Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಉಪಲೋಕಾಯುಕ್ತರ ಜಿಲ್ಲಾ ಪ್ರವಾಸ :  ಅಹವಾಲು ಸ್ವೀಕಾರ ಕಾರ್ಯಕ್ರಮ

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 5:  ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.  ಜೂನ್ 14 ರಂದು ಬೆ 10 ರಿಂದ ಮ. 1.30…

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 5:  ಉಪ ಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.  ಜೂನ್ 14 ರಂದು ಬೆ 10 ರಿಂದ ಮ. 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ/ ನೌಕರರಿಂದ ಕಾನೂನು ರೀತ್ಯ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು  ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.

 

ಜೂನ್ 15 ರಂದು ಬೆ.10 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 5 ರವರೆಗೆ ಜಿ.ಪಂ. ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯ ವಿಚಾರಣೆ ನಡೆಸುತ್ತಾರೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಲೋಕಾಯುಕ್ತ ಕಚೇರಿಯ ಉಪ ಪೊಲೀಸ ಅಧೀಕ್ಷಕರಾದ ವಿಜಯ ಬಿರಾದಾರ  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment