ಶಬ್ಬೀರ್ ಅಹ್ಮದ್ ಬೋಲೆಖಾನ್ ಮೌಲಾನ ಅಧ್ಯಕ್ಷರಾಗಿ, ರಮೀಜಾ ಬೇಗಂ ತಾಪಲ್‌ವಾಲೆ ಉಪಾಧ್ಯಕ್ಷರಾಗಿ ಆಯ್ಕೆ
ಕರುನಾಡು ಘರ್ಜನೆ ಸುದ್ದಿ ಗದಗ, ಸೆ.12: ನಗರದ ಡಿಸಿ ಮಿಲ್ ರೋಡ್‌ನಲ್ಲಿರುವ ಉರ್ದು ಶಾಲೆ ನಂ.1ರಲ್ಲಿ ನೂತನ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಶಾಲೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳ ಪಾಲಕರು, ಹಿಂದಿನ ಎಸ್‌ಡಿಎಂಸಿ ಸದಸ್ಯರು ಹಾಗೂ ಶಾಲೆಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು. ನಿಯಮಾನುಸಾರ ಪಾಲಕರ ಪೈಕಿ 9 ಪುರುಷರು ಹಾಗೂ 9 ಮಹಿಳೆಯರನ್ನು ಎಸ್‌ಡಿಎಂಸಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

ನೂತನವಾಗಿ ಆಯ್ಕೆಯಾದ ಸದಸ್ಯರ ಪೈಕಿ ಜನಾಬ್ ಶಬ್ಬೀರ್ ಅಹ್ಮದ್ ಬೋಲೆಖಾನ್ ಮೌಲಾನ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಶ್ರೀಮತಿ ರಮೀಜಾ ಬೇಗಂ ತಾಪಲ್‌ವಾಲೆ ಅವರನ್ನು ಉಪಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗದಗ-ಬೆಟಗೇರಿ ನಗರಸಭೆ ಸದಸ್ಯ ಜೆ.ಆರ್. ನಮಾಜಿ, ನೂತನ ಎಸ್‌ಡಿಎಂಸಿ ಸದಸ್ಯರು ಶಾಲೆಯ ಅಭಿವೃದ್ಧಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.
ನೂತನವಾಗಿ ಆಯ್ಕೆಯಾದ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ವಾರ್ಡ್ ನಂ.16, 17 ಮತ್ತು 18ರ ಸಾರ್ವಜನಿಕರು ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಿದ್ದಾರೆ.
ಅಲ್ಲಾಹ್ ಎಲ್ಲರಿಗೂ ಒಳಿತನ್ನು ಕರುಣಿಸಲಿ.
ಜೈ ಹಿಂದ್, ಜೈ ಕರ್ನಾಟಕ ಮಾತೆ.