Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕೊಪ್ಪಳ | ಬೆದವಟ್ಟಿ ಬ್ಯಾರೇಜ್‌ನಲ್ಲಿ ನವಜಾತ ಶಿಶು ಶವ ಪತ್ತೆ; ಸ್ಥಳೀಯರಲ್ಲಿ ಆತಂಕ

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ಕುಕನೂರು ತಾಲೂಕಿನ ಬೆದವಟ್ಟಿ ಗ್ರಾಮದ ಸಮೀಪದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆದವಟ್ಟಿ ಗ್ರಾಮದ ಬಳಿಯ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ಜಲಜೀವನ್ ಮಿಷನ್‌ಗೆ ಸಂಬಂಧಿಸಿದ…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ಕುಕನೂರು ತಾಲೂಕಿನ ಬೆದವಟ್ಟಿ ಗ್ರಾಮದ ಸಮೀಪದ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಬೆದವಟ್ಟಿ ಗ್ರಾಮದ ಬಳಿಯ ಬ್ರಿಜ್ ಕಮ್ ಬ್ಯಾರೇಜ್‌ನಲ್ಲಿ ಜಲಜೀವನ್ ಮಿಷನ್‌ಗೆ ಸಂಬಂಧಿಸಿದ ನೀರಿನ ಪೈಪ್ ಸಮೀಪ ಶಿಶುವಿನ ಶವ ನೀರಿನಲ್ಲಿ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಶಿಶುವಿನ ಶವ ಎಷ್ಟು ಸಮಯದಿಂದ ನೀರಿನಲ್ಲಿ ಇತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ಎರಡು-ಮೂರು ದಿನಗಳ ಹಿಂದೆ ಶಿಶುವನ್ನು ನೀರಿಗೆ ಎಸೆದಿರಬಹುದೆಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಾಗಿಲ್ಲ.

ನವಜಾತ ಶಿಶುವನ್ನು ಯಾರಾದರೂ ನೀರಿಗೆ ಎಸೆದು ಹೋಗಿದ್ದಾರೆಯೇ ಅಥವಾ ಘಟನೆಗೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಿಶುವಿನ ಗುರುತು ಹಾಗೂ ಘಟನೆಯ ಹಿಂದೆ ಇರುವವರ ಪತ್ತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

‘ಮಮತೆಯ ತೊಟ್ಟಿಲು’ ಬಳಸಲು ಸಿಡಿಪಿಒ ಮನವಿ

ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಸಿಡಿಪಿಒ ಬೆಟ್ಟದಪ್ಪ ಮಾಳೇಕೊಪ್ಪ ಅವರು, ನವಜಾತ ಶಿಶುಗಳನ್ನು ಅಪಾಯಕ್ಕೆ ತಳ್ಳುವ ಬದಲು ಸರ್ಕಾರದ ‘ಮಮತೆಯ ತೊಟ್ಟಿಲು’ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಗುವನ್ನು ಸಾಕಲು ಸಾಧ್ಯವಾಗದ ಪರಿಸ್ಥಿತಿ ಇದ್ದಲ್ಲಿ ಅಥವಾ ಮಗುವನ್ನು ಪೋಷಿಸಲು ಇಚ್ಛೆಯಿಲ್ಲದಿದ್ದಲ್ಲಿ, ಮಗುವನ್ನು ತ್ಯಜಿಸುವ ಬದಲು ‘ಮಮತೆಯ ತೊಟ್ಟಿಲು’ನಲ್ಲಿ ಸುರಕ್ಷಿತವಾಗಿ ಇರಿಸಬಹುದು. ಜೀವಂತ ಮಗುವನ್ನು ತೊಟ್ಟಿಲಿನಲ್ಲಿ ಇರಿಸಿದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಮಗುವಿನ ರಕ್ಷಣೆ ಮತ್ತು ಪೋಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಪತ್ತೆಹಚ್ಚುವಂತೆ ಸೂಚಿಸಲಾಗಿದೆ ಎಂದು ಸಿಡಿಪಿಒ ಬೆಟ್ಟದಪ್ಪ ಮಾಳೇಕೊಪ್ಪ ತಿಳಿಸಿದ್ದಾರೆ.

ಘಟನೆಯಿಂದ ಬೆದವಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ತನಿಖೆಯ ಬಳಿಕವಷ್ಟೇ ಘಟನೆಯ ಹಿಂದಿರುವ ನಿಖರ ಕಾರಣ ಹಾಗೂ ವ್ಯಕ್ತಿಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊರಬರಬೇಕಿದೆ.

Editor

Leave a comment