Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಜಿ.ಪಂ.ಸಭಾಂಗಣದಲ್ಲಿ ಉಪಲೋಕಾಯುಕ್ತರಿಂದ ಬಾಕಿ ಪ್ರಕರಣಗಳ ವಿಚಾರಣೆ

ಕರುನಾಡು ಘರ್ಜನೆ ಸುದ್ದಿ ಗದಗ  : ಜೂನ್ 15: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು. ಉಪಲೋಕಾಯುಕ್ತರಾದ ನ್ಯಾಯಮೂರ್ತಿ…

ಕರುನಾಡು ಘರ್ಜನೆ ಸುದ್ದಿ ಗದಗ  : ಜೂನ್ 15: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸಾರ್ವಜನಿಕ ಅಹವಾಲು, ಕುಂದುಕೊರತೆ ಮರು ವಿಚಾರಣೆ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾದ ಪ್ರಕರಣಗಳ ಕುರಿತು ವಿಚಾರಣೆ ನಡೆಸಿದರು.

ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಾರ್ವಜನಿಕರ ಬಾಕಿ ಪ್ರಕರಣಗಳ ವಿಲೇವಾರಿ ಮತ್ತು ವಿಚಾರಣೆ ನಡೆಸಿದರು.

ಮುಳಗುಂದದ ವಿರುಪಾಕ್ಷಪ್ಪ ಅಕ್ಕಿ ಅವರು ತಮ್ಮ ಮನೆಯ ಹಿಂದೆ ಇರುವ ಸರ್ಕಾರಿ ರಸ್ತೆ ಒತ್ತುವರಿ ಕುರಿತು ದೂರು ಸಲ್ಲಿಸಿದ್ದು ವಿಚಾರಣೆ ಕೈಗೆತ್ತಿಕೊಂಡ ಲೋಕಾಯುಕ್ತರು ಅಧಿಕಾರಿಗಳಿಂದ ಪ್ರಕರಣ ಕುರಿತು ವಿವರಣೆ ಪಡೆದರು. ಅಧಿಕಾರಿಗಳು ರಸ್ತೆಯ ಒತ್ತುವರಿ ತೆರವುಗೊಳಿಸಿದ್ದರ ಕುರಿತು ತಿಳಿಸಿದ್ದು ಪ್ರಕರಣ ಮುಕ್ತಾಯಗೊಳಿಸಲಾಯಿತು.
ಗದಗನ ಹನುಮಂತಪ್ಪ ಚಲವಾದಿ ಅವರು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರ ಕಾರ್ಯಾಲಯಕ್ಕೆ ನಗರಸಭೆಯ ವ್ಯಾಪ್ತಿಯ ಸರ್ವೇ ಉತಾರದ ಕುರಿತು ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೋರಿದ್ದು ಅವರು ನೀಡಿದ ಮಾಹಿತಿ ಸುಳ್ಳು ಎಂದು ಆರೋಪಿಸಿ ಪ್ರಕರಣ ದಾಖಲಾಗಿಸಲಾಗಿದೆ. ಈ ಕುರಿತು ಅರ್ಜಿದಾರರು ಮಾಹಿತಿ ಹಕ್ಕಿನಡಿ ಸಂಬಂಧಿಸಿದವರಿಗೆ ಮೇಲ್ಮನವಿ ಸಲ್ಲಿಸುವುದರ ಮೂಲಕ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿ ಅವರ ಪ್ರಕರಣ ವಜಾಗೊಳಿಸಲಾಯಿತು.

ಶಾಂತಗಿರಿಯ ಮಲ್ಲೇಶಪ್ಪ ಅವರು ಜೀವಂತವಿದ್ದರೂ ಸಹಿತ ಗ್ರಾಮ ಲೆಕ್ಕಾಧಿಕಾರಿಗಳು ಸುಳ್ಳು ಮರಣ ಪ್ರಮಾಣ ಪತ್ರ ನೀಡಿರುತ್ತಾರೆಂದು ದೂರು ನೀಡಿದ್ದು ಜನತಾ ದರ್ಶನ ಪ್ರಾರಂಭವಾದ ಮೇಲೆ ಅವರ ಪಿಂಚಣಿ ಮಂಜೂರಾತಿ ಮಾಡಲಾಗಿದೆ. ಈ ಕುರಿತು ಸೂಕ್ತ ಸಾಕ್ಷಾಧಾರಗಳನ್ನು ಅವರು ಒದಗಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸದರಿ ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ನಿವೇಶನ ಹಂಚಿಕೆ, ನಿವೃತ್ತಿ ನಂತರ ಪಿಂಚಣಿ ನಿಗದಿ ,ಶಾಲಾ ಆಟದ ಮೈದಾನದ ಒತ್ತುವರಿ, ಬೆಳೆ ಪರಿಹಾರ, ಕೆರೆ ಒತ್ತುವರಿ, ವೇತನ ಸ್ಥಗಿತ ಹೀಗೆ ಹಲವು ರೀತಿಯ ಪ್ರಕರಣಗಳ ವಿಚಾರಣೆ ನಡೆಸಿ ಹಲವು ಪ್ರಕರಣಗಳಿಗೆ ಸ್ಥಳದಲ್ಲಿಯೇ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್,, ಸಂಪನ್ಮೂಲ ಅಧಿಕಾರಿ ಪ್ರಕಾಶ ನಾಡಗೇರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಜಿ.ಎಸ್.ಪಲ್ಲೇದ, ಲೋಕಾಯುಕ್ತ ಪೊಲೀಸ ಅಧೀಕ್ಷಕರಾದ ಸತೀಶ ಚಿಟಗುಬ್ಬಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Editor

Leave a comment