Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಆದೇಶ

ಕರುನಾಡು ಘರ್ಜನೆ ಸುದ್ದಿ ಗದಗ ಮೇ.30: ಜೂನ್ 4 ರಂದು ಮತ ಏಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 3, 2024 ರ ಸಾಯಂಕಾಲ 6 ಗಂಟೆಯಿಂದ ಜೂನ್ 5, 2024…

ಕರುನಾಡು ಘರ್ಜನೆ ಸುದ್ದಿ ಗದಗ ಮೇ.30: ಜೂನ್ 4 ರಂದು ಮತ ಏಣಿಕೆ ಕಾರ್ಯವು ಮುಕ್ತವಾಗಿ ಮತ್ತು ಶಾಂತಿಯುತವಾಗಿ ಜರುಗುವ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 3, 2024 ರ ಸಾಯಂಕಾಲ 6 ಗಂಟೆಯಿಂದ ಜೂನ್ 5, 2024 ರ ಬೆಳಿಗ್ಗೆ 6 ಗಂಟೆಯವರೆಗೆ ಗದಗ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಆದೇಶ ಹೊರಡಿಸಿದ್ದಾರೆ.

 

ಜಿಲ್ಲೆಯಾದ್ಯಂತ ಗೆದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರ ಕಾರ್ಯಕರ್ತರು, ಬೆಂಬಲಿಗರು ವಿಜಯೋತ್ಸವ, ಮೆರವಣಿಗೆ ಮಾಡುವುದರಿಂದ ಸೋತ ಅಭ್ಯರ್ಥಿಗಳಿಗೆ ಹಾಗೂ ಅವರ ಪಕ್ಷಗಳ ಮುಖಂಡರಿಗೆ, ಕಾರ್ಯಕರ್ತರಿಗೆ ವಿವಿಧ ರೀತಿಯ ಮನಸ್ಥಾಪಗಳು ಉಂಟಾಗಿ ಈ ಸಮಯದಲ್ಲಿ ಪರಾಭವಗೊಂಡ ಅಭ್ಯರ್ಥಿಗಳು ಮತ್ತು ವಿಜೇತರಾದ ಅಭ್ಯರ್ಥಿ ಹಾಗೂ ಬೆಂಬಲಿಗರ ನಡುವೆ ಸಂಘರ್ಷ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಘೋಷಿಸುವುದು ಅವಶ್ಯಕವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

 

ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದನ್ನು ನಿಷೇಧಿಸಿದೆ. ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಭೆ ಸಮಾರಂಭ ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿಗಳ ಬಗ್ಗೆ ಪ್ರಚೋದನಾತ್ಮಕವಾಗಿ ತೇಜೋವಧೆ ಮಾಡುವಂತಹ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಶವ ಸಂಸ್ಕಾರ ಮದುವೆ ಹಾಗೂ ಧಾರ್ಮಿಕ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ. ಪೋಲೀಸ್ ಅಧೀಕ್ಷಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಯಲ್ಲಿ ತರಬೇಕು. ಆರಕ್ಷಕ ಅಧೀಕ್ಷಕರು, ಗದಗ ಇವರು ಈ ಆದೇಶವನ್ನು ಪರಿಣಾಮಕಾರಿಯಾಗಿ ಜ್ಯಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಬಂಧಕಾಜ್ಞೆ ಆದೇಶದಲ್ಲಿ ಜಿಲ್ಲಾಧಿಕಾರಿಗಳು  ತಿಳಿಸಿದ್ದಾರೆ.

Editor

Leave a comment