Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಅಕ್ರಮ ಆಸ್ತಿ ಗಳಿಕೆ: ರಾಜ್ಯಾದ್ಯಂತ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಆಸ್ತಿ ಗಳಿಕೆ (DA) ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಂಗಳವಾರ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆಸಿದ ದಿಢೀರ್ ದಾಳಿಯಲ್ಲಿ ಒಟ್ಟು 29.61 ಕೋಟಿ ರೂ. ಮೌಲ್ಯದ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಆಸ್ತಿ ಗಳಿಕೆ (DA) ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಂಗಳವಾರ ಎಂಟು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ನಡೆಸಿದ ದಿಢೀರ್ ದಾಳಿಯಲ್ಲಿ ಒಟ್ಟು 29.61 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ.

 

ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ದಕ್ಷಿಣ ಜಿಲ್ಲೆ, ಮಂಡ್ಯ, ಕೊಡಗು, ಧಾರವಾಡ ಮತ್ತು ಬೀದರ್‌ನಲ್ಲಿ ಏಕಕಾಲಕ್ಕೆ ಈ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆರೋಪಿತ ಸರ್ಕಾರಿ ಅಧಿಕಾರಿಗಳು, ಅವರ ಸಂಬಂಧಿಕರು ಮತ್ತು ಆಪ್ತರಿಗೆ ಸೇರಿದ 33ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಬಸವನಗುಡಿಯ ಜಿಲ್ಲಾ ನೋಂದಣಾಧಿಕಾರಿ (District Registrar) ಶ್ರೀದೇವಿ ಅವರ ಬಳಿ ಅತಿ ಹೆಚ್ಚು ಅಕ್ರಮ ಆಸ್ತಿ ಪತ್ತೆಯಾಗಿದ್ದು, ಇದರ ಮೌಲ್ಯ 6.80 ಕೋಟಿ ರೂ. ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಶ್ರೀ ದೇವಿ ಅವರ ಬಳಿ 5.86 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು (ಎರಡು ನಿವೇಶನಗಳು, ಎರಡು ಮನೆಗಳು, ಕೃಷಿ ಭೂಮಿ ಮತ್ತು ಗಾರ್ಮೆಂಟ್ ಫ್ಯಾಕ್ಟರಿ) ಪತ್ತೆಹಚ್ಚಿದ್ದಾರೆ. ಅಲ್ಲದೆ, ಅವರ ಬಳಿ 30.87 ಲಕ್ಷ ರೂ. ನಗದು, 35.58 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, 23.15 ಲಕ್ಷ ರೂ. ಮೌಲ್ಯದ ವಾಹನಗಳು ಹಾಗೂ 5 ಲಕ್ಷ ರೂ. ಮೌಲ್ಯದ ಇತರ ವಸ್ತುಗಳು ಪತ್ತೆಯಾಗಿವೆ.ದಾಳಿಗೆ ಒಳಗಾದ ಇತರ ಅಧಿಕಾರಿಗಳೆಂದರೆ: ಮಂಡ್ಯ ಜಿಲ್ಲೆ ಮದ್ದೂರಿನ ಬಿಸಿಎಂ ಇಲಾಖೆ ಹಾಸ್ಟೆಲ್ ಸೂಪರಿಟೆಂಡೆಂಟ್ ಎಂ ಶಿವರಾಜು (2.71 ಕೋಟಿ ರೂ. ಅಕ್ರಮ ಆಸ್ತಿ) ಬೆಂಗಳೂರಿನ ಶಿವಾಜಿನಗರದ ನಿವೃತ್ತ ಜಿಬಿಎ (GBA) ಸಹಾಯಕ ಎಂಜಿನಿಯರ್ ಎಚ್.ಎಂ. ರಂಗನಾಥ್ (3.84 ಕೋಟಿ ರೂ) ಕಲಬುರಗಿಯ ಜೆಸ್ಕಾಂ (Gescom) ಎ.ಇ.ಇ. (AEE) ರಾಜೇಶ್ವರಿ (1.91 ಕೋಟಿ ರೂ) ಕೊಡಗಿನ ಪುರಸಭೆ ಆಯುಕ್ತ ಎಚ್.ಆರ್. ರಮೇಶ್ (1.78 ಕೋಟಿ ರೂ) ಧಾರವಾಡದ ಹೆಸ್ಕಾಂ (Hescom) ಎ.ಇ.ಇ. ಕಿರಣ್ ಬೈಂದೂರ್ (1.79 ಕೋಟಿ ರೂ) ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಕಚೇರಿಯ ಎಫ್.ಡಿ.ಎ. (FDA) ದರ್ಶನ್ ಗೌಡ ಜಿ. (1.86 ಕೋಟಿ ರೂ.) ಮತ್ತು ಬೀದರ್‌ನ ನಿವೃತ್ತ ಕೃಷಿ ಅಧಿಕಾರಿ ಮಾಣಿಕ್ ರಾವ್ ಬಳಿ 2.51 ಕೋಟಿ ರೂ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Editor

Leave a comment