Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ವಾರ್ಡ ನಂ. ೨೪ ರಲ್ಲಿ ೧ ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಾಸಕರಾದ ಡಾ. ಎಚ್. ಕೆ. ಪಾಟೀಲ ಚಾಲನೆ

ಕರುನಾಡು ಘರ್ಜನೆ ಸುದ್ದಿ ಗದಗ ೩೧: ಗದಗ-ಬೆಟಗೇರಿ ನಗರಸಭೆ ವಾರ್ಡ ನಂ. ೨೪ ರಲ್ಲಿಯ ನಾಲ್ವಾಡ ಓಣಿಯಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಮತ್ತು ಐತಿಹಾಸಿಕ ಪಂಚರ ಹೊಂಡ ಬಾವಿಯ ಸ್ವಚ್ಛಗೊಳಿಸಿ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಚಾಲನೆಯನ್ನು ಮಾಜಿ ಸಚಿವರಾದ…

ಕರುನಾಡು ಘರ್ಜನೆ ಸುದ್ದಿ ಗದಗ ೩೧: ಗದಗ-ಬೆಟಗೇರಿ ನಗರಸಭೆ ವಾರ್ಡ ನಂ. ೨೪ ರಲ್ಲಿಯ ನಾಲ್ವಾಡ ಓಣಿಯಲ್ಲಿ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಮತ್ತು ಐತಿಹಾಸಿಕ ಪಂಚರ ಹೊಂಡ ಬಾವಿಯ ಸ್ವಚ್ಛಗೊಳಿಸಿ ಕುಡಿಯುವ ನೀರಿನ ಯೋಜನೆ ಕಾಮಗಾರಿಯ ಚಾಲನೆಯನ್ನು ಮಾಜಿ ಸಚಿವರಾದ ಜನಪ್ರಿಯ ಶಾಸಕರಾದ ಡಾ. ಎಚ್. ಕೆ. ಪಾಟೀಲರು ನೆರವೇರಿಸಿ ಮಾತನಾಡಿ ನಗರದ ಅಭಿವೃದ್ಧಿಗೆ ಈಗಾಗಲೇ ವಾರ್ಡ ನಂ. ೨೪ ರಲ್ಲಿ ಅತ್ಯಂತ ಅವಶ್ಯಕ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಅತ್ಯಂತ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು. ಮುಂಬರುವ ದಿನಗಳಲ್ಲಿ ಗದಗ-ಬೆಟಗೇರಿ ನಗರಕ್ಕೆ ಹೆಚ್ಚಿನ ಅನುದಾನ ಕಲ್ಪಿಸಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.
ಸದರಿ ಕಾಮಗಾರಿಗಳು ವಾರ್ಡ ನಂ. ೨೪ ರಲ್ಲಿ ಬರುವ ಸಿ. ಸಿ. ರಸ್ತೆ ನಿರ್ಮಾಣ, ಒಳಚರಂಡಿ ನಿರ್ಮಾಣ ಕಾಮಗಾರಿ ಮತ್ತು ಬೋರವೆಲ್ ಕೊರೆಯಿಸಿ ನೀರಿನ ಅನುಕೂಲ ಕಲ್ಪಿಸಿ ಯೋಜನೆ ಸೇರಿದಂತೆ ಒಟ್ಟು ೧ ಕೋಟಿ ಮೊತ್ತದ ಬೃಹತ್ ಕಾಮಗಾರಿಗಳನ್ನು ಒಳಗೊಂಡಿದೆ. ೩ ಬೋರವೆಲ್ ಮತ್ತು ೨ ಹೈಮಾಸ್ಕ್ ಬೀದಿ ದೀಪ ಅಳವಡಿಕೆ, ನಾಲ್ವಾಡಗಲ್ಲಿಯ ಓಂಕಾರೇಶ್ವರ ದೇವಸ್ಥಾನದ (ಫಾರ್ಮ ನಂ. ೩) ಉತಾರ ಮಾಡಿಸಿ ದೇವಸ್ಥಾನದ ಕಮೀಟಿಯವರಿಗೆ ವಿತರಿಸಲಾಯಿತು.
ಐತಿಹಾಸಿಕ ಪಂಚರ ಹೊಂಡ ಬಾವಿಯನ್ನು ಸ್ವಚ್ಛಗೊಳಿಸಿ ಸದರಿ ಬಾವಿಯಿಂದ ಮೋಟರ ಅಳವಡಿಸಿ ಪೈಪ್‌ಲೈನ್ ಮುಖಾಂತರ ಶಿವಳ್ಳಿಯವರ ಓಣಿಯಿಂದ ಗಾಳಪ್ಪನವರ ಓಣಿ, ಎಲಿಗಾರವರ ಓಣಿ, ಮಕಾನದಾರ ಮನೆ ಲೈನ್, ವೆಂಕಟೇಶ್ವರ ದೇವಸ್ಥಾನದ ಸುತ್ತಮುತ್ತಲಿನ ನಿವಾಸಿಗಳಿಗೆ ಕುಡಿಯುವ ನೀರಿನ ಪೈಪಲೈನ ಜೋಡಣೆ ಮಾಡಿ ಕುಡಿಯವ ನೀರಿನ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಿವಪ್ಪ ತಿಪ್ಪಣ್ಣ ಬಳ್ಳಾರಿಯವರು ಈ ಸಂದರ್ಭದಲ್ಲಿ ಸಮಗ್ರ ಕಾಮಗಾರಿಯ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಭು ಬುರಬುರೆ, ಬಿ.ಬಿ. ಅಸೂಟಿ, ಎಂ. ಸಿ. ಶೇಖ, ಬರಕತಲಿ ಮುಲ್ಲಾ, ಓಣಿಯ ಹಿರಿಯರಾದ ಬುಡ್ಡಣ್ಣ ಹಬೀಬ, ಅಶೋಕ ಜೈನ, ಈರಣ್ಣ ಲಕ್ಕುಂಡಿ, ಕುಬೇರಪ್ಪ ಪರ್ವತಗೌಡ್ರ, ವಿ. ಕೆ. ಮಟ್ಟಿ, ಅಪ್ಪುರಾಜ ಭದ್ರಕಾಳಿಮಠ, ಪ್ರವೀಣ ವಾರಕರ, ಸಿದ್ದಣ್ಣ ಹರ್ತಿ, ಮಂಜುನಾಥ ಲಕ್ಕುಂಡಿ, ಬಸವರಾಜ ಗಾಳಪ್ಪನವರ, ಬಸವರಾಜ ಹರ್ತಿ, ಮಲ್ಲಪ್ಪ ಅಣ್ಣಿಗೇರಿ, ಶ್ರೀಧರ ವಜ್ರಬಂಡಿ, ನಜೀರ ಕುನ್ನಿಬಾವಿ, ಮಂಜು ಮುಳಗುಂದ ಸೇರಿದಂತೆ ವಾರ್ಡ ನಂ. ೨೪ ರ ಗುರುಹಿರಿಯರು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು.

Editor

Leave a comment