ಕರುನಾಡು ಘರ್ಜನೆ ಸುದ್ದಿ ಕಲಘಟಗಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ 2 ಕಾಲುಗಳು ಕಟ್ ಆಗಿದ್ದು ನಾಲ್ವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.
ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.ಹುಬ್ಬಳ್ಳಿ ಕಡೆಯಿಂದ ಕುಮಟಾಗೆ ಹೋಗುತ್ತಿದ್ದ ಸರ್ಕಾರಿ ಬಸ್ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ರಾಮನಾಳ ಕ್ರಾಸ್ ಬಳಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆ ಬದಿಯ ಬೇವಿನ ಮರಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಇದರಿಂದ ಡ್ರೈವರ್ನ ಎರಡು ಕಾಲುಗಳು ಕಟ್ ಆಗಿದ್ದು ಸ್ಥಳವೆಲ್ಲ ರಕ್ತಸಿಕ್ತವಾಗಿದೆ. ಇನ್ನು ಬಸ್ ಮುಂಭಾಗವೆಲ್ಲ ನಜ್ಜುಗುಜ್ಜಾಗಿದೆ.ಇನ್ನು ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳು ಆಗಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮಾಹಿತಿ ತಿಳಿಯುತ್ತಿದ್ದಂತೆ.
ಸ್ಥಳಕ್ಕೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.