Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಂಗಳೂರು ಕಟ್ಟುವಲ್ಲಿ ಕೆಂಪೇಗೌಡರ ಪಾತ್ರ ಮಹತ್ವದ್ದು :  ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 27: ಬೆಂಗಳೂರು ನಗರವನ್ನು ಅರ್ಥಪೂರ್ಣವಾಗಿ ಕಟ್ಟುವಲ್ಲಿ ಕೆಂಪೇಗೌಡರ ಕೊಡುಗೆ ಬಹಳ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಗುರುವಾರ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ…

ಕರುನಾಡು ಘರ್ಜನೆ ಸುದ್ದಿ ಗದಗ  ಜೂನ್ 27: ಬೆಂಗಳೂರು ನಗರವನ್ನು ಅರ್ಥಪೂರ್ಣವಾಗಿ ಕಟ್ಟುವಲ್ಲಿ ಕೆಂಪೇಗೌಡರ ಕೊಡುಗೆ ಬಹಳ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಗುರುವಾರ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ಸುಭದ್ರವಾದ ಬೆಂಗಳೂರು ನಿರ್ಮಾಣದ ಜೊತೆಯಲ್ಲಿಯೇ ಜನಪರ ಕಾರ್ಯಗಳನ್ನು ಕೈಗೊಂಡರು ಎಂದರು.

 

ಬಾಲ್ಯದಲ್ಲಯೇ ಚುರುಕಾಗಿದ್ದ ಕೆಂಪೇಗೌಡ ಅವರು ಗುರುಕುಲದಲ್ಲಿ ಸಾಮಾನ್ಯ ಶಿಕ್ಷಣದ ಜೊತೆಗೆ ರಾಜನೀತಿ, ಆರ್ಥಿಕ ತಿಳುವಳಿಕೆ, ಕುಸ್ತಿ, ಯುದ್ದ ಕಲೆಗಳನ್ನು ಕಲಿತಿದ್ದರು. ವಿಜಯನಗರದ ಧಾರ್ಮಿಕ ಮತ್ತು ಸಾಂಸ್ಕøತಿಕ ಸಿರಿಯನ್ನು ಕಣ್ಣಾರೆ ಕಂಡಿದ್ದ ಕೆಂಪೇಗೌಡರಿಗೆ ಎಲ್ಲ ವೈಭವಗಳನ್ನು ಪುನರ್ ಪ್ರತಿಷ್ಟಾಪಿಸುವ ಬಯಕೆ ಇತ್ತು. ಅವರು ರಾಜಧಾನಿ ಕಟ್ಟಿದ ನಂತರ ಅಲ್ಲಿ 4 ಮಹಾದ್ವಾರಗಳನ್ನು ರಚಿಸಿದರು. ವ್ಯಾಪಾರಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು ಅವರ ವೃತ್ತಿಗಳಿಗನುಸಾರವಾಗಿ ಅಕ್ಕಿಪೇಟೆ, ರಾಗಿ ಪೇಟೆ, ಕುಂಬಾರ ಪೇಟೆ, ಉಪ್ಪಾರ ಪೇಟೆ, ಬಳೆ ಪೇಟೆ ಹೀಗೆ ಅನೇಕ ಪೇಟೆಗಳನ್ನು ನಿರ್ಮಿಸಿಕೊಟ್ಟರು ಎಂದು ತಿಳಿಸಿದರು.

 

ನಾಡಪ್ರಭು ಕೆಂಪೇಗೌಡರು ಉತ್ತಮ ಕೃಷಿ ಚಟುವಟಿಕೆಗಳಿಗೆ ಹಾಗೂ ಗೃಹ ಬಳಕೆಗಾಗಿ ವಿವಿಧ ಕೆರೆಗಳನ್ನು ಕಟ್ಟಿಸಿದರು. ಧಾರ್ಮಿಕ ಪ್ರತೀಕವಾಗಿ ದೇವಸ್ಥಾನಗಳನ್ನು ಕಟ್ಟಿಸಿದರು. ವಿವಿಧ ಉದ್ಯಾನವನಗಳನ್ನು ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಬೆಂಗಳೂರನ್ನು ಜಾಗತಿಕವಾಗಿ ಗುರುತಿಸಲು ಕೆಂಪೇಗೌಡರ ಕೊಡುಗೆಯು ಅವಿಸ್ಮರಣೀಯವಾಗಿದ್ದು ಎಂದರು.

 

ನಾಡಪ್ರಭು ಕೆಂಪೇಗೌಡ ಅವರ ಸಾಧನೆಗಳನ್ನು ಮೆಲುಕು ಹಾಕುವುದು ಇಂದಿನ ಅವಶ್ಯಕತೆಯಾಗಿದೆ. ಅವರ ಆದರ್ಶಗಳು ಇಂದು ಎಲ್ಲರಿಗೂ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಹೇಳಿದರು.

 

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.

Editor

Leave a comment