Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ ಹುಯಿಲಗೋಳದಲ್ಲಿ ವಾರದ 10% ಬಡ್ಡಿ ಆರೋಪ ಯುವಕನ ಮೇಲೆ ಹಲ್ಲೆ, ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಆರೋಪ ಎಫ್ಐಆರ್ ದಾಖಲ.! .!

ಕರುನಾಡು ಘರ್ಜನೆ ಸುದ್ದಿ ಗದಗ: ವಾರದ 10% ಬಡ್ಡಿ ಪಡೆಯುತ್ತಿದ್ದ ಆರೋಪದ ಹಿನ್ನೆಲೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಗಂಭೀರ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಹಣಕಾಸಿನ ವಿಚಾರವಾಗಿ ವ್ಯಕ್ತಿಯೊಬ್ಬರ ಮನೆಗೆ ತೆರಳಿ ಅವಾಚ್ಯವಾಗಿ ನಿಂದಿಸಿ, ಅವರ ಪುತ್ರನನ್ನು ಗ್ರಾಮದ ಹಿಂದೂ…

ಕರುನಾಡು ಘರ್ಜನೆ ಸುದ್ದಿ ಗದಗ: ವಾರದ 10% ಬಡ್ಡಿ ಪಡೆಯುತ್ತಿದ್ದ ಆರೋಪದ ಹಿನ್ನೆಲೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಗಂಭೀರ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಹಣಕಾಸಿನ ವಿಚಾರವಾಗಿ ವ್ಯಕ್ತಿಯೊಬ್ಬರ ಮನೆಗೆ ತೆರಳಿ ಅವಾಚ್ಯವಾಗಿ ನಿಂದಿಸಿ, ಅವರ ಪುತ್ರನನ್ನು ಗ್ರಾಮದ ಹಿಂದೂ ಸ್ಮಶಾನದ ಬಳಿಗೆ ಕರೆದೊಯ್ದು ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

FIRನಲ್ಲಿ ದಾಖಲಾಗಿರುವ ದೂರಿನ ಪ್ರಕಾರ, ಪಿರ್ಯಾದಿದಾರರು ಕುಟುಂಬದ ಅಗತ್ಯಕ್ಕಾಗಿ ₹20 ಸಾವಿರ ಹಣವನ್ನು ಕೈಗಡವಾಗಿ ಪಡೆದುಕೊಂಡಿದ್ದರು. ಬಳಿಕ ಆರೋಪಿತರು ವಾರದ 10% ಬಡ್ಡಿಯಂತೆ ₹2 ಸಾವಿರ ಬಡ್ಡಿ ನೀಡುವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ. ಪ್ರತಿ ವಾರ ಬಡ್ಡಿ ಪಾವತಿಸುತ್ತಿದ್ದರೂ, ಹಣ ನೀಡಲು ವಿಳಂಬವಾದ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 17ರಂದು ರಾತ್ರಿ ಸುಮಾರು 9.30ರ ವೇಳೆಗೆ ಆರೋಪಿತರು ಪಿರ್ಯಾದಿದಾರರ ಮನೆಗೆ ಬಂದು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ. ಬಳಿಕ ಪಿರ್ಯಾದಿದಾರರ ಪುತ್ರ ಜಂಗ್ಲಿಸಾಬ್ ಅವರನ್ನು ಹುಯಿಲಗೋಳ ಗ್ರಾಮದ ಹಿಂದೂ ಸ್ಮಶಾನದ ಸಮೀಪಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಯಿಂದ ತಪ್ಪಿಸಿಕೊಂಡು ಬಂದ ಜಂಗ್ಲಿಸಾಬ್ ಅವರನ್ನು ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು FIRನಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟೇ ಅಲ್ಲದೆ, ಸೆಪ್ಟೆಂಬರ್ 19ರಂದು ರಿಯಾಜ್ ಹಾಗೂ ನಾಗರಾಜ್ ಅವರನ್ನು ಕರೆಸಿ ವಿಚಾರಿಸಿದಾಗಲೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ, ಚಾಕುವಿನಿಂದ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಪಿರ್ಯಾದಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಗಮನಿಸಿ: ಮೇಲಿನ ಆರೋಪಗಳು FIRನಲ್ಲಿ ದಾಖಲಾಗಿರುವ ದೂರಿನ ಆಧಾರದ ಮೇಲಿನ ವರದಿ ಮಾತ್ರವಾಗಿದ್ದು, ಆರೋಪಗಳು ತನಿಖೆಯಲ್ಲಿ ಸಾಬೀತಾಗಬೇಕಿದೆ. ಜಿಲ್ಲೆ ಹಾಗೂ ರಾಜ್ಯದ್ಯಂತ ನಿಖರ ನಿರಂತರ ಸುದ್ದಿಗಾಗಿ ವೀಕ್ಷಿಸಿ ಕರುನಾಡು ಘರ್ಜನೆ ಸುದ್ದಿ 

Editor

Leave a comment