ಕರುನಾಡು ಘರ್ಜನೆ ಸುದ್ದಿ ಗದಗ: ಕರುನಾಡು ಘರ್ಜನೆ ಕನ್ನಡ ಪತ್ರಿಕೆಯ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜಗದ್ಗುರು ತೋಂಟದ ಸಿದ್ಧಲಿಂಗ ಸ್ವಾಮೀಜಿಗಳವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಕರುನಾಡು ಘರ್ಜನೆ ಪತ್ರಿಕೆಯ ಸಂಪಾದಕರು ಹಾಗೂ ಸಿಬ್ಬಂದಿ ವರ್ಗದವರು ಜಗದ್ಗುರುಗಳ ಆಶೀರ್ವಾದ ಪಡೆದು, ಪತ್ರಿಕೆಯ 5ನೇ ವರ್ಷದ ವಾರ್ಷಿಕೋತ್ಸವದ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಕಳೆದ ಐದು ವರ್ಷಗಳಿಂದ ಕರುನಾಡು ಘರ್ಜನೆ ಪತ್ರಿಕೆಯು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಜನಪರ ವಿಷಯಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತರುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ.
ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಾಯ್ಸ್ ಆಫ್ ಗದಗ್ – ಸೀಸನ್–1 ಸೇರಿದಂತೆ ಪ್ರತಿಭಾ ಪ್ರದರ್ಶನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಗದ್ಗುರು ತೋಂಟದ ಸಿದ್ಧಲಿಂಗ ಸ್ವಾಮೀಜಿಗಳವರು, ಪತ್ರಿಕೆಯು ಮುಂದಿನ ದಿನಗಳಲ್ಲಿಯೂ ಸಮಾಜಮುಖಿ ಹಾಗೂ ಜನಪರ ಕಾರ್ಯಗಳನ್ನು ಮುಂದುವರಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾ, ನೀ,ಪ ಅಧ್ಯಕ್ಷರು ರಾಜೇಸಾಬ ಹೆಬ್ಬಳ್ಳಿ ಆನಂದಯ್ಯ ಯುರಕ್ತಮಠ ಕ,ಪ,ಕ್ಷೆ ಅಧ್ಯಕ್ಷರು ಮಂಜುನಾಥ್ ಮರಾಠೆ,ಶಿವಾನಂದ್ ತಮ್ಮಣ್ಣವರ ,ಮಂಜುನಾಥ್ ಆಸಂಗಿ ,ಕಿರಣ್ ಭಜಂತ್ರಿ, ಚಿದಾನಂದ ಅನವಾಳ, ತೌಶಿಪ ಢಾಲಾಯತ, ರಾಹಿಲ್ ಮಕಾನದಾರ್, ಇಬ್ರಾಹಿಂ ದಾವಲಖಾನ, ನೌಶಾದ್ ಕಾತರಕಿ, ಜಿ,ಆರ್,ಕಟ್ಟಿಮನಿ ಕಾರ್ಯಕ್ರಮದಲ್ಲಿ ಪತ್ರಿಕೆಯ ಸಂಪಾದಕರು, ಸಿಬ್ಬಂದಿ, ಅಭಿಮಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.
ಗದಗ ಜಗದ್ಗುರು ತೋಂಟದ ಸಿದ್ಧಲಿಂಗ ಸ್ವಾಮೀಜಿಗಳಿಂದ ಕರುನಾಡು ಘರ್ಜನೆ ಪತ್ರಿಕೆಯ 5ನೇ ವರ್ಷದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಕರುನಾಡು ಘರ್ಜನೆ ಸುದ್ದಿ ಗದಗ: ಕರುನಾಡು ಘರ್ಜನೆ ಕನ್ನಡ ಪತ್ರಿಕೆಯ 5ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜಗದ್ಗುರು ತೋಂಟದ ಸಿದ್ಧಲಿಂಗ ಸ್ವಾಮೀಜಿಗಳವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕರುನಾಡು ಘರ್ಜನೆ ಪತ್ರಿಕೆಯ ಸಂಪಾದಕರು ಹಾಗೂ ಸಿಬ್ಬಂದಿ…