Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಭ್ರೂಣ ಲಿಂಗ ಪತ್ತೆ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ ಬಹುಮಾನ ಘೋಷಣೆ!

ಕರುನಾಡು ಘರ್ಜನೆ ಸುದ್ದಿ :ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ ಈ ಮೊತ್ತವನ್ನು…

ಕರುನಾಡು ಘರ್ಜನೆ ಸುದ್ದಿ :ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ ಈ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ಈ ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಹತ್ಯೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಈ ಯೋಜನೆಯನ್ನು ರೂಪಿಸಿದೆ.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿದ್ದರೆ ಇದರ ಬಗ್ಗೆ ಜನರು ಇಲಾಖೆಗೆ ಸುಳಿವು ನೀಡಬಹುದು. ಸುಳಿವು ನೀಡಿದವರಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಹಾಗೆಯೇ ಸುಳಿವು ನೀಡಿದವರ ಮಾಹಿತಿಯೂ ಕೂಡಾ ಗೌಪ್ಯವಾಗಿರಿಸಲಾಗುತ್ತದೆ ಎಂದು ಈ ಹಿಂದೆಯೇ ಆರೋಗ್ಯ ಇಲಾಖೆ ತಿಳಿಸಿದೆ.

ಇನ್ನು ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ (ಪಿಪಿಪಿಎನ್‌ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುಪ್ತ ಕಾರ್ಯಾಚರಣೆಯು ಯಶಸ್ವಿಯಾದರೆ ಈ ಬಗ್ಗೆ ಮಾಹಿತಿ ನೀಡಿದವರಿಗೆ ಈ ಬಹುಮಾನವನ್ನು ನೀಡಲಾಗುತ್ತದೆ.

ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನದಲ್ಲಿ 50 ಸಾವಿ ರೂಪಾಯಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮತ್ತು ಇನ್ನುಳಿದ 50 ಸಾವಿರ ರೂಪಾಯಿ ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಪಿಪಿಎನ್‌ಡಿಟಿ ಶುಲ್ಕದಿಂದ ಭರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದ ತಂಡವೊಂದನ್ನು ಕಳೆದ ಅಕ್ಟೋಬರ್​ನಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವಿರೇಶ್ ಎಂಬ ನಾಲ್ವರನ್ನು ಬಂಧಿಸಲಾಗಿದೆ.

ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿ ಇರುವ ಆಲೆಮನೆಯಲ್ಲಿ ಕೂಡ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಮಾಡುವುದು ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಬೆಳಗಾವಿಯಲ್ಲಿ ಕೂಡ ಮಕ್ಕಳ ಮಾರಾಟ ಮತ್ತು ಭ್ರೂಣ ಹತ್ಯೆ ಮಾಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು.

Editor

Leave a comment