Monday, 2 November 2026 Karunadu Gharjane — Edition

Karunadu Gharjane

News website

ಗದಗ ಗದಗ I ಗದಗ ನಗರದ ವಿವಿಧೆಡೆ ನೀರು ಪೂರೈಕೆ. ಗದಗ ಗದಗ I ದೀಪಾವಳಿ ಹಬ್ಬದ ಪ್ರಯುಕ್ತ 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ ಜಿಲ್ಲೆ ಸಿರುಗುಪ್ಪ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಯಶಸ್ವಿ ಜಿಲ್ಲೆ ಬೆಂಗಳೂರು I ಜನರ ಜೇಬಿಗೆ ಕತ್ತರಿ, : ಹಾಲು–ಬಸ್ ದರ ಏರಿಕೆಗೆ ಮುಂದಾದ ಸರ್ಕಾರದ ಕ್ರಮ ಖಂಡನೀಯ – ವೆಲ್ಫೇರ್ ಪಾರ್ಟಿ ಗದಗ ಕರುನಾಡು ಘರ್ಜನೆ ಪತ್ರಿಕೆ ಹಾಗೂ ಕೆ.ಜಿ. ನ್ಯೂಸ್ 5ನೇ ವರ್ಷದ ವಾರ್ಷಿಕೋತ್ಸವಕ್ಕೆ ಸಕಲ ಸಿದ್ಧತೆ – ನವೆಂಬರ್ 1ರಂದು ಅದ್ಧೂರಿ ಸಮಾರಂಭಕ್ಕೆಸರ್ವರಿಗೂ ಹೃತ್ಪೂರ್ವಕ ಸ್ವಾಗತ ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಗದಗ ಗದಗ I ಗದಗ ನಗರದ ವಿವಿಧೆಡೆ ನೀರು ಪೂರೈಕೆ. ಗದಗ ಗದಗ I ದೀಪಾವಳಿ ಹಬ್ಬದ ಪ್ರಯುಕ್ತ 340 ಹೆಚ್ಚುವರಿ ವಿಶೇಷ ಬಸ್‌ಗಳ ಸಂಚಾರ ಜಿಲ್ಲೆ ಸಿರುಗುಪ್ಪ ತಾಲೂಕು ಕುರುಬರ ಸಂಘದ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಯಶಸ್ವಿ ಜಿಲ್ಲೆ ಬೆಂಗಳೂರು I ಜನರ ಜೇಬಿಗೆ ಕತ್ತರಿ, : ಹಾಲು–ಬಸ್ ದರ ಏರಿಕೆಗೆ ಮುಂದಾದ ಸರ್ಕಾರದ ಕ್ರಮ ಖಂಡನೀಯ – ವೆಲ್ಫೇರ್ ಪಾರ್ಟಿ ಗದಗ ಕರುನಾಡು ಘರ್ಜನೆ ಪತ್ರಿಕೆ ಹಾಗೂ ಕೆ.ಜಿ. ನ್ಯೂಸ್ 5ನೇ ವರ್ಷದ ವಾರ್ಷಿಕೋತ್ಸವಕ್ಕೆ ಸಕಲ ಸಿದ್ಧತೆ – ನವೆಂಬರ್ 1ರಂದು ಅದ್ಧೂರಿ ಸಮಾರಂಭಕ್ಕೆಸರ್ವರಿಗೂ ಹೃತ್ಪೂರ್ವಕ ಸ್ವಾಗತ ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ
ಜಿಲ್ಲೆ

ಬೆಂಗಳೂರು I ಜನರ ಜೇಬಿಗೆ ಕತ್ತರಿ, : ಹಾಲು–ಬಸ್ ದರ ಏರಿಕೆಗೆ ಮುಂದಾದ ಸರ್ಕಾರದ ಕ್ರಮ ಖಂಡನೀಯ – ವೆಲ್ಫೇರ್ ಪಾರ್ಟಿ

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು | ನವೆಂಬರ್ 2, 2026 ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ದರವನ್ನು ಹೆಚ್ಚಿಸಿರುವ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಲು ಮುಂದಾಗಿರುವುದು ಜನಸಾಮಾನ್ಯರ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು | ನವೆಂಬರ್ 2, 2026 ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ದರವನ್ನು ಹೆಚ್ಚಿಸಿರುವ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಲು ಮುಂದಾಗಿರುವುದು ಜನಸಾಮಾನ್ಯರ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

 

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ, ಅಡುಗೆ ಅನಿಲ, ವಿದ್ಯುತ್ ಹಾಗೂ ದಿನನಿತ್ಯದ ಜೀವನಾವಶ್ಯಕ ವಸ್ತುಗಳ ಬೆಲೆಗಳಿಂದ ತತ್ತರಿಸಿರುವ ಜನರಿಗೆ ಹಾಲಿನ ದರ ಏರಿಕೆ ಮತ್ತೊಂದು ಆರ್ಥಿಕ ಹೊರೆಯಾಗಿದೆ. ಹಾಲು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯವಾಗಿದ್ದು, ಅದರ ಬೆಲೆ ಏರಿಕೆಯ ಪರಿಣಾಮ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ನೇರವಾಗಿ ಬೀಳಲಿದೆ. ಮಕ್ಕಳ ಪೌಷ್ಟಿಕ ಆಹಾರದಿಂದ ಹಿಡಿದು ಚಹಾ ಅಂಗಡಿಗಳು, ಸಣ್ಣ ಹೋಟೆಲ್‌ಗಳು ಹಾಗೂ ಹಾಲಿನ ಉತ್ಪನ್ನಗಳ ಉದ್ಯಮದವರೆಗೂ ಇದರ ಪರಿಣಾಮ ಉಂಟಾಗಲಿದೆ.

 

ಅದೆ ರೀತಿ ಸಾರಿಗೆ ಸಚಿವರು ಬಸ್ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಹೇಳಿಕೆ ನೀಡಿರುವುದು ಕೂಡ ಆತಂಕದ ವಿಷಯ.ಪುರುಷ ಪ್ರಯಾಣಿಕರು, ದಿನಗೂಲಿ ಕಾರ್ಮಿಕರು, ಖಾಸಗಿ ಉದ್ಯೋಗಿಗಳು, ಸಣ್ಣ ವ್ಯಾಪಾರಿಗಳು ಹಾಗೂ ಇತರ ಪ್ರಯಾಣಿಕರು ಬಸ್ ಪ್ರಯಾಣ ದರ ಹೆಚ್ಚಳದ ಹೊರೆಯನ್ನು ಎದುರಿಸಬೇಕಾಗುತ್ತದೆ. ಅದರಲ್ಲೂ ಪ್ರತಿದಿನ ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಕೆಳಮಧ್ಯಮ ವರ್ಗದ ಜನರಿಗೆ ದರ ಏರಿಕೆ ಹೆಚ್ಚುವರಿ ಹೊರೆಯಾಗಲಿದೆ. ಸಾರಿಗೆ ಸಂಸ್ಥೆಗಳ ಆರ್ಥಿಕ ನಿರ್ವಹಣೆಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿಯನ್ನು ಸಂಪೂರ್ಣವಾಗಿ ಪ್ರಯಾಣಿಕರ ಮೇಲೆ ವರ್ಗಾಯಿಸುವುದು ಸೂಕ್ತವಲ್ಲ. ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ ಅಗತ್ಯ ಅನುದಾನ ಒದಗಿಸಿ, ದರ ಏರಿಕೆಯ ಪ್ರಸ್ತಾವನೆಯನ್ನು ಮರುಪರಿಶೀಲಿಸಬೇಕು.

 

ಇನ್ನೊಂದೆಡೆ, ರಾಜ್ಯದ ಕಬ್ಬು ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಸೂಕ್ತ ಮತ್ತು ನ್ಯಾಯಯುತ ಬೆಲೆ ದೊರೆಯದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕಬ್ಬು ಕಟಾವು, ಸಾಗಣೆ ವೆಚ್ಚ ಹಾಗೂ ಉತ್ಪಾದನಾ ವೆಚ್ಚಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ರೈತರಿಗೆ ಲಾಭದಾಯಕ ಬೆಲೆ ದೊರೆಯುವುದು ಅತ್ಯಗತ್ಯ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಬಾಕಿ ಹಣವನ್ನು ವಿಳಂಬವಿಲ್ಲದೆ ಪಾವತಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ರೈತರ ಉತ್ಪಾದನಾ ವೆಚ್ಚ ಮತ್ತು ಅವರ ಶ್ರಮಕ್ಕೆ ತಕ್ಕಂತೆ ನ್ಯಾಯಯುತ ಬೆಲೆ ನಿಗದಿಪಡಿಸಿ, ಕಬ್ಬು ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸಬೇಕು.

 

ಅದೇ ರೀತಿ, ರಾಜ್ಯದ ವಿವಿಧ ಭಾಗಗಳಲ್ಲಿ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟ, ನೀರಿನ ಕೊರತೆ, ಜಾನುವಾರುಗಳ ಮೇವಿನ ಸಮಸ್ಯೆ ಮತ್ತು ಕೃಷಿ ಸಾಲದ ಹೊರೆ ರೈತರನ್ನು ಕಾಡುತ್ತಿದೆ. ಬರಪೀಡಿತ ಪ್ರದೇಶಗಳ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡದೆ ತಕ್ಷಣ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಬೇಕು.

 

ಸರ್ಕಾರವು ಬೆಲೆ ಏರಿಕೆ ಮತ್ತು ಆದಾಯದ ಕುಸಿತದಿಂದ ಸಂಕಷ್ಟದಲ್ಲಿರುವ ಜನರ ಬದುಕಿನ ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳಬೇಕು. ಒಂದೆಡೆ ಜನಸಾಮಾನ್ಯರ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಹೊರೆ ಬೀಳುತ್ತಿದ್ದರೆ, ಮತ್ತೊಂದೆಡೆ ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ಮತ್ತು ಬರ ಪರಿಹಾರಕ್ಕಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರದ ಆದ್ಯತೆ ಜನರ ಮೇಲೆ ಆರ್ಥಿಕ ಹೊರೆ ಹೇರುವುದಾಗಿರದೆ, ರೈತರು, ಕಾರ್ಮಿಕರು, ಬಡವರು ಮತ್ತು ಮಧ್ಯಮ ವರ್ಗದವರ ಬದುಕಿಗೆ ಭದ್ರತೆ ಒದಗಿಸುವುದಾಗಿರಬೇಕು.

 

ಆದ್ದರಿಂದ ರಾಜ್ಯ ಸರ್ಕಾರವು ಹಾಲಿನ ದರ ಏರಿಕೆಯನ್ನು ಮರುಪರಿಶೀಲಿಸಿ, ಬಸ್ ಪ್ರಯಾಣ ದರ ಹೆಚ್ಚಳದ ನಿರ್ಧಾರವನ್ನು ಕೈಬಿಡಬೇಕು. ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ಹಾಗೂ ಬಾಕಿ ಹಣವನ್ನು ಖಾತರಿಪಡಿಸುವುದರ ಜೊತೆಗೆ ಬರಪೀಡಿತ ಪ್ರದೇಶಗಳ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.

Editor

Leave a comment