Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ | ಬರಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ ವೇಳೆ ಮಾಧ್ಯಮದವರನ್ನು ತಳ್ಳಾಡಿದ ಪೊಲೀಸರು..! ವರದಿ ಮಾಡಲು ತೆರಳಿದ್ದ ಪತ್ರಕರ್ತರಿಗೆ ಪೊಲೀಸ್ ಸಿಬ್ಬಂದಿಯಿಂದ ಕಿರಿಕಿರಿ..!

ಕರುನಾಡು ಘರ್ಜನೆ ಸುದ್ದಿ ಗದಗ: ಮುಂಡರಗಿ ತಾಲ್ಲೂಕಿನ ಕದಾಪೂರಬರ ಪೀಡಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲಿಸಲು ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರೀತಿಯಲ್ಲಿ ವರದಿ ಮಾಡಲು ಅವಕಾಶ ನೀಡದೆ, ಪೊಲೀಸ್ ಸಿಬ್ಬಂದಿ ತಳ್ಳಾಡಿ ಕಿರಿಕಿರಿ ಉಂಟುಮಾಡಿದ್ದಾರೆ ಎಂಬ ಆರೋಪ…

ಕರುನಾಡು ಘರ್ಜನೆ ಸುದ್ದಿ ಗದಗ: ಮುಂಡರಗಿ ತಾಲ್ಲೂಕಿನ ಕದಾಪೂರಬರ ಪೀಡಿತ ಪ್ರದೇಶಗಳ ಪರಿಸ್ಥಿತಿ ಪರಿಶೀಲಿಸಲು ಮುಖ್ಯಮಂತ್ರಿ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರೀತಿಯಲ್ಲಿ ವರದಿ ಮಾಡಲು ಅವಕಾಶ ನೀಡದೆ, ಪೊಲೀಸ್ ಸಿಬ್ಬಂದಿ ತಳ್ಳಾಡಿ ಕಿರಿಕಿರಿ ಉಂಟುಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ವೇಳೆ ಸ್ಥಳೀಯ ಸಮಸ್ಯೆಗಳು ಹಾಗೂ ಬರ ಪರಿಸ್ಥಿತಿಯ ಕುರಿತು ವರದಿ ಮಾಡಲು ಸ್ಥಳಕ್ಕೆ ತೆರಳಿದ್ದ ಪತ್ರಕರ್ತರು ಮತ್ತು ಛಾಯಾಗ್ರಾಹಕರನ್ನು ಪೊಲೀಸರು ತಡೆದು, ಕೆಲವರನ್ನು ತಳ್ಳಾಡಿದ್ದಾರೆ ಎನ್ನಲಾಗಿದೆ.

 

ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಜವಾಬ್ದಾರಿ ಹೊಂದಿರುವ ಮಾಧ್ಯಮದವರಿಗೆ ವರದಿ ಮಾಡಲು ಅಗತ್ಯ ಅವಕಾಶ ಕಲ್ಪಿಸುವುದು ಆಡಳಿತ ಹಾಗೂ ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ, ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇಳೆ ಮಾಧ್ಯಮದವರೊಂದಿಗೆ ಈ ರೀತಿಯ ವರ್ತನೆ ತೋರಿರುವುದು ಪತ್ರಕರ್ತರ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

 

“ಭದ್ರತಾ ಕಾರಣಗಳಿದ್ದರೆ ಮಾಧ್ಯಮದವರಿಗೆ ಮುಂಚಿತವಾಗಿ ಸೂಕ್ತ ಮಾರ್ಗಸೂಚಿ ನೀಡಬಹುದಿತ್ತು. ಆದರೆ ವರದಿ ಮಾಡಲು ಬಂದ ಪತ್ರಕರ್ತರನ್ನು ತಳ್ಳಾಡುವುದು ಹಾಗೂ ಅವಮಾನಿಸುವುದು ಸರಿಯಾದ ಕ್ರಮವಲ್ಲ” ಎಂದು ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Editor

Leave a comment