Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಹಕ್ಕಿನ ಪಡಿತರಕ್ಕಾಗಿ ಬಡವರು ಗಂಟೆಗಟ್ಟಲೆ ಕಾಯುವ ಸ್ಥಿತಿ ಕೊನೆಗೊಳ್ಳಲಿ — ತಾಂತ್ರಿಕ ಸಮಸ್ಯೆ ಬಗೆಹರಿಸಿ, ಜನರಿಗೆ ಸುಗಮ ಸೇವೆ ನೀಡಲಿ! ಕರೀಮ್ ಸುಣಗಾರ್

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಜಿಲ್ಲೆಯ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರು ಪಡಿತರ ಪಡೆಯಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಪಡಿತರ ಚೀಟಿಗೆ ಅಕ್ಕಿ ಪಡೆಯಲು ಸುಮಾರು 30ರಿಂದ 40…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಜಿಲ್ಲೆಯ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರು ಪಡಿತರ ಪಡೆಯಲು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಪಡಿತರ ಚೀಟಿಗೆ ಅಕ್ಕಿ ಪಡೆಯಲು ಸುಮಾರು 30ರಿಂದ 40 ನಿಮಿಷಗಳವರೆಗೆ ಸಮಯ ಬೇಕಾಗುತ್ತಿದ್ದು, ಕೆಲ ಸಂದರ್ಭಗಳಲ್ಲಿ ಸರ್ವರ್ ಕೈಕೊಟ್ಟರೆ ಫಲಾನುಭವಿಗಳು ಬೆಳಗ್ಗೆಯಿಂದ ಸಂಜೆವರೆಗೂ ನ್ಯಾಯಬೆಲೆ ಅಂಗಡಿಗಳ ಮುಂದೆ ಕಾಯುವಂತಾಗಿದೆ.

ಇದರಿಂದ ದಿನಗೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಬಡ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಪಡಿತರಕ್ಕಾಗಿ ಗಂಟೆಗಟ್ಟಲೆ ಕಾಯುವುದರಿಂದ ಒಂದು ದಿನದ ಕೂಲಿ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲ ಫಲಾನುಭವಿಗಳಿಗೂ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ.

ಸರ್ವರ್ ಸಮಸ್ಯೆಯಿಂದಾಗಿ ಪಡಿತರ ವಿತರಣೆ ವಿಳಂಬವಾಗುತ್ತಿರುವುದರಿಂದ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಫಲಾನುಭವಿಗಳು ಹಾಗೂ ಅಂಗಡಿ ನಿರ್ವಹಕರ ನಡುವೆ ಮಾತಿನ ಚಕಮಕಿ ಮತ್ತು ಗೊಂದಲದ ವಾತಾವರಣ ನಿರ್ಮಾಣವಾಗುತ್ತಿದೆ. ಸಮಸ್ಯೆಗೆ ಯಾರನ್ನೂ ವೈಯಕ್ತಿಕವಾಗಿ ಹೊಣೆ ಮಾಡುವ ಬದಲು, ತಾಂತ್ರಿಕ ದೋಷವನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ಪರಿಹರಿಸುವ ಅಗತ್ಯವಿದೆ.

ಬಡವರ ಹಕ್ಕಿನ ಪಡಿತರ ಪಡೆಯಲು ಬಡವರೇ ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಮುಂದುವರಿಯಬಾರದು. ಪಡಿತರ ವಿತರಣಾ ವ್ಯವಸ್ಥೆ ಸುಗಮವಾಗುವಂತೆ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಗದಗ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದರ ಜೊತೆಗೆ, ಸಮಸ್ಯೆ ಮುಂದುವರಿದ ಸಂದರ್ಭದಲ್ಲಿ ಫಲಾನುಭವಿಗಳಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲರಿಗೆ ಆದ್ಯತೆ ನೀಡುವ ಮೂಲಕ ಪಡಿತರ ವಿತರಣೆಯನ್ನು ಸುಗಮಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ; ಬಡ ಜನರಿಗೆ ಸಕಾಲದಲ್ಲಿ ದೊರೆಯಬೇಕಾದ ಪಡಿತರ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟದ ಪ್ರಶ್ನೆಯಾಗಿದೆ.!

Editor

Leave a comment