ಕರುನಾಡು ಘರ್ಜನೆ ಸುದ್ದಿ ಗದಗ, ಅ. 22: ಕರ್ನಾಟಕ ವಿಧಾನಪರಿಷತ್ ಚುನಾವಣೆ–2026ರಲ್ಲಿ ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಅಮೂಲ್ಯ ಮತ ನೀಡಿ ಬೆಂಬಲಿಸುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಮುಖಂಡ ಹಾಗೂ ಗದಗ-ಬೆಟಗೇರಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ದುರಗೇಶ ವಿಭೂತಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗಿ, ಅವರ ಹಿತಾಸಕ್ತಿಗಳನ್ನು ಕಾಪಾಡುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವಂತೆ ಮತದಾರರಲ್ಲಿ ವಿನಂತಿಸಿದ್ದಾರೆ.
2026ರ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿರುವ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಮೋಹನ ಲಿಂಬಿಕಾಯಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಶರಣಪ್ಪ ಮಟ್ಟೂರು ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶಶಿ ಹುಲಿಕಂಟೆಮಠ ಅವರಿಗೆ ಮತ ನೀಡಿ ಬೆಂಬಲಿಸುವಂತೆ ಅವರು ಕರೆ ನೀಡಿದ್ದಾರೆ.
ಶಿಕ್ಷಕರು ಮತ್ತು ಪದವೀಧರರು ತಮ್ಮ ಸಮಸ್ಯೆಗಳನ್ನು ವಿಧಾನಪರಿಷತ್ತಿನಲ್ಲಿ ಸಮರ್ಥವಾಗಿ ಮಂಡಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಕೈ ಬಲಪಡಿಸಬೇಕು ಎಂದು ದುರಗೇಶ ವಿಭೂತಿ ತಿಳಿಸಿದ್ದಾರೆ.
ಶಿಕ್ಷಕರ ಕ್ಷೇತ್ರದ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಅಮೂಲ್ಯ ಮತವನ್ನು ನೀಡಿ ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕೆಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ದುರಗೇಶ ವಿಭೂತಿ ರಾಜ್ಯ ಯುವ ಮುಖಂಡರು, ಕಾಂಗ್ರೆಸ್ ಪಕ್ಷ ನಾಮನಿರ್ದೇಶಿತ ಸದಸ್ಯರು, ಗದಗ-ಬೆಟಗೇರಿ ನಗರಸಭೆ
ದಿನಾಂಕ: 22-10-2026 | ಸಂಪರ್ಕ: 7975171583