ಗದಗ ಸಪ್ಟೆಂಬರ್ 12: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರು ಸೆಪ್ಟೆಂಬರ್ 13 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮದ ವಿವರ ಇಂತಿದೆ.
ಸೆಪ್ಟೆಂಬರ್ 13 ರಂದು ಬೆಳಿಗ್ಗೆ 9 ಗಂಟೆಗೆ ಲಕ್ಷ್ಮೇಶ್ವರಕ್ಕೆ ಆಗಮಿಸಿ ಅಲ್ಲಿಂದ ಗದಗಿಗೆ ಆಗಮಿಸುವರು. ಬಳಿಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲೆ, ಹಾಸ್ಟೆಲ್ ಹಾಗೂ ಆಸ್ಪತ್ರೆಗಳಿಗೆ ಭೇಟಿ ನೀಡುವರು.
ಬೆಳಿಗ್ಗೆ 10 ಗಂಟೆಗೆ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಆಧುನಿಕ ವೈದ್ಯಕೀಯ ಉಪಕರಣಗಳ ಲೋಕಾರ್ಪಣೆ ಹಾಗೂ ಸಂಸ್ಥೆಯ ಆವರಣದಲ್ಲಿ ಸೌರ ವಿದ್ಯುತ್ ಉತ್ಪಾದನಾ ಘಟಕ ಮತ್ತು ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಅಲ್ಲಿಯೇ ಬೆಳಿಗ್ಗೆ 11 ಗಂಟೆಗೆ ಗದಗ ಐ.ಎಂ.ಎ ವತಿಯಿಂದ ಆಯೋಜಿಸಿರುವ ಶತಮಾನೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 2:30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಕೇರಳ ರಾಜ್ಯದ ಕ್ಯಾಲಿಕಟ್ ಗೆ ಪ್ರಯಾಣ ಬೆಳೆಸುವರು.