Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜ್ಯ

ಪಡಿತರ ಚೀಟಿ ಅರ್ಜಿ ಆಹ್ವಾನ್ ಜೂನ್ 2.3 ರಂದು ಕೊನೆಯ ದಿನಾಂಕ್.

ಕರುನಾಡು.ಘರ್ಜನೆ ಸುದ್ದಿ :ಬೆಂಗಳೂರು: ಹೊಸ  ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಲಿಗೆ, ಜು. 2 ಹಾಗೂ 3ರಂದು ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹಾಗಾಗಿ, ಜು. 3ರಂದೇ ಕಡೆ ದಿನವಾಗಿದೆ. ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿದ್ದು ಕರ್ನಾಟಕ ಆಹಾರ…

ಕರುನಾಡು.ಘರ್ಜನೆ ಸುದ್ದಿ :ಬೆಂಗಳೂರು: ಹೊಸ  ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಲಿಗೆ, ಜು. 2 ಹಾಗೂ 3ರಂದು ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಹಾಗಾಗಿ, ಜು. 3ರಂದೇ ಕಡೆ ದಿನವಾಗಿದೆ. ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿದ್ದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಮುಂತಾದ ಕಡೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.ಅಷ್ಟೇ ಅಲ್ಲದೆ, ರೇಷನ್ ಕಾರ್ಡ್ ನಲ್ಲಿ ಹೆಸರುಗಳನ್ನು ಸೇರಿಸುವುದು, ಹೆಸರು ತಿದ್ದುಪಡಿ ಮಾಡುವುದು ಹಾಗೂ ಇತ್ಯಾದಿ ಕೆಲಸಗಳನ್ನು ಮಾಡಲೂ ಅವಕಾಶ ಕಲ್ಪಿಸಲಾಗಿದ್ದು, ಅದಕ್ಕೂ ಜು. 3ರಂದೇ ಕಡೆಯ ದಿನವಾಗಿರುತ್ತದೆ. ಕುಟುಂಬದ ಸದಸ್ಯರ ಹೆಸರು ಸೇರಿಸುವುದು, ಡಿಲೀಟ್ ಮಾಡುವುದು, ಮೊಬೈಲ್ ನಂಬರ್ ಸೇರ್ಪಡೆ ಅಥವಾ ಬದಲಾವಣೆ, ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಇತ್ಯಾದಿ ಕೆಲಸಗಳನ್ನು

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು ಯಾವುವು?

  1. ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  2. ಆದಾಯ ಪ್ರಮಾಣ ಪತ್ರ
  3. ಜಾತಿ ಪ್ರಮಾಣ ಪತ್ರ
  4. ವಿಳಾಸದ ಪುರಾವೆ
  5. ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)
  6. ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವವರಿಗೂ ಕಾರ್ಡ್ ಬೇಕು!

ಕುಟುಂಬ ಯಜಮಾನಿಗೆ ಮಾಸಿಕವಾಗಿ 2 ಸಾವಿರ ರೂ. ನೀಡುತ್ತಿರುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಕಡ್ಡಾಯ. ಅನೇಕ ಹೆಂಗಳೆಯರು, ತಾವು ರೇಷನ್ ಕಾರ್ಡ್ ಮಾಡಿಸದ ಕಾರಣಕ್ಕಾಗಿ ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿದ್ದಾರೆ. ಇನ್ನೂ ಕೆಲವರು ರೇಷನ್ ಕಾರ್ಡಿನಲ್ಲಿ ತಮ್ಮ ಹೆಸರು ಇಲ್ಲದ್ದಕ್ಕೆ ಅಥವಾ ರೇಷನ್ ಕಾರ್ಡ್ ನಲ್ಲಿ ತಾವು ಮನೆಯೊಡತಿ ಎಂದು ನಮೂದಾಗದೇ ಇರುವುದರಿಂದ ಈ ಯೋಜನೆಯಿಂದ ವಂಚಿತರಾಗಿದ್ದಾರೆ. ಅಂಥ ಎಲ್ಲಾ ತಿದ್ದುಪಡಿಗೂ ಜು. 3ರಂದೇ ಕಡೆಯ ದಿನವಾಗಿರುತ್ತದೆ

Editor

Leave a comment