Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಜಿಲ್ಲಾಡಳಿತ ಭವನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ.

ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತç : ಶಾಸಕ ಡಾ.ಎಚ್.ಕೆ. ಪಾಟೀಲ ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 15: ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತç ವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ…

ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತç : ಶಾಸಕ ಡಾ.ಎಚ್.ಕೆ. ಪಾಟೀಲ

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 15: ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತç ವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಡಾ.ಎಚ್.ಕೆ.ಪಾಟೀಲ ತಿಳಿಸಿದರು.

ನಗರದ ಜಿಲ್ಲಾಡಳೀತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಮಂಗಳವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಇವರ ಸಹಯೋಗದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಮತದಾನದ ಹಕ್ಕು ಉಳಿದರೆ ಮಾತ್ರ ಪ್ರಜಾಪ್ರಭುತ್ವ ಶಕ್ತಿಯಾಲಿಯಾಗುತ್ತದೆ. ಸಂವಿಧಾನದ ಪೀಠಿಕೆಯಂತೆ ಸರ್ವರು ಬದುಕನ್ನು ನಡೆಸಬೇಕು. ಪ್ರಜಾಪ್ರಭುತ್ವದ ಕುರಿತು ಜಾಗೃತಿ ಮೂಡಿಸುವುದಕ್ಕೋಸ್ಕರವೇ ಈ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬರಿಗೂ ಸಮಾನವಾದ ಅವಕಾಶ, ಸ್ಥಾನಮಾನ ದೊರಕುಬೇಕು. ಬಡತನವನ್ನು ಬೇರು ಸಹಿತ ಕಿತ್ತೋಗೆಯುವಲ್ಲಿ ಯಶಸ್ವಿಯಾಗಿದ್ದೇವೆ ಆದರೂ ಸಹಿತ ಅಸ್ಪೃಶ್ಯತೆಯನ್ನು ಕಿತ್ತೋಗೆಯಲು ಸಾಧ್ಯವಾಗಿಲ್ಲ. ಸರ್ಕಾರವು ಜಗಜ್ಯೋತಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅನುಭವ ಮಂಟಪವೇ ಮೊದಲ ಸಂಸತ್ತಾಗಿದೆ. ಸಂವಿಧಾನ ಮತ್ತು ಬಸವೇಶ್ವರ ವಚನಗಳಲ್ಲಿ ಸಾಮ್ಯತೆಯನ್ನು ಕಾಣುತ್ತೇವೆ. ಪ್ರಜಾಪ್ರಭುತ್ವ ಕಾಪಾಡಿಕೊಂಡು ಬಲಿಷ್ಟ ರಾಷ್ಟçವಾಗಿ ನಮ್ಮ ದೇಶ ಬೆಳೆಯಲು ಸಂವಿಧಾನವೇ ಕಾರಣವಾಗಿದೆ. ಜಗತ್ತಿನಲ್ಲಿಯೇ ಬಲಿಷ್ಟ ಪ್ರಜಾಪ್ರಭುತ್ವ ಹೊಂದಿದ ರಾಷ್ಟç ನಮ್ಮ ದೇಶವಾಗಿದೆ. ಸಂವಿಧಾನವನ್ನು ಗೌರವಿಸುವುದು ಮತ್ತು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಶಾಸಕ ಡಾ. ಎಚ್.ಕೆ.ಪಾಟೀಲ ತಿಳಿಸಿದರು.

ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಗೌರಿ ಅವರು ಉಪನ್ಯಾಸ ನೀಡಿ ಮಾತಾಡುತ್ತಾ ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲು ನೆಲ್ಸನ್ ಮಂಡೇಲಾ ಅವರನ್ನು ಇಂದು ನಾವು ಸ್ಮರಿಸಬೇಕಾಗಿದೆ. ನೆಲ್ಸನ್ ಮಂಡೇಲಾ ಅವರು ಪ್ರಜಾಪ್ರಭುತ್ವ ದಿನಾಚರಣೆಗೆ ಶ್ರಮಿಸಿದವರಾಗಿದ್ದಾರೆ. ಪ್ರಜಾಪ್ರಭುತ್ವವು ಕೇವಲ ಆಡಳಿತವಲ್ಲ. ಇದೊಂದು ಜೀವನ ಶೈಲಿಯಾಗಿದೆ. ಪ್ರಜಾಪ್ರಭುತ್ವ ಮೇಲ್ನೋಟಕ್ಕೆ ಅಲ್ಲದೇ ಅದನ್ನು ಅನುಭವಿಸಬೇಕು. ದೇಶದ ಪ್ರಗತಿಗೆ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಅದ್ಭುತ ಪ್ರತಿಭೆಯನ್ನು ನಾವು ಇವತ್ತಿನ ದಿವಸ ಸ್ಮರಿಸಬೇಕಾಗಿದೆ. constitution debate ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಬೇಕು. ಕಾಯ್ದೆಗಳ ಪೂರ್ಣ ಅನುಷ್ಟಾನವಾಗಬೇಕು. ಅವುಗಳ ದುರುಪಯೋಗವಾಗಬಾರದು ಎಂದು ತಿಳಿಸುತ್ತಾ ಶಾಲಾ ವಿದ್ಯಾರ್ಥಿಗಳಿಗೆ ಶಾಸಕರಾಗಿ ಆಯ್ಕೆಯಾದ ಮೇಲೆ ವಿಧಾನಸಭೆಯಲ್ಲಿ ಮಾಡಬೇಕಾದ ( concept ) ಪರಿಕಲ್ಪನೆಗಳ ಕುರಿತು ವಿವರವಾಗಿ ತಿಳಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವದ ದಿನಾಚರಣೆಯ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.
ಷರೀಫ್ ಬಿಳಿಎಲಿ ಹಾಗೂ ಸಂಗಡಿಗರು ಸಂವಿಧಾನದ ಕುರಿತು ಗೀತೆಗಳನ್ನು ಪ್ರಸ್ತುತಪಡಿಸಿದರು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಭಾರತದ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಎಚ್.ಎನ್, ಆರ್.ಡಿ.ಪಿ.ಆರ್ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಅಮರೇಶ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ, ಎಸ್.ಎನ್. ಬಳ್ಳಾರಿ, ಆದಪ್ಪನವರ, ಬಸವರಾಜ ಕಡೆಮನಿ, ಆನಂದ ಸಿಂಗಾಡೆ, ಮಾರ್ತಾಂಡ ಹಾದಿಮನಿ, ಪ್ರೊ.ಕೆ.ಎಚ್. ಬೇಲೂರ ಸೇರಿದಂತೆ ಜಿಲ್ಲಾ ಜಾಗೃತ ಸಮಿತಿಯ ನಾಮನಿರ್ದೇಶಿತ ಸದಸ್ಯರು, ನಗರಸಭೆ ಸದಸ್ಯರು, ಸಫಾಯಿ ಕರ್ಮಚಾರಿ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿದರು. ಪ್ರೊ. ಬಾಬಹುಬಲಿ ಜೈನರ್ ಹಾಗೂ ನಂದಿತಾ ಹಂಪಿಹೊಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಬಿಡಿಸಿದ ರಂಗೋಲಿ ಎಲ್ಲರ ಕಣ್ಮನ ಸೆಳೆಯಿತು.

Editor

Leave a comment