Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಮಹಾತ್ಮ ಗಾಂಧಿ ಮೆಮೋರಿಯಲ್ ಫೌಂಡೇಶನ್ ಕಚೇರಿಗೆ ಎಚ್.ಕೆ. ಪಾಟೀಲ್ ಭೇಟಿ.

ಕರುನಾಡು ಘರ್ಜನೆ ಸುದ್ದಿ ಫೌಂಡೇಶನ್ ಕೈಗೊಂಡಿರುವ ಸಾಮಾಜಿಕ ಕಾರ್ಯಗಳಿಗೆ ಸಂಪೂರ್ಣ ಸಹಕಾರದ ಭರವಸೆ ಗದಗ: ನಾಡು ಕಂಡ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ. ಎಚ್.ಕೆ. ಪಾಟೀಲ್ ಅವರು ಇಂದು ಮಹಾತ್ಮ ಗಾಂಧಿ ಮೆಮೋರಿಯಲ್ ಫೌಂಡೇಶನ್‌ನ ಕಾರ್ಯಾಲಯಕ್ಕೆ…

ಕರುನಾಡು ಘರ್ಜನೆ ಸುದ್ದಿ ಫೌಂಡೇಶನ್ ಕೈಗೊಂಡಿರುವ ಸಾಮಾಜಿಕ ಕಾರ್ಯಗಳಿಗೆ ಸಂಪೂರ್ಣ ಸಹಕಾರದ ಭರವಸೆ

ಗದಗ: ನಾಡು ಕಂಡ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಾ. ಎಚ್.ಕೆ. ಪಾಟೀಲ್ ಅವರು ಇಂದು ಮಹಾತ್ಮ ಗಾಂಧಿ ಮೆಮೋರಿಯಲ್ ಫೌಂಡೇಶನ್‌ನ ಕಾರ್ಯಾಲಯಕ್ಕೆ ಭೇಟಿ ನೀಡಿ, ಸಂಸ್ಥೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಸಾಮಾಜಿಕ ಹಾಗೂ ಜನಪರ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಫೌಂಡೇಶನ್‌ನ ಅಧ್ಯಕ್ಷರಾದ ಬಾಬಾ ದಾವಲ್‌ಸಾಬ್ ನರಸಾಪುರ ಅವರು ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಇದುವರೆಗೆ ಕೈಗೊಂಡಿರುವ ಜನಪರ ಕಾರ್ಯಗಳ ಕುರಿತು ಡಾ. ಎಚ್.ಕೆ. ಪಾಟೀಲ್ ಅವರಿಗೆ ವಿವರಿಸಿದರು.

ಫೌಂಡೇಶನ್‌ನ ಕಾರ್ಯಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಡಾ. ಎಚ್.ಕೆ. ಪಾಟೀಲ್ ಅವರು, ಸಂಸ್ಥೆಯು ಕೈಗೊಳ್ಳುವ ಉತ್ತಮ ಹಾಗೂ ಜನಪರ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಹಾಗೂ ಮುಂದಿನ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿ ಯಶಸ್ವಿಗೊಳಿಸಲು ಅಗತ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದರು.

ಎಲ್ಲಾ ಸಮುದಾಯಗಳ ಹಿತ ಹಾಗೂ ಬಡವರ ಕಲ್ಯಾಣಕ್ಕಾಗಿ ಫೌಂಡೇಶನ್ ನಡೆಸುತ್ತಿರುವ ಕಾರ್ಯಗಳಿಗೆ ಗಣ್ಯರ ಬೆಂಬಲ ದೊರೆತಿರುವುದು ಸಂಸ್ಥೆಯ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ.

ಈ ಸಂದರ್ಭದಲ್ಲಿ ಫೌಂಡೇಶನ್‌ನ ಉಪಾಧ್ಯಕ್ಷರಾದ ಇಸ್ಮಾಯಿಲ್ ಓದಿಕರ್ ಅವರು ಡಾ. ಎಚ್.ಕೆ. ಪಾಟೀಲ್ ಅವರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸದಸ್ಯರಾದ ಮೊಹಮ್ಮದ್ ರಫೀಕ್ ಹಳೆಮಸೂತಿ, ಅಬ್ದುಲ್ ಗಬ್ಬರ್ ಕಾತರಕಿ, ವಿಠ್ಠಲ್ ಅರವಟಗಿ, ಮಹಬೂಬ್ ಸಾಬ್ ಮುಲ್ಲಾ, ಅಲ್ಲಾಭಕ್ಷ ಮುಖಂಡರು, ರಾಜಾಸಾಬ್ ತಾವರಗೇರಿ ಸೇರಿದಂತೆ ಫೌಂಡೇಶನ್‌ನ ಅಭಿಮಾನಿಗಳು, ಹಿತೈಷಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Editor

Leave a comment