Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ ಜಿಲ್ಲಾ ಕ್ರೀಡಾಂಗಣದಲ್ಲಿ ಪುಟ್‌ಬಾಲ್ ಟರ್ಪ ಮೈದಾನ ಮಾಡುವದನ್ನು ವಿರೋಧಿಸಿ ಕ್ರೀಡಾಂಣಕ್ಕೆ ಮುತ್ತಿಗೆ.! ರಾಜು ಖಾನಪ್ಪನವರ ಮತ್ತು ಸಂಗಡಿಗರನ್ನು ಪೊಲೀಸರು ವಶಕ್ಕೆ..!

ಕರುನಾಡು ಘರ್ಜನೆ ಸುದ್ದಿ ಗದಗ: ಸುಸ್ಥಿತಿಯಲ್ಲಿರುವ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಕ್ರೀಡೆಗೆ ಅನುಕೂಲತೆ ಕಲ್ಪಿಸಲು ಸಿಂಥೆಟಿಕ್ ಮೈದಾನ ನಿರ್ಮಿಸುವ ಭರದಲ್ಲಿ ಉಳಿದ ಕ್ರೀಡೆಗಳನ್ನು ಅಲಕ್ಷಿಸಲಾಗುತ್ತಿದೆಯೆಂದು ಆರೋಪಿಸಿ ಶಿವರಾಮಕೃಷ್ಣ ಸೇವಾ ಟ್ರಸ್ಟ ಅಧ್ಯಕ್ಷ ರಾಜೂ ಖಾನಪ್ಪನವರ ನೇತ್ರತ್ವದಲ್ಲಿ ನೂರಾರು ಕ್ರೀಡಾಪಟುಗಳು,ವಿವಿಧ ಸಂಘಟನೆಗಳ…

ಕರುನಾಡು ಘರ್ಜನೆ ಸುದ್ದಿ ಗದಗ: ಸುಸ್ಥಿತಿಯಲ್ಲಿರುವ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಕ್ರೀಡೆಗೆ ಅನುಕೂಲತೆ ಕಲ್ಪಿಸಲು ಸಿಂಥೆಟಿಕ್ ಮೈದಾನ ನಿರ್ಮಿಸುವ ಭರದಲ್ಲಿ ಉಳಿದ ಕ್ರೀಡೆಗಳನ್ನು ಅಲಕ್ಷಿಸಲಾಗುತ್ತಿದೆಯೆಂದು ಆರೋಪಿಸಿ ಶಿವರಾಮಕೃಷ್ಣ ಸೇವಾ ಟ್ರಸ್ಟ ಅಧ್ಯಕ್ಷ ರಾಜೂ ಖಾನಪ್ಪನವರ ನೇತ್ರತ್ವದಲ್ಲಿ ನೂರಾರು ಕ್ರೀಡಾಪಟುಗಳು,ವಿವಿಧ ಸಂಘಟನೆಗಳ ಸದಸ್ಯರು ಜಿಲ್ಲಾ ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಇದರಿಂದಾಗಿ ಕ್ರೀಡಾಂಗಣದ ಸುತ್ತಮುತ್ತಲಿನ ಪರಿಸರದಲ್ಲಿ ಭಾರೀ ಪೊಲೀಸ್ ಬಂದೋಬಸ್ತ ಎರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಕ್ರೀಡಾಪಟುಗಳು ಹಾಗೂ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಅವರೊಂದಿಗೆ ತೀವ್ರ ವಾಗ್ವಾದವಾಯಿತು.

ಫುಟ್‌ಬಾಲ್‌ಗೆ ಹೊಸ ಮೈದಾನ ಸಿಗಲಿ ಎಂಬುದು ಕ್ರೀಡಾಪಟುಗಳ ಆಶಯ. ಆದರೆ ಆ ಮೈದಾನಕ್ಕಾಗಿ ಜಿಲ್ಲೆಯ ಇತರೆ ಕ್ರೀಡೆಗಳ ಅಂಗಳವೇ ಕಿರಿದಾಗಬಾರದು! ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ಕ್ರೀಡಾ ತಾಣವಾಗಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ತರಾತುರಿಯಲ್ಲಿ ಕೈಗೊಳ್ಳಲಾಗುತ್ತಿರುವ ಸಿಂಥೆಟಿಕ್ ಟರ್ಫ್ ಫುಟ್‌ಬಾಲ್ ಮೈದಾನ ಕಾಮಗಾರಿ ಇದೀಗ ಕ್ರೀಡಾಪಟುಗಳ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲಾ ಕ್ರೀಡಾಂಗಣವು ಕೇವಲ ಫುಟ್‌ಬಾಲ್‌ಗಷ್ಟೇ ಸೀಮಿತವಲ್ಲ. ದಸರಾ ಕ್ರೀಡಾಕೂಟ, ಸರ್ಕಾರಿ ನೌಕರರ ಕ್ರೀಡಾಕೂಟ, ಶಾಲಾ-ಕಾಲೇಜುಗಳ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳು ಸೇರಿದಂತೆ ನೂರಾರು ಕ್ರೀಡಾ ಚಟುವಟಿಕೆಗಳಿಗೆ ಇದೇ ಪ್ರಮುಖ ವೇದಿಕೆಯಾಗಿದೆ. ಸ್ವಾತಂತ್ರ‍್ಯೋತ್ಸವ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಸೇರಿದಂತೆ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಿಗೂ ಕ್ರೀಡಾಂಗಣ ಬಳಕೆಯಾಗುತ್ತಿದೆ.

ಸಿಂಥೆಟಿಕ್ ಟರ್ಫ್ ನಿರ್ಮಾಣವಾದರೆ ಅಥ್ಲೆಟಿಕ್ಸ್ನ ಹಲವು ವಿಭಾಗಗಳಿಗೆ ಜಾಗದ ಸಮಸ್ಯೆ ಎದುರಾಗಲಿದೆ ಎಂಬ ಆತಂಕ ಕ್ರೀಡಾಪಟುಗಳದ್ದು. ಶಾಟ್‌ಪುಟ್, ಡಿಸ್ಕಸ್ ಥ್ರೋ, ಜಾವೆಲಿನ್ ಥ್ರೋ, ಹ್ಯಾಮರ್ ಥ್ರೋ ಸೇರಿದಂತೆ ಎಸೆತ ವಿಭಾಗಗಳ ತರಬೇತಿ ಮತ್ತು ಸ್ಪರ್ಧೆಗಳಿಗೆ ಅಗತ್ಯವಾದ ಸ್ಥಳ ಲಭ್ಯವಾಗದ ಪರಿಸ್ಥಿತಿ ನಿರ್ಮಾಣವಾಗಬಹುದು. ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಿಂದ ಬರುವ ಪ್ರತಿಭಾವಂತ ಕ್ರೀಡಾಪಟುಗಳು ತರಬೇತಿಗಾಗಿ ಶಾಲಾ-ಕಾಲೇಜುಗಳ ಮೈದಾನಗಳನ್ನು ಹುಡುಕಬೇಕಾದ ಅನಿವಾರ್ಯತೆ ಎದುರಾಗಲಿದೆ.

ಫುಟ್‌ಬಾಲ್‌ಗೆ ಸೌಲಭ್ಯ ಬೇಕು; ಆದರೆ ಉಳಿದ ಕ್ರೀಡೆಗಳ ಬೆಲೆ ತೆತ್ತು ಅಲ್ಲ!

ಫುಟ್‌ಬಾಲ್ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸುವುದಕ್ಕೆ ವಿರೋಧವಿಲ್ಲ. ಆದರೆ ಬಹುಉದ್ದೇಶಿತ ಜಿಲ್ಲಾ ಕ್ರೀಡಾಂಗಣದ ಸ್ವರೂಪಕ್ಕೆ ಧಕ್ಕೆಯಾಗದಂತೆ ಯೋಜನೆ ರೂಪಿಸಬೇಕು ಎಂಬುದು ಕ್ರೀಡಾಪಟುಗಳ ಆಗ್ರಹ.

ಸಿಂಥೆಟಿಕ್ ಟರ್ಫ್ ನಿರ್ಮಾಣಕ್ಕಿಂತ ಮೊದಲು ಜಿಲ್ಲೆಯ ಎಲ್ಲ ಕ್ರೀಡಾ ಸಂಘಟನೆಗಳು, ತರಬೇತುದಾರರು, ಕ್ರೀಡಾಪಟುಗಳು ಹಾಗೂ ತಜ್ಞರೊಂದಿಗೆ ಸಮಾಲೋಚನೆ ನಡೆಸಬೇಕು. ಕ್ರೀಡಾಂಗಣದ ಒಟ್ಟು ವಿಸ್ತೀರ್ಣ, ಭವಿಷ್ಯದ ಕ್ರೀಡಾ ಚಟುವಟಿಕೆಗಳು ಹಾಗೂ ವಿವಿಧ ಕ್ರೀಡೆಗಳ ಅಗತ್ಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಬೇಕು.

ಫುಟ್‌ಬಾಲ್ ಮೈದಾನ ನಿರ್ಮಾಣ ಅನಿವಾರ್ಯವಾಗಿದ್ದರೆ ಸಿಂಥೆಟಿಕ್ ಟರ್ಫ್ ಬದಲಿಗೆ ನೈಸರ್ಗಿಕ ಹುಲ್ಲಿನ ಗ್ರಾಸ್ ಮೈದಾನ ನಿರ್ಮಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು. ಇದರಿಂದ ಫುಟ್‌ಬಾಲ್‌ಗೆ ಸೌಲಭ್ಯ ಕಲ್ಪಿಸುವುದರ ಜತೆಗೆ ಕ್ರೀಡಾಂಗಣದ ಬಹುಉದ್ದೇಶಿತ ಸ್ವರೂಪವನ್ನು ಉಳಿಸಿಕೊಳ್ಳಲು ಅವಕಾಶ ಸಿಗಲಿದೆ.

ಈ ಹಿನ್ನೆಲೆಯಲ್ಲಿ ಸಿಂಥೆಟಿಕ್ ಟರ್ಫ್ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಸ್ಥಳ ಪರಿಶೀಲನೆ ನಡೆಸಬೇಕು. ಜಿಲ್ಲೆಯ ಕ್ರೀಡಾ ಸಂಘಟನೆಗಳ ಸಭೆ ಕರೆದು ಅಭಿಪ್ರಾಯ ಪಡೆಯಬೇಕು. ನಂತರ ತಜ್ಞರ ಸಲಹೆಯೊಂದಿಗೆ ದೀರ್ಘಕಾಲೀನ ಸಮಗ್ರ ಕ್ರೀಡಾಂಗಣ ಅಭಿವೃದ್ಧಿ ಯೋಜನೆ ರೂಪಿಸಬೇಕು ಎಂದು ಕ್ರೀಡಾಪಟುಗಳು ಆಗ್ರಹಿಸಿದ್ದಾರೆ.

“ಒಂದು ಕ್ರೀಡೆಗೆ ಮೈದಾನ ಸೃಷ್ಟಿಸುವ ಭರದಲ್ಲಿ ಹಲವು ಕ್ರೀಡೆಗಳ ಭವಿಷ್ಯವನ್ನು ಕಸಿದುಕೊಳ್ಳಬಾರದು” ಎಂಬುದು ಜಿಲ್ಲೆಯ ಕ್ರೀಡಾಪಟುಗಳ ಒಕ್ಕೊರಲಿನ ಸಂದೇಶವಾಗಿದೆ.

ಈ ಸಂದರ್ಭದಲ್ಲಿ ಅರವಿಂದ ಹುಲ್ಲೂರ,ವೆಂಕಟೇಶ ದೊಡ್ಡಮನಿ,ಮಹಾಂತೇಶ ಪಾಟೀಲ,ಮಹೇಶ ರೋಖಡೆ ಸೇರಿದಂತೆ ನೂರಾರು ಜನರಿದ್ದರು.

Editor

Leave a comment