Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಡೆಂಗ್ಯೂ ಮುಂಜಾಗೃತಾ ಕ್ರಮ ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿ : ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

ಕರುನಾಡು ಘರ್ಜನೆ ಸುದ್ದಿ ಗದಗ : ಡೆಂಗ್ಯೂ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಡೆಂಗ್ಯೂ ಬಗ್ಗೆ ಮುಂಜಾಗೃತಾ ಕ್ರಮಗಳ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.…

ಕರುನಾಡು ಘರ್ಜನೆ ಸುದ್ದಿ ಗದಗ : ಡೆಂಗ್ಯೂ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುವ ರೋಗ. ಈ ಡೆಂಗ್ಯೂ ಬಗ್ಗೆ ಮುಂಜಾಗೃತಾ ಕ್ರಮಗಳ ಕೈಗೊಳ್ಳಲು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

 

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಜರುಗಿದ ಆರೋಗ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಸಾರ್ವಜನಿಕರು ಡೆಂಗ್ಯೂ ಜ್ವರದ ಕುರಿತು ಭಯ ಹಾಗೂ ಆತಂಕಕ್ಕೆ ಒಳಗಾಗದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಗ್ಯೂ ಜ್ವರದಿಂದ ಸಂರಕ್ಷಿಸಿಕೊಳ್ಳಬೇಕು. ಡೆಂಗ್ಯೂ ನಿಯಂತ್ರಣಕ್ಕಾಗಿ ನಮ್ಮ ಸುತ್ತಮುತ್ತಲಿನ  ಪರಿಸರ ಸ್ವಚ್ಛತೆವಾಗಿಟ್ಟುಕೊಳ್ಳುವುದು ಬಹುಮುಖ್ಯವಾಗಿದೆ. ಈ ಕುರಿತು ಎಲ್ಲ ಇಲಾಖೆ ಅಧಿಕಾರಿಗಳು ಜನಜಾಗೃತಿ ಮೂಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ಮುಂದಗಬೇಕು ಎಂದರು.

 

ಈಡಿಸ್ ಸೊಳ್ಳೆಗಳು ಮನೆಯಲ್ಲಿರುವ ನೀರು ಶೇಖರಣೆಯ ತೊಟ್ಟಿಗಳು, ಬ್ಯಾರಲ್ ಗಳು, ಡ್ರಮ್ ಗಳು, ಹೂವಿನ ಕುಂಡ ಮುಂತಾದವುಗಳಲ್ಲದೇ ಮನೆ ಸುತ್ತ ಮುತ್ತ ಬಯಲಲ್ಲಿ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಕಪ್ಪುಗಳು, ಟೈರ್‍ಗಳು, ಎಳೆನೀರಿನಿಂದ ಚಿಪ್ಪು ಮತ್ತು ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾದಾಗ ಉತ್ಪತ್ತಿಯಾಗುತ್ತವೆ‌ ಇವುಗಳ ಸಂಪೂರ್ಣ ನಿಯಂತ್ರಣ ಅರಿವು ಜನರಲ್ಲಿ ಮೂಡಿಸಬೇಕು ಎಂದು ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೂಚನೆ ನೀಡಿದರು.

 

*ನಿರ್ಲಕ್ಷ್ಯ ಬೇಡ :* ಎರಡನೇ ಬಾರಿ ಡೆಂಗ್ಯೂ ಬಾಧೆಗೆ ಒಳಗಾದವರು ಸ್ವಲ್ಪವೂ ನಿರ್ಲಕ್ಷ್ಯ ಮಾಡಬಾರದು. ಯಾಕೆಂದರೆ ಅದು ತೀವ್ರ ಸ್ವರೂಪಕ್ಕೆ ಹೋಗುವ ಸಾಧ್ಯತೆಗಳು ಅಧಿಕವಾಗಿದೆ. ತಕ್ಷಣ ಚಿಕಿತ್ಸೆ ಪಡೆದು ಆರೋಗ್ಯ ಸಂರಕ್ಷಣೆ ಮಾಡಿಕೊಳ್ಳಬೇಕು ಎಂಬುದನ್ನು ಸಹ ಜನಸಾಮಾನ್ಯರಿಗೆ ಅರಿವು ಮೂಡಿಸುವದನ್ನು ಮರೆಯಬಾರದು ಎಂದು ಹೇಳಿದರು.

 

ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, ಸೊಳ್ಳೆಗಳ ಉತ್ಪತ್ತಿ ಸಂಪೂರ್ಣ ನಿಯಂತ್ರಿಸಬೇಕು. ಸೊಳ್ಳೆಗಳ ಸಂಭಾವ್ಯ ಸಂತಾನೋತ್ಪತ್ತಿ ಸ್ಥಳಗಳನ್ನು ನಾಶಪಡಿಸಲು ಎಲ್ಲರೂ‌ ಮೂಂದಾಗಬೇಕು. ನಿಂತ ನೀರು ಸೊಳ್ಳೆಗಳ ಉತ್ಪತ್ತಿಗೆ ಕಾರಣ. ನಿಂತ ನೀರನ್ನು ತೊಡೆದುಹಾಕಲು ಬ್ಯಾರಲ್‍ಗಳು, ಹೂದಾನಿಗಳು, ಬೇಸಿನ್‍ಗಳು  ಅಥವಾ ಕಪ್‍ಗಳು ಮತ್ತು ಬಳಕೆಯಾಗದ ಟಯರ್‍ಗಳು ಸೇರಿದಂತೆ ನಿಂತಿರುವ ನೀರಿನ ಎಲ್ಲ ಮೂಲಗಳನ್ನು ತೆರವುಗೊಳಿಸಿ ಸೊಳ್ಳೆ ನಿವಾರಕಗಳನ್ನು ಬಳಸಿ ಸಾರ್ವಜನಿಕರು ಡೆಂಗ್ಯೂ ನಿಯಂತ್ರಿಸಬೇಕು ಎಂದರು.

 

ಚರಂಡಿ ನಾಲೆಗಳಲ್ಲಿ ಕಸಕಡ್ಡಿಗಳನ್ನು ಎಸೆಯದೇ ನೀರು ಸರಾಗವಾಗಿ ಸಾಗುವಂತೆ ನೋಡಿಕೊಳ್ಳಬೇಕು. ಮನೆಯಲ್ಲಿರುವ ನೀರು ಸಂಗ್ರಹಣಾ ಪಾತ್ರೆಗಳು ಮತ್ತು ಡ್ರಮ್‍ಗಳನ್ನು ಸರಿಯಾದ ಮುಚ್ಚಳದಿಂದ ಮುಚ್ಚಿರಿ ಹಾಗೂ ದೊಡ್ಡ ತೊಟ್ಟಿಗಳನ್ನು ವಾರಕ್ಕೊಮ್ಮೆ ಸಂಪೂರ್ಣವಾಗಿ ಖಾಲಿ ಮಾಡಿ, ಸರಿಯಾಗಿ ಮುಚ್ಚಿರಿ ಅಥವಾ ಸೊಳ್ಳೆ ನಿಯಂತ್ರಣ ಜಾಲರಿಗಳನ್ನು ಅಳವಡಿಸಬೇಕು ಈ ಕುರಿತು ಅರಿವು ಮೂಡಿಸಿ ಎಂದು ನಿರ್ದೇಶಿಸಿದರು.

 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ ಮಾತನಾಡಿ, ತೀವ್ರ ಜ್ವರ, ತಲೆ ನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಉಂಟಾಗುವುದು ಡೆಂಗ್ಯೂ ಜ್ವರದ ಲಕ್ಷಣಗಳಾಗಿವೆ. ಜ್ವರದ ಲಕ್ಷಣಗಳೊಂದಿಗೆ ಬಾಯಿ , ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವದ, ಚರ್ಮದ ಮೇಲೆ ರಕ್ತಸ್ರಾವದ ಗುರುತುಗಳು, ಕಪ್ಪುಮಲ ವಿಸರ್ಜನೆ , ವಿಪರೀತ ಬಾಯಾರಿಕೆ ಅಥವಾ ಜ್ಞಾನ ತಪ್ಪುವುದು ಇವುಗಳು ಡೆಂಗ್ಯೂ ಶಾಕ್ ಸಿಂಡ್ರೋಮ್ ದ ಲಕ್ಷಣಗಳಾಗಿವೆ.

 

ಸಾರ್ವಜನಿಕರು ಯಾವುದೇ ಜ್ವರವಿದ್ದರೂ ಮೊದಲು ರಕ್ತ ಪರೀಕ್ಷೆ ಮಾಡಿಸಬೇಕು. ಸೊಳ್ಳೆಗಳ ನಾಶಕ್ಕೆ ಕೀಟನಾಶಕ ಸಿಂಪಡಿಸಲು ಬರುವ ಆರೋಗ್ಯ ಸಿಬ್ಬಂದಿಗೆ ನೆರವಾಗಿಗಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

 

ಮನೆಯ ಸುತ್ತಮುತ್ತ ಒಡೆದ ಡಬ್ಬ, ಟೈರು, ಎಳೆನೀರಿನ ಚಿಪ್ಪು ಮುಂತಾದ ಸಣ್ಣಸಣ್ಣ ಮೆಳೆ ನೀರು ಸಂಗ್ರಹಣೆಗೆ ಅವಕಾಶ ವಾಗುವಂತಹ ಯಾವುದೇ ವಸ್ತುಗಳನ್ನು ಎಸೆಯಬಾರದು. ಸಂಜೆ ಹೊತ್ತಿನಲ್ಲಿ ಆದಷ್ಟು ಮೈ ತುಂಬ ಬಟ್ಟೆ ಹೊದೆಯಿರಿ ಮತ್ತು ಮನೆಯ ಕಿಟಕಿ ಬಾಗಿಲುಗಳನ್ನು ಮುಚ್ಚಿರಿ ಏಕೆಂದರೆ ಈ ವೇಳೆಯಲ್ಲಿ ಸೊಳ್ಳೆಯ ಚಟುವಟಿಕೆಗಳು ಹೆಚ್ಚಿರುತ್ತವೆ. ಮನೆಯ ಎಲ್ಲ ಕಿಟಕಿ ಬಾಗಿಲುಗಳೀಗೆ ಕೀಟ ತಡೆಗಟ್ಟುವ ಜಾಲರಿಗಳನ್ನು ಅಳವಡಿಸಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ನೀರಿನ ಬಾವಿ, ಕಾರಂಜಿಗಳು, ಕಟ್ಟಡ ನಿರ್ಮಾಣಕ್ಕಾಗಿ ಸಂಗ್ರಹಿಸಿದ ನೀರು ಶೇಖರಣೆ, ಕೆರೆ , ಕುಂಟೆ ಹೊಂಡ , ಗದ್ದೆ ಜೌಗು ಪ್ರದೇಶದಲ್ಲಿ ಸೊಳ್ಳೆ ಮರಿಗಳನ್ನು ತಿನ್ನುವ ಗ್ಯಾಂಬೂಸಿಯಾ ಮತ್ತು ಗಪ್ಪಿಯೆಂಬ ಲಾರ್ವಾಹಾರಿ ಮೀನುಗಳನ್ನು ಬಿಟ್ಟು ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಬೇಕು ಎಂದರು.

 

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಜಿಲ್ಲೆಯಲ್ಲಿ ಜನೆವರಿಯಿಂದ ಇದುವರೆಗೆ 1479 ಡೆಂಗ್ಯು ಸಂಶಯಾಸ್ಪದ ಪ್ರಕರಣಗಳು ಕಂಡುಬಂದಿದ್ದು ಅದರಲ್ಲಿ 1102 ಪ್ರಕರಣಗಳನ್ನು ಪರೀಕ್ಷಿಸಲಾಗಿದ್ದು  70 ಡೆಂಗ್ಯು ಪ್ರಕರಣಗಳು ಖಚಿತಪಟ್ಟಿವೆ. 49 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 32 ಜನರಿಗೆ ಗದಗನ ಜಿಮ್ಸ್ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಜನ ಐಸಿಯುನಲ್ಲಿದ್ದಾರೆ. 2 ಜನರು ವೆಂಟಿಲೇಟರ್ ಇಡಲಾಗಿತ್ತು ಅವರು ಕೂಡ ಈಗ ವೆಂಟಿಲೇಟರ್ ದಿಂದ ಹೊರಬಂದಿದ್ದಾರೆ ಎಂದು ಮಾಹಿತಿ‌ ಒದಗಿಸಿದರು.

 

ಸಭೆಯಲ್ಲಿ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ‌‌ ಶಸ್ತ್ರಚಿಕಿತ್ಸಕ ಡಾ. ಬಿ.ಸಿ.ಕರೆಗೌಡ್ರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ನಗರಸಭೆ ಪೌರಾಯುಕ್ತ ಪ್ರಶಾಂತ ವರಗಪ್ಪನವರ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.

Editor

Leave a comment