Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : KRIDL AEE ಪರ್ವೀಜ ಧಾರವಾಡ ನಾಪತ್ತೆಪತ್ತೆಗಾಗಿ ಐದು ವಿಶೇಷ ಪೊಲೀಸ್ ತಂಡಗಳ ರಚನೆ.!

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ-ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಆರ್‌ಡಿಐಎಲ್ (KRIDL) ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಪರ್ವೀಜ ಧಾರವಾಡ (34) ಅವರು ಕಾಣೆಯಾಗಿರುವ ಕುರಿತು ಗುನ್ನಾ ನಂ. 85/2026ರಂತೆ ಪ್ರಕರಣ ದಾಖಲಾಗಿದೆ. ಪರ್ವೀಜ ಧಾರವಾಡ ಅವರು ಸೆಪ್ಟೆಂಬರ್…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ-ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಆರ್‌ಡಿಐಎಲ್ (KRIDL) ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಪರ್ವೀಜ ಧಾರವಾಡ (34) ಅವರು ಕಾಣೆಯಾಗಿರುವ ಕುರಿತು ಗುನ್ನಾ ನಂ. 85/2026ರಂತೆ ಪ್ರಕರಣ ದಾಖಲಾಗಿದೆ.

ಪರ್ವೀಜ ಧಾರವಾಡ ಅವರು ಸೆಪ್ಟೆಂಬರ್ 13ರಂದು ಕಚೇರಿ ಸಭೆಯ ನಿಮಿತ್ತ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಗದಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಅವರು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗದಗ ಜಿಲ್ಲಾ ಪೊಲೀಸ್ ಇಲಾಖೆ, ಎಸ್‌ಪಿ ಅವರ ಸೂಚನೆಯಂತೆ ಪರ್ವೀಜ ಧಾರವಾಡ ಅವರ ಪತ್ತೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಿದೆ. ಈ ತಂಡಗಳ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಗದಗ ಡಿವೈಎಸ್‌ಪಿ ವಹಿಸಿಕೊಂಡಿದ್ದಾರೆ.

ಸ್ಥಳೀಯ ಪೊಲೀಸ್ ತಂಡ ಪರ್ವೀಜ ಅವರ ವೈಯಕ್ತಿಕ ಮಾಹಿತಿ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಪರಿಶೀಲಿಸುವುದರ ಜೊತೆಗೆ, ಹಾವೇರಿಯಲ್ಲಿರುವ ಅವರ ಪತ್ನಿಯ ತವರು ಮನೆ ಹಾಗೂ ಇತರ ಸಂಬಂಧಿಕರಿಂದ ಮಾಹಿತಿ ಸಂಗ್ರಹಿಸಲಿದೆ.

ಆಂಧ್ರಪ್ರದೇಶದಲ್ಲಿ ಎರಡು ತಂಡಗಳು ಕಾರ್ಯನಿರ್ವಹಿಸಲಿದ್ದು, ಮೊಬೈಲ್‌ನ ಕೊನೆಯ ಲೊಕೇಶನ್, ರೈಲು ಮಾರ್ಗ ಹಾಗೂ ಯುಡಿಆರ್ (UDR) ದಾಖಲೆಗಳ ಪರಿಶೀಲನೆ ನಡೆಸಲಿವೆ.

ಬೆಂಗಳೂರು ತಂಡ ಕೆಆರ್‌ಡಿಐಎಲ್ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ರೈಲ್ವೆ ನಿಲ್ದಾಣಗಳಲ್ಲಿನ ಸಿಸಿಟಿವಿ ಫುಟೇಜ್‌ಗಳನ್ನು ಪರಿಶೀಲಿಸಲಿದೆ.

ಇನ್ನು ತಾಂತ್ರಿಕ ತಂಡ ಪರ್ವೀಜ ಅವರ ಮೊಬೈಲ್‌ಗೆ ಸಂಬಂಧಿಸಿದ ಸಿಡಿಆರ್ (CDR) ಹಾಗೂ ಲೊಕೇಶನ್ ದತ್ತಾಂಶವನ್ನು ವಿಶ್ಲೇಷಿಸಿ, ಅವರು ತೆರಳಿರುವ ಸಾಧ್ಯತೆಯಿರುವ ಸ್ಥಳಗಳ ಕುರಿತು ಮಾಹಿತಿ ಕಲೆಹಾಕುತ್ತಿದೆ.

ಪರ್ವೀಜ ಧಾರವಾಡ ಅವರ ಪತ್ತೆಗಾಗಿ ಪೊಲೀಸ್ ಇಲಾಖೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.

Editor

Leave a comment