ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 19: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶ್ರೀಮತಿ ವೈಶಾಲಿ ಎಂ.ಎಲ್., ಭಾ.ಆ.ಸೇ. ರವರು ದಿನಾಂಕ: 18-09-2026ರಂದು ಅಧಿಕಾರ ವಹಿಸಿಕೊಂಡರು. ಶ್ರೀಮತಿ ವೈಶಾಲಿ ಎಂ.ಎಲ್. ರವರು 2013ನೇ ಕರ್ನಾಟಕ ಬ್ಯಾಚ್ನ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿದ್ದು, ಪ್ರಸ್ತುತ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ದ ವ್ಯವಸ್ಥಾಪಕ ನಿರ್ದೇಶಕರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿರುವ ಅವರು ದಿನಾಂಕ: 19-09-2026ರಂದು ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಸಾರಿಗೆ ಸಂಸ್ಥೆಯ ಕಾರ್ಯಾಚರಣೆ, ಸಾರ್ವಜನಿಕ ಸಾರಿಗೆ ಸೇವೆಗಳ ಸುಧಾರಣೆ ಹಾಗೂ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಸಂಸ್ಥೆಯ ಶ್ರೇಯಾಭಿವೃದ್ಧಿಗಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ತಿಳಿಸಿದರು.