Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ I ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಾಸಣ್ಣ ಕುರಡಗಿ ಪದಗ್ರಹಣ ಸಮಾರಂಭ 17-10-2026ರಂದು

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಾಸಣ್ಣ ಕುರಡಗಿ ಅವರ ಪದಗ್ರಹಣ ಸಮಾರಂಭವು ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ 17-10-2026ರಂದು ಮಧ್ಯಾಹ್ನ 2ಕ್ಕೆ ಜರುಗಲಿದೆ.…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಾಸಣ್ಣ ಕುರಡಗಿ ಅವರ ಪದಗ್ರಹಣ ಸಮಾರಂಭವು ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರುವ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ 17-10-2026ರಂದು ಮಧ್ಯಾಹ್ನ 2ಕ್ಕೆ ಜರುಗಲಿದೆ.

ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಬಿ.ಕೆ. ಹರಿಪ್ರಸಾದ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ, ಕೆಪಿಸಿಸಿ ಉಪಾಧ್ಯಕ್ಷರು, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಡಿ. ಆರ್. ಪಾಟೀಲ, ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ಕೆ. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣಗೌಡ ಎಚ್. ಪಾಟೀಲ, ಗದಗ ಜಿಲ್ಲಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಬಿ. ಅಸೂಟಿ ಪಾಲ್ಗೊಳ್ಳುವರು.

ಕಾರಣ ಕಾರ್ಯಕ್ರಮಕ್ಕೆ ಯಾವತ್ತು ಕಾಂಗ್ರೆಸ್ ಪಕ್ಷದ ಮಾಜಿ ಹಾಗೂ ಹಾಲಿ ಶಾಸಕರುಗಳು, ಪಕ್ಷದ ಜಿಲ್ಲಾ ಪದಾಧಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಪಾಲ್ಗೊಳ್ಳಬೇಕೆಂದು ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Editor

Leave a comment