ಕರುನಾಡು ಘರ್ಜನೆ ಸುದ್ದಿ ಗದಗ 02 : ಧಾರವಾಡದ ನಿಸರ್ಗ ಯೋಗ ಸೆಂಟರ್ ಹಾಗೂ ಕಿಟಲ್ ಕಲಾ ಮಹಾವಿದ್ಯಾಲಯದ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಗದಗದ ವಿದ್ಯಾರ್ಥಿನಿ ಸಾಹಿತ್ಯ ಕೆ. ಜಾಧವ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸಿದ್ದಲಿಂಗ ನಗರದ ಬಸವೇಶ್ವರ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸಾಹಿತ್ಯ ಕೆ. ಜಾಧವ, 8ರಿಂದ 12 ವರ್ಷದ ಬಾಲಕಿಯರ ವಿಭಾಗದಲ್ಲಿ ಭಾಗವಹಿಸಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.
ಸಾಹಿತ್ಯ ಅವರ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಲತಾ ಕಾಲವಾಡ, ಶಿವಾನಂದ ಗಿಡ್ಡಕೆಂಚಣ್ಣವರ, ದೈಹಿಕ ಶಿಕ್ಷಣ ಶಿಕ್ಷಕರಾದ ಎಸ್.ಎಂ. ಬುರಡಿ, ಪಾಲಕರಾದ ಮಾಲಾಶ್ರೀ ಹಾಗೂ ಕೃಷ್ಣಾಜಿ ಜಾಧವ ಸೇರಿದಂತೆ ಯೋಗಾಸನ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.