ಕರುನಾಡು ಘರ್ಜನೆ ಸುದ್ದಿ: ಬಾಗಲಕೋಟೆ ಮೃತಪಟ್ಟಿದೆ ಎಂದು ಭಾವಿಸಲಾದ ಮಗುವೊಂದು ಅಂತ್ಯ ಸಂಸ್ಕಾರದ ಸಿದ್ಧತೆ ವೇಳೆ ಕೆಮ್ಮಿದ ವಿಚಿತ್ರ ವಿದ್ಯಮಾನ ಬಾಗಲಕೋಟೆಯ ಇಳಕಲ್ನಲ್ಲಿ ನಡೆದಿದೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಪೋಷಕರು ಹಾಗೂ ಸಂಬಂಧಿಕರು ಹೇಳುತ್ತಿದ್ದಾರೆ. ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು, ಅಷ್ಟರಲ್ಲಿ ಮಗು ಕೆಮ್ಮಿದ ವಿಚಿತ್ರ ವಿದ್ಯಮಾನ ಬಾಗಲಕೋಟೆ (Bagalkot) ಜಿಲ್ಲೆಯ ಇಳಕಲ್ನಲ್ಲಿ (Ilakal) ಗುರುವಾರ ಸಂಜೆ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಉಸಿರಾಟ ತೊಂದರೆ, ಹೃದಯ ಸಂಬಂಧಿ ಖಾಯಿಲೆ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿತ್ತು. ಹುಟ್ಟಿದಾಗಿನಿಂದ ಮಗು ಸಮಸ್ಯೆ ಎದುರಿಸುತ್ತಿತ್ತು. ಕಳೆದ ನಾಲ್ಕು ದಿನಗಳಿಂದ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ಮಗುವನ್ನು ಪೋಷಕರು ಆಸ್ಪತ್ರೆಯಿಂದ ವಾಪಸ್ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು.ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. ಸಂಬಂಧಿಕರೆಲ್ಲ ಮನೆಗೆ ಆಗಮಿಸಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಲಾಗುತ್ತಿತ್ತು. ಅಷ್ಟರಲ್ಲಿ ಮಗು ಕೆಮ್ಮಿದೆ.ಸತ್ತ ಮಗು ಪುನಃ ಬದುಕಿದೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಪೋಷಕರು ಹಾಗೂ ಸಂಬಂಧಿಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಇದು ಮುರ್ತುಜಾ ಖಾದ್ರಿ ಪವಾಡ ಎಂದು ಪೋಷಕರು ಹಾಗೂ ಸಂಬಂಧಿಕರು ಹೇಳುತ್ತಿದ್ದಾರೆ. ಸತ್ತ ಮಗು ಪುನಃ ಬದುಕಿದೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಪೋಷಕರು ಹಾಗೂ ಸಂಬಂಧಿಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.