ಕರುನಾಡು ಘರ್ಜನೆ ಸುದ್ದಿ ಗದಗ ನವೆಂಬರ್ 3: ಕರ್ನಾಟಕ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ನವೆಂಬರ್ 5 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.
ನವೆAಬರ್ 5 ರಂದು ಬೆಳಿಗ್ಗೆ 7.30 ಗಂಟೆಗೆ ಹುಬ್ಬಳ್ಳಿ ಏರಪೋರ್ಟದಿಂದ ರಸ್ತೆ ಮೂಲಕ ಹೊರಟು ರೋಣಕ್ಕೆ ಆಗಮಿಸುವರು. ಬೆಳಿಗ್ಗೆ 10.30 ಗಂಟೆಗೆ ರೋಣದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಗದುಗಿಗೆ ಆಗಮಿಸಿ ತಪಾಸಣೆ ನಡೆಸುವರು. ಮಧ್ಯಾಹ್ನ 2.30 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ನಂತರ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುವರು. ಸಂಜೆ 5 ಗಂಟೆಗೆ ಗದುಗಿನಿಂದ ಕೊಪ್ಪಳಕ್ಕೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.