Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಬಿಜೆಪಿ ಮುಖಂಡರಿಗೆ ಸವಾಲು ಕೇಂದ್ರ ಸರ್ಕಾರದಿಂದ ಮೊದಲು ರೈತರಿಗೆ ಸಾಲ ಮನ್ನಾ ಮಾಡಲಿ: ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಅಗ್ರಹ

ಕರುನಾಡು ಘರ್ಜನೆ ಸುದ್ದಿ ಗದಗ ಬರಗಾಲದ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮೊದಲು ಕೇಂದ್ರ ಸರ್ಕಾರದಿಂದ ಸಾಲ ಮನ್ನಾ ಹಾಗೂ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಿ ಎಂದು ಸೈಯದ್ ಖಾಲಿದ್ ಕೊಪ್ಪಳ…

ಕರುನಾಡು ಘರ್ಜನೆ ಸುದ್ದಿ ಗದಗ ಬರಗಾಲದ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮೊದಲು ಕೇಂದ್ರ ಸರ್ಕಾರದಿಂದ ಸಾಲ ಮನ್ನಾ ಹಾಗೂ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಿ ಎಂದು ಸೈಯದ್ ಖಾಲಿದ್ ಕೊಪ್ಪಳ ಸವಾಲು ಹಾಕಿದ್ದಾರೆ.
ರೈತರ ಸಂಕಷ್ಟದ ಸಂದರ್ಭದಲ್ಲಿ ಕೇವಲ ಪ್ರತಿಭಟನೆ ಮತ್ತು ರಾಜಕೀಯ ಮಾಡುವುದರಿಂದ ಪ್ರಯೋಜನವಿಲ್ಲ. ರೈತರಿಗೆ ನಿಜವಾದ ಸಹಾಯವಾಗಬೇಕಾದರೆ ಕೇಂದ್ರ ಸರ್ಕಾರ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಬಿಜೆಪಿ ನಾಯಕರು ಒತ್ತಾಯಿಸಬೇಕು ಎಂದು ಅವರು ಹೇಳಿದರು.
ಅಲ್ಲದೆ, ರೈತರ ಸಾಲಮನ್ನಾ ಕುರಿತು ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ರೈತರ ಪರವಾಗಿ ಮಾತನಾಡುವ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮಟ್ಟದಲ್ಲಿ ರೈತರಿಗೆ ಅಗತ್ಯವಾದ ನೆರವು ಮತ್ತು ಪರಿಹಾರ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಹಲವಾರು ಜನಪರ ಯೋಜನೆಗಳ ಮೂಲಕ ರೈತರು, ಮಹಿಳೆಯರು ಹಾಗೂ ಸಾಮಾನ್ಯ ಜನರಿಗೆ ಶಕ್ತಿ ತುಂಬುವ ಕಾರ್ಯ ಮಾಡುತ್ತಿದೆ. ರೈತರ ಕಲ್ಯಾಣ ಮತ್ತು ಮಹಿಳೆಯರ ಸಬಲೀಕರಣಕ್ಕೆ ಸರ್ಕಾರದ ವಿವಿಧ ಯೋಜನೆಗಳು ಸಹಕಾರಿಯಾಗುತ್ತಿವೆ ಎಂದು ಅವರು ತಿಳಿಸಿದರು.
ಮಾಜಿ ಸಚಿವ ಶ್ರೀ ಎಚ್. ಕೆ. ಪಾಟೀಲರಂತಹ ನಾಯಕರು ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ, ಗದಗ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದಾರೆ. ರೈತರ ಕಲ್ಯಾಣ, ಗ್ರಾಮೀಣ ಅಭಿವೃದ್ಧಿ, ಶಿಕ್ಷಣ ಕ್ಷೇತ್ರದ ಪ್ರಗತಿ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ಅವರು ಜನಪರ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಸೈಯದ್ ಖಾಲಿದ್ ಕೊಪ್ಪಳ ಪತ್ರಿಕಾ ಪ್ರಕಟಣೆಯ ಮುಖಾಂತರ ತಿಳಿಸಿದ್ದಾರೆ.

Editor

Leave a comment