೇದಿಕೆಯ ಜಿಲ್ಲಾ ಸಂಚಾಲಕ ಮಖಬೂಲ್ ರಾಯಚೂರು, ಪ್ರಮುಖರಾದ ಮೌಲಾ ಹುಸೇನ್ ಹಣಗಿ, ಗಾಳೆಪ್ಪ ಮುಂಗೋಲಿ ಹಾಗೂ ಕಾನೂನು ವಿದ್ಯಾರ್ಥಿಗಳಾದ ಆಸಿಫ್,ಮೊಹಮ್ಮದ್ ಜಾವೀದ್,ಮೊಹಮ್ಮದ್ ಬಿಲಾಲ್,ಕೊಟಗಾರಗೇರಾ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ನಯೀಮುರ್ ರಹೆಮಾನ್ ಗೌರಿಪುರ.ಉರ್ದು ಮಾಧ್ಯಮ ಡಿಎಡ್ ಪದವೀಧರ ಆಕಾಂಕ್ಷಿಗಳಾದ ಶ್ರೀಮತಿ ಮಜರ್ ಸುಲ್ತಾನಾ, ಶ್ರೀಮತಿ ಮುನ್ನವರ್ ಜಹಾಂ,ಕುಮಾರಿ ಅನ್ವರ್ ಬಾನು ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Editor

Leave a comment