ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 5: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಎನ್‌ಎಫ್‌ಎಸ್‌ಎ-2013 ಅಡಿಯಲ್ಲಿ ಪಡಿತರ ಚೀಟಿದಾರರ ಇ-ಕೆವೈಸಿಯನ್ನು ಮಾಡಿಸುವುದು ಕಡ್ಡಯವಾಗಿ ಮಾಡಬೇಕಾಗಿರುತ್ತದೆ. ಸೆಪ್ಟೆಂಬರ್ 30 ರೊಳಗೆ ಪೂರ್ಣಗೊಳಿಸುವಂತೆ ಸೆಪ್ಟೆಂಬರ್ 04 ರಂದು ಮಾನ್ಯ ಸಚಿವರು ಆಹಾರ,ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತç ಇಲಾಖೆ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದಲ್ಲಿ ಸೂಚಿಸಿರುತ್ತಾರೆ.
ಸಾರ್ವಜನಿಕರಲ್ಲಿ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ದೃಡೀಕರಿಸಿ 5 ವರ್ಷ ಪೂರೈಸಿದ ಒಟ್ಟು 4,59,453 ಫಲಾನುಭವಿಗಳಲ್ಲಿ 18,815 ಫಲಾನುಭವಿಗಳ ಇ-ಕೆವೈಸಿ ಮಾಡಿಸಿಕೊಂಡಿದ್ದು, ಇನ್ನೂಳಿದ 3,80,815 ಫಲಾನುಭವಿಗಳ ಇ-ಕೆವೈಸಿ ಮಾಡಿಸಬೇಕಾಗಿರುವುದರಿಂದ ಫಲಾನುಭವಿಗಳ ಪಟ್ಟಿಯನ್ನು ಆಯಾ ತಾಲೂಕಿನ ನ್ಯಾಯಬೆಲೆ ಅಂಗಡಿ ಮಾಲೀಕರುಗಳಿಗೆ ನೀಡಲಾಗಿದ್ದು ಫಲಾನುಭವಿಗಳು ತಮಗೆ ಜೋಡಣೆಯಾದ ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆಯು ಉಚಿತವಾಗಿದ್ದು, ಯಾವುದೇ ಶುಲ್ಕ ಇರುವುದಿಲ್ಲ ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ.
ನಿಮ್ಮ ನ್ಯಾಯಬೆಲೆ ಅಂಗಡಿಗೆ ತೆರಳಿ ಕಡ್ಡಾಯವಾಗಿ ಇ-ಕೆವೈಸಿಯನ್ನು ಕೆವೈಸಿ ಮಾಡಿಸಿಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.