Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ

ಕರುನಾಡು ಘರ್ಜನೆ ಸುದ್ದಿ ಧಾರವಾಡ ಅ. 25: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಮತ ಎಣಿಕೆ ಕಾರ್ಯವು ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಗೆ ಕೃಷಿ ವಿಶ್ವವಿದ್ಯಾಲಯ, ಎತ್ತಿನಗುಡ್ಡ…

ಕರುನಾಡು ಘರ್ಜನೆ ಸುದ್ದಿ ಧಾರವಾಡ ಅ. 25: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಮತ ಎಣಿಕೆ ಕಾರ್ಯವು ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಗೆ ಕೃಷಿ ವಿಶ್ವವಿದ್ಯಾಲಯ, ಎತ್ತಿನಗುಡ್ಡ , ಧಾರವಾಡದಲ್ಲಿ ನಡೆಯಲಿದೆ.

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಒಟ್ಟು 97,400 ಮತದಾರರಿದ್ದು, ಅವರಲ್ಲಿ 57,345 ಪುರುಷರು ಹಾಗೂ 40,055 ಮಹಿಳಾ ಮತದಾರರಿದ್ದಾರೆ. ಅಕ್ಟೋಬರ್ 23ರಂದು ನಡೆದ ಮತದಾನದಲ್ಲಿ ಒಟ್ಟು 73,692 ಮತಗಳು ಚಲಾವಣೆಯಾಗಿದ್ದು, ಶೇ.75.66ರಷ್ಟು ಮತದಾನವಾಗಿದೆ.

*ಜಿಲ್ಲಾವಾರು ಮತದಾನದ ವಿವರ:* ಧಾರವಾಡ ಜಿಲ್ಲೆಯಲ್ಲಿ 25,240 ಮತಗಳು ಚಲಾವಣೆಯಾಗಿದ್ದು, ಶೇ.71.87ರಷ್ಟು ಮತದಾನವಾಗಿದೆ. ಗದಗ ಜಿಲ್ಲೆಯಲ್ಲಿ 16,778 ಮತಗಳು ಚಲಾವಣೆಯಾಗಿದ್ದು, ಶೇ.77.70ರಷ್ಟು ಮತದಾನವಾಗಿದೆ. ಹಾವೇರಿ ಜಿಲ್ಲೆಯಲ್ಲಿ 19,401 ಮತಗಳು ಚಲಾವಣೆಯಾಗಿದ್ದು, ಶೇ.78.71ರಷ್ಟು ಮತದಾನವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 12,273 ಮತಗಳು ಚಲಾವಣೆಯಾಗಿದ್ದು, ಶೇ.76.52ರಷ್ಟು ಮತದಾನವಾಗಿದೆ.

ಮತದಾನದ ಬಳಿಕ ಮೊಹರು ಮಾಡಿದ ಮತಪೆಟ್ಟಿಗೆಗಳು, ಸಂಬಂಧಿತ ಶಾಸನಬದ್ಧ ಹಾಗೂ ಶಾಸನಬದ್ಧವಲ್ಲದ ಲಕೋಟೆಗಳು ಮತ್ತು ಇತರ ದಾಖಲೆಗಳನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಸೂಕ್ತ ಪೊಲೀಸ್ ಭದ್ರತೆಯೊಂದಿಗೆ ಇರಿಸಲಾಗಿದೆ. ಭದ್ರತಾ ಕೊಠಡಿ ಹಾಗೂ ಮತ ಎಣಿಕೆ ಕೇಂದ್ರಕ್ಕೆ ಮೂರು ಹಂತಗಳಲ್ಲಿ ಒಟ್ಟು 212 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

*14 ಟೇಬಲ್‌ಗಳಲ್ಲಿ ಮತ ಎಣಿಕೆ:* ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಇದಕ್ಕಾಗಿ 14 ಟೇಬಲ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಪ್ರತಿ ಟೇಬಲ್‌ಗೆ ಒಬ್ಬ ಮತ ಎಣಿಕೆ ಮೇಲ್ವಿಚಾರಕರು ಹಾಗೂ ಇಬ್ಬರು ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. ಸಂಬಂಧಿತ ಅಧಿಕಾರಿ ಮತ್ತು ಸಿಬ್ಬಂದಿಗೆ ಸೈದ್ಧಾಂತಿಕ ಹಾಗೂ ಪ್ರಾತ್ಯಕ್ಷಿಕೆ ಮೂಲಕ ಮೂರು ಹಂತಗಳಲ್ಲಿ ತರಬೇತಿ ನೀಡಲಾಗಿದೆ.

*ಪ್ರತಿಬಂಧಕಾಜ್ಞೆ ಜಾರಿ, ಶುಷ್ಕ ದಿನ ಘೋಷಣೆ:*
ಮತ ಎಣಿಕೆ ದಿನದಂದು ಧಾರವಾಡ ಜಿಲ್ಲಾಧಿಕಾರಿಗಳು ಮತ ಎಣಿಕೆ ಕಟ್ಟಡದ ಸುತ್ತಮುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್‌) ಕಲಂ 163ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

ಅಕ್ಟೋಬರ್ 26ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 27ರಂದು ರಾತ್ರಿ 12 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಮದ್ಯಪಾನ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಈ ಅವಧಿಯನ್ನು ಶುಷ್ಕ ದಿನಗಳೆಂದು (ಡ್ರೈ ಡೇ) ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಮತ ಎಣಿಕೆ ಕಾರ್ಯವನ್ನು ಸಮರ್ಪಕವಾಗಿ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಮ್. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment