ಕರುನಾಡು ಘರ್ಜನೆ ಸುದ್ದಿ ಧಾರವಾಡ ಅ. 27: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು.
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 14001 ಮತಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಂಕನೂರ 6459 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4394 ಮತಗಳನ್ನು ಪಡೆದುಕೊಂಡಿರುತ್ತಾರೆ.
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಸಂಕನೂರ ಎಸ್.ವಿ ಅವರು 2065 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.