Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರ ಜಿಲ್ಲಾ ಪ್ರವಾಸ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್1: ರಾಜ್ಯ ಸರ್ಕಾರದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಕಾರ್ಯಕ್ರಮಗಳ ವಿವರ ಕೆಳಗಿನಂತಿದೆ.   ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 13…

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್1: ರಾಜ್ಯ ಸರ್ಕಾರದ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಕಾರ್ಯಕ್ರಮಗಳ ವಿವರ ಕೆಳಗಿನಂತಿದೆ.

 

ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 13 ರಂದು ಹುಬ್ಬಳ್ಳಿಯಿಂದ ರಾತ್ರಿ 8.30 ಗಂಟೆಗೆ ಗದುಗಿಗೆ ಆಗಮಿಸಿ ವಾಸ್ತವ್ಯ ಮಾಡುವರು. ಜೂನ್ 14 ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಹಾಗೂ ಮನವಿಗಳನ್ನು ಸ್ವೀಕರಿಸುವರು. ಸಂಜೆ 5.30 ರಿಂದ ಸಂಜೆ 6.30 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತು ವಿವಿಧ ಇಲಾಖೆಗಳೊಂದಿಗೆ ಆಯೋಜಿಸಲಾದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗದಗದಲ್ಲಿ ವಾಸ್ತವ್ಯ ಮಾಡುವರು.

 

ಜೂನ್ 15 ರಂದು ಬೆಳಿಗ್ಗೆ 9.45 ರಿಂದ 10.45 ಗಂಟೆಯವರೆಗೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿನ ಗದಗ ಬಾರ್ ಅಸೋಸಿಯೇಷನ್ ಹಾಲ್‍ದಲ್ಲಿ ಸಾರ್ವಜನಿಕ ಆಡಳಿತದಲ್ಲಿ ವಕೀಲರ ಪಾತ್ರ ಕುರಿತು ಬಾರ್ ಅಸೋಷಿಯೇಷನ್ ಸದಸ್ಯರೊಂದಿಗೆ ಸಂವಾದ ನಡೆಸುವರು. ಬೆಳಿಗ್ಗೆ 11 ರಿಂದ 11.30 ರವರೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಹಾಗೂ ಬಾಕಿ ಉಳಿದ ಪ್ರಕರಣಗಳ ಕುರಿತು ಸಭೆ ನಡೆಸುವರು. ಬೆಳಿಗ್ಗೆ 11.30 ರಿಂದ ಬಾಕಿ ಉಳಿದ ಪ್ರಕರಣಗಳ ಕುರಿತು ಸಭೆ ಜರುಗಿಸಿ ಗದಗನಲ್ಲಿ ವಾಸ್ತವ್ಯ ಮಾಡುವರು.

 

ಜೂನ್ 16 ರಂದು ಬೆಳಿಗ್ಗೆ 10 ರಿಂದ 11 ರವರೆಗೆ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನ್ಯಾಯಾಲಯದ ಅಧಿಕಾರಿಗಳೊಂದಿಗೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆಯ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಪಾತ್ರ ವಿಷಯಗಳ ಕುರಿತು ಸಭೆ ಹಾಗೂ ಸಂವಾದ ನಡೆಸುವರು. ನಂತರ 11.15 ರಿಂದ 12.30 ರವರೆಗೆ ಲೋಕಾಯುಕ್ತ ಪೊಲೀಸ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಯಿಂದ ವಿವಿಧ ಇಲಾಖೆಗಳಿಗೆ ಅನಿರೀಕ್ಷಿತ ಭೇಟಿ ನೀಡುವರು. ಸಂಜೆ 7.30 ಗಂಟೆಗೆ ಗದಗನಿಂದ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಲೋಕಾಯುಕ್ತ ಕಚೇರಿಯ ರೆಜಿಸ್ಟ್ರಾರ್ ಉಷಾರಾಣಿ ತಿಳಿಸಿದ್ದಾರೆ.

Editor

Leave a comment