Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ I ಗದಗದಲ್ಲಿ ಗಾಂಜಾ ಜಾಲಕ್ಕೆ ಪೊಲೀಸರ ಬಲೆ: 4 ಆರೋಪಿಗಳ ಬಂಧನ, 2.341 ಕೆ.ಜಿ. ಗಾಂಜಾ ವಶ!

ಕರುನಾಡು ಘರ್ಜನೆ ಸುದ್ದಿ ಅಂತರರಾಜ್ಯ ಗಾಂಜಾ ಪೂರೈಕೆ ಜಾಲ ಪತ್ತೆ – ₹1.17 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಪೊಲೀಸರಿಗೆ ಹಿರಿಯ ಅಧಿಕಾರಿಗಳ ಪ್ರಶಂಸೆ. ಗದಗ: ಗದಗ ಗ್ರಾಮೀಣ ಪೊಲೀಸರು ಅಕ್ರಮ ಗಾಂಜಾ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ, ಅಂತರರಾಜ್ಯದ…
Oplus_16908288

ಕರುನಾಡು ಘರ್ಜನೆ ಸುದ್ದಿ ಅಂತರರಾಜ್ಯ ಗಾಂಜಾ ಪೂರೈಕೆ ಜಾಲ ಪತ್ತೆ – ₹1.17 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಪೊಲೀಸರಿಗೆ ಹಿರಿಯ ಅಧಿಕಾರಿಗಳ ಪ್ರಶಂಸೆ.

ಗದಗ: ಗದಗ ಗ್ರಾಮೀಣ ಪೊಲೀಸರು ಅಕ್ರಮ ಗಾಂಜಾ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ, ಅಂತರರಾಜ್ಯದ ಇಬ್ಬರು ಆರೋಪಿಗಳು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ₹1,17,050 ಮೌಲ್ಯದ 2 ಕೆ.ಜಿ. 341 ಗ್ರಾಂ ಒಣ ಗಾಂಜಾ ಸೇರಿದಂತೆ ಗಾಂಜಾ ಮಾರಾಟಕ್ಕೆ ಬಳಸುತ್ತಿದ್ದ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

 

2026ರ ಅಕ್ಟೋಬರ್ 17ರಂದು ಗದಗ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಗಡೇದ ಹಾಗೂ ಸಿಬ್ಬಂದಿ ಮಹಿಬೂಬ ವಡ್ಡಟ್ಟಿ, ಪ್ರಕಾಶ ಗಾಣಿಗೇರ, ಮಹೇಶ ಗೊಳಗೊಳಕಿ, ಅನಿಲ್ ಬನ್ನಿಕೊಪ್ಪ ಮತ್ತು ಹುಸೇನಸಾಬ ಮ್ಯಾಗಳಮನಿ ಅವರು ಅಕ್ರಮ ಗಾಂಜಾ ಮಾರಾಟಗಾರರ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.

 

ಈ ವೇಳೆ ಗದಗ ನಗರದ ಗಂಗಿಮಡಿಯ ಹೊಸ ಅಪಾರ್ಟ್‌ಮೆಂಟ್ ಸಮೀಪ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ್ದು, ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

ವಿಚಾರಣೆ ವೇಳೆ, ಗದಗದ ಸೆಟ್ಲ್‌ಮೆಂಟ್ ಪ್ರದೇಶದ ಮಂಜುನಾಥ ಸುಕದೇವ ಜಾದವ (36) ಎಂಬಾತ ಸೊಲ್ಲಾಪುರದಿಂದ ಗಾಂಜಾ ತರಿಸಿ ಸಣ್ಣ ಪ್ಯಾಕೆಟ್‌ಗಳಾಗಿ ಮಾಡಿ, ಬಾಷಾಸಾಬ ಅಬ್ದುಲಸಾಬ ಬುವಾಜಿ (26) ಎಂಬಾತನಿಗೆ ತಲಾ ₹200ಕ್ಕೆ ಮಾರಾಟ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಬಾಷಾಸಾಬ ಆ ಪ್ಯಾಕೆಟ್‌ಗಳನ್ನು ₹300ರಿಂದ ₹400ರವರೆಗೆ ಮಾರಾಟ ಮಾಡುತ್ತಿದ್ದನೆಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

 

ಇವರಿಗೆ ಸೊಲ್ಲಾಪುರದ ಆಕಾಶ ನಾಗನಾಥ ಕಡಕೇಕರ (23) ಮತ್ತು ರವಿ ಶಿವಾಜಿ ಕಡಕೇಕರ (20) ಗಾಂಜಾ ಪೂರೈಸುತ್ತಿದ್ದರೆಂದು ವಿಚಾರಣೆಯಿಂದ ತಿಳಿದುಬಂದಿದೆ. ಈ ಇಬ್ಬರು ಅಂತರರಾಜ್ಯ ಆರೋಪಿಗಳಾಗಿದ್ದು, ಗಾಂಜಾ ಪೂರೈಕೆ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

 

₹1.17 ಲಕ್ಷ ಮೌಲ್ಯದ ಗಾಂಜಾ ಸೇರಿ ಹಲವು ವಸ್ತುಗಳ ಜಪ್ತಿ

 

ಬಂಧಿತ ನಾಲ್ವರಿಂದ ಒಟ್ಟು 2 ಕೆ.ಜಿ. 341 ಗ್ರಾಂ ಒಣ ಗಾಂಜಾ, ಗಾಂಜಾ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಚೀಟಿಗಳು, ತೂಕದ ಯಂತ್ರ, ಪ್ಲಾಸ್ಟಿಕ್ ಪ್ಯಾಕೆಟ್‌ಗಳ ಬಂಡಲ್, ಸ್ಟೇಪ್ಲರ್, ಒಂದು ಸ್ಯಾಮ್‌ಸಂಗ್ ಮೊಬೈಲ್ ಹಾಗೂ ಗಾಂಜಾ ಮಾರಾಟದಿಂದ ಬಂದ ₹1,200 ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಿದ ಗಾಂಜಾ ಮತ್ತು ವಸ್ತುಗಳ ಒಟ್ಟು ಮೌಲ್ಯ ₹1,17,050 ಎಂದು ತಿಳಿಸಲಾಗಿದೆ.

 

ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 269/2026ರ ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 20(ಬಿ)(ii)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

 

ಅಕ್ರಮ ಗಾಂಜಾ ಮಾರಾಟ ಜಾಲವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದ ಗದಗ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಗದಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

KG NEWS | ಗದಗ

Editor

Leave a comment